ಬೆಂಗಳೂರು, ಜೂ.12: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಜೂನ್ 18ರವರೆಗೆ ಪ್ರಜ್ವಲ್ ರೇವಣ್ಣಗೆ ಸೈಬರ್ ಕ್ರೈಮ್ ಠಾಣೆ ಎಫ್ಐಆರ್ ನಂ.2/2024 ರಲ್ಲಿ ಎಸ್ಐಟಿ(SIT) ಕಸ್ಟಡಿಗೆ ನೀಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಪ್ರಜ್ವಲ್ ರೇವಣ್ಣ ಅವರನ್ನು ಇಂದು(ಜೂ.12) ನ್ಯಾಯಾಲಯಕ್ಕೆ ಹಾಜರುಪಡಿಸಿ ಆತನನ್ನು ಕಸ್ಟಡಿಗೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಮನವಿ ಮಾಡಿದ್ದರು. ಈ ಹಿನ್ನಲೆ ಮನವಿ ಪುರಸ್ಕರಿಸಿದ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್, ಬಾಡಿ ವಾರಂಟ್ ಜಾರಿಗೊಳಿಸಿದೆ.
ಕಳೆದ ಎರಡು ದಿನಗಳ ಹಿಂದೆ ಪ್ರಜ್ವಲ್ ರೇವಣ್ಣಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರಜ್ವಲ್ನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ವಿಚಾರಣಾಧೀನ ಖೈದಿ ಸಂಖ್ಯೆ 5664 ನೀಡಲಾಗಿತ್ತು. ಬಳಿಕ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಕ್ವಾರೆಂಟೈನ್ ಸೆಲ್ ನಲ್ಲಿದ್ದರು. ಅವರಿಗೆ ಜೈಲಿನ ಮೆನುವಿನಂತೆ ಮುದ್ದೆ, ಅನ್ನ, ಸಾಂಬರು, ಪಲ್ಯ ನೀಡಲಾಗಿತ್ತು.
ಇದನ್ನೂ ಓದಿ:ಪರಪ್ಪನ ಅಗ್ರಹಾರ ಜೈಲು ಪಾಲಾದ ಪ್ರಜ್ವಲ್ ರೇವಣ್ಣ ವಿಚಾರಣಾಧೀನ ಕೈದಿ ನಂಬರ್ 5664
ಅತ್ಯಾಚಾರ ಆರೋಪ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ಎಸ್‌ಐಟಿ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಜೂ.10 ರಂದು ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಪ್ರಜ್ವಲ್ ರೇವಣ್ಣ ಅವರಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇದೀಗ ಮತ್ತೆ ಕೋರ್ಟ್‌ಗೆ ಹಾಜರುಪಡಿಸಿ ಪುನಃ ಎಸ್ಐಟಿ ಅಧಿಕಾರಿಗಳು ತಮ್ಮ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ಶುರುಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:18 pm, Wed, 12 June 24