AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್​ ರೇವಣ್ಣ ಬ್ಯಾರಕ್​ನಲ್ಲಿ ಮೊಬೈಲ್ ಪತ್ತೆ ಪ್ರಕರಣ ತನಿಖೆಗೆ ಡಿಐಜಿ ನೇತೃತ್ವದಲ್ಲಿ ತಂಡ ರಚನೆ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ (CCB) ನಡೆಸಿದ ದಾಳಿಯಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಫೋನ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆಗೆ ಕಾರಾಗೃಹ ಮತ್ತು ಸುಧಾರಣೆ ಇಲಾಖೆ ಡಿಐಜಿ ನೇತೃತ್ವದಲ್ಲು ತಂಡ ರಚಿಸಲಾಗಿದೆ. ಪ್ರಜ್ವಲ್ ರೇವಣ್ಣಗೆ ಫೋನ್ ತಂದು ಕೊಟ್ಟವರು ಯಾರು? ಎಷ್ಟು ದಿನಗಳಿಂದ ಮೊಬೈಲ್ ಬಳಕೆ ಮಾಡುತ್ತಿದ್ದಾನೆ? ಎಂಬ ಬಗ್ಗೆ ತನಿಖೆಗೆ ಸೂಚಿಸಲಾಗಿದೆ.

ಪ್ರಜ್ವಲ್​ ರೇವಣ್ಣ ಬ್ಯಾರಕ್​ನಲ್ಲಿ ಮೊಬೈಲ್ ಪತ್ತೆ ಪ್ರಕರಣ ತನಿಖೆಗೆ ಡಿಐಜಿ ನೇತೃತ್ವದಲ್ಲಿ ತಂಡ ರಚನೆ
ತನಿಖೆಗೆ ಡಿಐಜಿ ನೇತೃತ್ವದಲ್ಲಿ ತಂಡ ರಚನೆ Image Credit source: Tv9 Kannada
ರಾಚಪ್ಪಾಜಿ ನಾಯ್ಕ್
| Edited By: |

Updated on:Aug 13, 2026 | 12:20 PM

Share

ಮುಖ್ಯಾಂಶಗಳು

  • ಪ್ರಜ್ವಲ್​​ ಬ್ಯಾರಕ್​ನಲ್ಲಿ ಮೊಬೈಲ್ ಪತ್ತೆ ಪ್ರಕರಣ
  • ತನಿಖಾ ತಂಡ ರಚಿಸಿದ ಅಲೋಕ್ ಕುಮಾರ್
  • ಸಮಗ್ರ ತನಿಖೆ ನಡೆಸಿ ವರದಿ ನೀಡಲು ಸೂಚನೆ

ಬೆಂಗಳೂರು, ಆಗಸ್ಟ್​ 13: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ ವೇಳೆ ಪ್ರಜ್ವಲ್​ ರೇವಣ್ಣ ಬ್ಯಾರಕ್​ನಲ್ಲಿ ಮೊಬೈಲ್ ಪತ್ತೆ ಪ್ರಕರಣ ಸಂಬಂಧ ಜೈಲು ಅಧಿಕಾರಿಗಳ ನಿರ್ಲಕ್ಷ್ಯ ಇರೋದು ಸಾಬೀತು ಹಿನ್ನೆಲೆ ತನಿಖೆಗಾಗಿ ಕಾರಾಗೃಹ ಮತ್ತು ಸುಧಾರಣೆ ಇಲಾಖೆ ಡಿಐಜಿ ಜಿನೇಂದ್ರ ಖನಗಾವಿ ನೇತೃತ್ವದ ತಂಡ ರಚನೆ ಮಾಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನ ಬ್ಯಾರಕ್​ನಲ್ಲಿ ಮೊಬೈಲ್ ಹೇಗೆ ಬಂತು? ಎಂಬ ಬಗ್ಗೆ ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಸೂಚನೆ ನೀಡಿದ್ದಾರೆ. ಈ ಸಂಬಂಧ ಅಲೋಕ್ ಕುಮಾರ್ ಭೇಟಿಯಾಗಿ ಜಿನೇಂದ್ರ ಅವರು ಕೂಡ ಚರ್ಚೆ ನಡೆಸಿದ್ದಾರೆ.

