AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜ್ಜಿ ಚೆನ್ನಮ್ಮ ನಿಧನದ ಸುದ್ದಿ ಕೇಳಿ ಜೈಲಲ್ಲೇ ಕಣ್ಣೀರಿಟ್ಟ ಮಾಜಿ ಸಂಸದ ಪ್ರಜ್ವಲ್​​ ರೇವಣ್ಣ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಜ್ಜಿಯ ಅಗಲಿಕೆಯ ಸುದ್ದಿ ಕೇಳಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕಣ್ಣೀರು ಹಾಕಿದ್ದಾರೆ. ಅಜ್ಜಿಯನ್ನು ನೆನೆದು ಪ್ರಜ್ವಲ್​​ ಬಿಕ್ಕಿ ಬಿಕ್ಕಿ ಅತ್ತಿದ್ದು, ರಾತ್ರಿಯಿಡೀ ನಿದ್ದೆ ಮಾಡದೆ ಮೌನಕ್ಕೆ ಶರಣಾಗಿದ್ದಾರೆ ಎನ್ನಲಾಗಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯ ಸಮೀಪದ ಕ್ಯಾತನಹಳ್ಳಿ ಬಳಿ ಇರುವ ದೇವೇಗೌಡರ ಕುಟುಂಬಕ್ಕೆ ಸೇರಿದ ಜಮೀನಿನಲ್ಲಿ ಚೆನ್ನಮ್ಮನವರ ಅಂತ್ಯಕ್ರಿಯೆ ನಾಳೆ ಮಧ್ಯಾಹ್ನದ ವೇಳೆಗೆ ನಡೆಯಲಿದ್ದು, ಅಗತ್ಯ ಸಿದ್ಧತೆ ಆರಂಭವಾಗಿದೆ.

ಅಜ್ಜಿ ಚೆನ್ನಮ್ಮ ನಿಧನದ ಸುದ್ದಿ ಕೇಳಿ ಜೈಲಲ್ಲೇ ಕಣ್ಣೀರಿಟ್ಟ ಮಾಜಿ ಸಂಸದ ಪ್ರಜ್ವಲ್​​ ರೇವಣ್ಣ
ಅಜ್ಜಿ ಚೆನ್ನಮ್ಮ ನಿಧನದ ಸುದ್ದಿ ಕೇಳೆ ಜೈಲಲ್ಲೇ ಕಣ್ಣೀರಿಟ್ಟ ಪ್ರಜ್ವಲ್​​ ರೇವಣ್ಣImage Credit source: PTI
ರಾಮು, ಆನೇಕಲ್​
| Edited By: |

Updated on:Jul 19, 2026 | 8:55 AM

Share

ಮುಖ್ಯಾಂಶಗಳು

  • ಅಜ್ಜಿ ಚೆನ್ನಮ್ಮ ನಿಧನದ ಸುದ್ದಿ ಕೇಳಿ ಜೈಲಲ್ಲಿರುವ ಪ್ರಜ್ವಲ್​​ಗೆ ಆಘಾತ
  • ಭಾವುಕರಾಗಿ ಬಿಕ್ಕಿ ಬಿಕ್ಕಿ ಅತ್ತಿರುವ ಮಾಜಿ ಸಂಸದ ಪ್ರಜ್ವಲ್​​ ರೇವಣ್ಣ
  • ರಾತ್ರಿಯಿಡೀ ನಿದ್ದೆ ಮಾಡದೆ ಮೌನಕ್ಕೆ ಶರಣಾಗಿರುವ ಮಾಜಿ ಸಂಸದ