ತನಿಖೆ ನಡೆಸಿ ವರದಿ ನೀಡಲು ಸೂಚನೆ

ಪರಪ್ಪನ ಅಗ್ರಹಾರ ಜೈಲಿನ ಸುತ್ತಮುತ್ತ ಜಾಮರ್ ಅಳವಡಿಸಲಾಗಿದ್ದು, ಸ್ಥಳೀಯರಿಗೆ ಟವರ್​ ಸಿಗದೆ ನಿತ್ಯ ಪರದಾಡುತ್ತಾರೆ. ಹೀಗಿರುವಾಗ ಜೈಲಿನ ಒಳಗೆ ಏರ್​ಟೆಲ್​​ ಕಂಪನಿಯ ಸಿಮ್ ಬಳಕೆಯಾಗುತ್ತಿದೆ. ಅದರಲ್ಲೂ ಆಂಧ್ರಪ್ರದೇಶದ ಏರ್​ಟೆಲ್​​​ ಸಿಮ್​​ಗಳು ಪತ್ತೆಯಾಗಿವೆ, ಈ ಬಗ್ಗೆ ಅನೇಕ ಬಾರಿ ಎಚ್ಚರಿಕೆ ನೀಡಲಾಗಿದ್ದರೂ ಸಿಮ್​​​​​​ಗಳು ಪತ್ತೆ ಆಗುತ್ತಿವೆ. ಹೀಗಾಗಿ ಈ ಕುರಿತು ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ಎಂದು ರಾಜ್ಯ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಇಷ್ಟೆಲ್ಲಾ ಭದ್ರತೆ ಇದ್ದರೂ ಜೈಲಿನೊಳಗೆ ಹೇಗೆ ಮೊಬೈಲ್​​​ ಹೋಗ್ತಿದೆ? ಇದರಲ್ಲಿ ಅಧಿಕಾರಿಗಳು ಏನಾದರೂ ಭಾಗಿಯಾಗಿದ್ದಾರೆಂಬ ಬಗ್ಗೆ ತನಿಖೆ ನಡೆಸ್ತೇವೆ. ಅಧಿಕಾರಿಗಳು ಭಾಗಿಯಾಗಿದ್ರೆ ಅಂತವರ ವಿರುದ್ಧ ಕ್ರಮಕ್ಕೆ ಆದೇಶ ಮಾಡೋದಾಗಿ ತಿಳಿಸಿದ್ದಾರೆ. ಪ್ರಜ್ವಲ್ ರೇವಣ್ಣಗೆ ಫೋನ್ ತಂದು ಕೊಟ್ಟವರು ಯಾರು? ಎಷ್ಟು ದಿನಗಳಿಂದ ಮೊಬೈಲ್ ಬಳಕೆ ಮಾಡುತ್ತಿದ್ದಾನೆ? ಇದರಲ್ಲಿ ಯಾರೆಲ್ಲಾ ಕೈವಾಡ ಇದೆ ಎಂಬುದರ ಪತ್ತೆಗೂ ಸೂಚಿಸಲಾಗಿದೆ.

ಇದನ್ನೂ ಓದಿ: ಪ್ರಜ್ವಲ್​​ಗೆ ಜೈಲಲ್ಲಿ ಮೊಬೈಲ್​​ ಕೊಟ್ಟಿದ್ದು ಅಧಿಕಾರಿಗಳು?: ಹೆತ್ತವರ ಹೆಸರನ್ನು ಶಿವಪ್ಪ, ಪಾರ್ವತಿ ಎಂದು ನೋಟ್​​ಬುಕ್​ನಲ್ಲಿ ಬರೆದಿಟ್ಟಿದ್ದ ಮಾಜಿ ಸಂಸದ!

‘ಯಾರೇ ಸಹಕಾರ ಕೊಟ್ಟರು ಅವರ ಮೇಲೆ ಕ್ರಮ’

ಕಾರಾಗೃಹದಲ್ಲಿ ಆಗಬಾರದ ಚಟುವಟಿಕೆಗಳು ನಡೆದಾಗ ಕ್ರಮ ಆಗಬೇಕು. ವೈರಲ್​​ ಆಗಿರುವ ಪ್ರಜ್ವಲ್​​ ವಿಡಿಯೋ ಸ್ವಲ್ಪ ಹಳೆಯದಾಗಿದ್ದು, ಯಾರು ಅದನ್ನು ಮಾಡಿದ್ದಾರೆ ಎಂಬ ಬಗ್ಗೆ ಹೇಳೋಕಾಗುತ್ತಾ ಎಂದು ಗೃಹ ಸಚಿವ ಪ್ರಿಯಾಂಕ್​​ ಖರ್ಗೆ ಪ್ರಶ್ನಿಸಿದ್ದಾರೆ. ಯಾರು ಕೊಟ್ಟರು, ಏನ್ ಕೊಟ್ಟರು ಎಂಬ ಬಗ್ಗೆ ಹೇಳಲು ಆಗಲ್ಲ. ಆದರೆ ಯಾರೇ ಸಹಕಾರ ಕೊಟ್ಟರು ಅವರ ಮೇಲೆ ಕ್ರಮ ಆಗುತ್ತದೆ. ಪೇದೆಯಿಂದ ಹಿಡಿದು IPS ವರೆಗೆ ಯಾರನ್ನೂ ನನ್ನ ಕಾಲದಲ್ಲಿ ರಕ್ಷಣೆ ಮಾಡಲ್ಲ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:12 pm, Thu, 13 August 26

Follow Us