ಬೆಂಗಳೂರು, ಜುಲೈ 19: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ನಿಧದ ಹಿನ್ನೆಲೆ ಕುಟುಂಬಸ್ಥರಲ್ಲಿ ಶೋಕ ಮಡುಗಟ್ಟಿದೆ. ಈ ನಡುವೆ ಅಜ್ಜಿ ಮೃತಪಟ್ಟಿರುವ ಸುದ್ದಿ ಕೇಳಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕೂಡ ಕಣ್ಣೀರು ಹಾಕಿದ್ದಾರೆ. ಅಜ್ಜಿ ಚೆನ್ನಮ್ಮರ ಪ್ರೀತಿಯ ಮೊಮ್ಮಗನಾಗಿದ್ದರೂ ಆಕೆಯ ಕೊನೆ ಕಾಲದಲ್ಲಿ ಕನಿಷ್ಠ ಅವರ ಮುಖವನ್ನು ನೋಡಲೂ ಸಾಧ್ಯವಾಗದ ಕಾರಣ ಮಾಜಿ ಸಂಸದ ಭಾವುಕರಾಗಿದ್ದಾರೆ. ಅಜ್ಜಿಯನ್ನು ನೆನೆದು ಪ್ರಜ್ವಲ್​​ ಬಿಕ್ಕಿ ಬಿಕ್ಕಿ ಅತ್ತಿದ್ದು, ರಾತ್ರಿಯಿಡೀ ನಿದ್ದೆ ಮಾಡದೆ ಮೌನಕ್ಕೆ ಶರಣಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಸಕಲ ಸರ್ಕಾರಿ ಗೌರವದೊಂದಿಗೆ ನಾಳೆ ಚೆನ್ನಮ್ಮ ಅಂತ್ಯಕ್ರಿಯೆ; ಮಾವಿನ‌ಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತಿಮ ವಿಧಿ ವಿಧಾನ

ಚೆನ್ನಮ್ಮನವರ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯ ಸಮೀಪದ ಕ್ಯಾತನಹಳ್ಳಿ ಬಳಿ ಇರುವ ದೇವೇಗೌಡರ ಕುಟುಂಬಕ್ಕೆ ಸೇರಿದ ಜಮೀನಿನಲ್ಲಿ ಚೆನ್ನಮ್ಮನವರ ಅಂತ್ಯಕ್ರಿಯೆ ನಾಳೆ ಮಧ್ಯಾಹ್ನದ ವೇಳೆಗೆ ನಡೆಯಲಿದೆ. ಅಂತಿಮ ವಿಧಿ ವಿಧಾನ ನೆಯಲಿರುವ ಜಾಗದಲ್ಲಿ ನೆಲ ಸಮತಟ್ಟು ಮಾಡುವ ಜೊತೆಗೆ ಶಾಮಿಯಾನ ಹಾಗೂ ವಿದ್ಯುತ್ ವ್ಯವಸ್ಥೆ ಮಾಡಲಾಗಿದೆ. ಮೈಸೂರಿನಿಂದ 4 ಸಾವಿರ ಕುರ್ಚಿಗಳನ್ನು ತರಿಸಿ ಸ್ಥಳದಲ್ಲಿ ಹಾಕಲು ವ್ಯವಸ್ಥೆ ನಡೆಯುತ್ತಿದೆ. ಅಂತ್ಯಕ್ರಿಯೆಯಲ್ಲಿ ರಾಜ್ಯದ ವಿವಿಧ ಭಾಗದ ಜನಪ್ರತಿನಿಧಿಗಳು ಭಾಗಿ ಸಾಧ್ಯತೆ ಹಿನ್ನೆಲೆ ಅಗತ್ಯ ತಯಾರಿ ಶುರುವಾಗಿದೆ.

ಕೇಂದ್ರ ಸರ್ಕಾರದ ಪರವಾಗಿ ಅಂತಿಮ ನಮನ ಸಲ್ಲಿಸಲಿರುವ ಜೋಶಿ

ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಕೇಂದ್ರ ಸರ್ಕಾರದ ಪರವಾಗಿ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಅಂತಿಮ ನಮನ ಸಲ್ಲಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ದೇವೇಗೌಡರ ಪದ್ಮನಾಭನಗರದ ನಿವಾಸಕ್ಕೆ ಅವರು ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 8:13 am, Sun, 19 July 26

Follow Us
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?