ಪರಪ್ಪನ ಅಗ್ರಹಾರದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಪ್ರಜ್ವಲ್​​ ರೇವಣ್ಣ ಶಿಫ್ಟ್​​ ಮಾಡಲು ಡಿಐಜಿ ಆದೇಶ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲು ಡಿಜಿಪಿ ಅಲೋಕ್ ಕುಮಾರ್ ಆದೇಶಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜಿ ಸಂಸದ ಇದ್ದ ಸೆಲ್‌ನಲ್ಲಿ ಮೊಬೈಲ್ ಮತ್ತು ಪೆನ್‌ಡ್ರೈವ್ ಪತ್ತೆಯಾಗಿದ್ದು ಭಾರಿ ಸುದ್ದಿಯಾಗಿತ್ತು. ಈ ಸಂಬಂಧ ಡಿಐಜಿ ನೇತೃತ್ವದಲ್ಲಿ ತನಿಖೆಗೂ ಆದೇಶಿಸಲಾಗಿತ್ತು. ಆ ಬೆನ್ನಲ್ಲೇ ಈಗ ಮತ್ತೊಂದು ಪ್ರಮುಖ ನಿರ್ಧಾರವನ್ನು ಕಾರಾಗೃಹ ಮತ್ತು ಸುಧಾರಣೆ ಸೇವೆ ಇಲಾಖೆ ಡಿಜಿಪಿ ಅಲೋಕ್​ಕುಮಾರ್ ಮಾಡಿದ್ದಾರೆ.

ಪರಪ್ಪನ ಅಗ್ರಹಾರದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಪ್ರಜ್ವಲ್​​ ರೇವಣ್ಣ ಶಿಫ್ಟ್​​ ಮಾಡಲು ಡಿಐಜಿ ಆದೇಶ
ಹಿಂಡಲಗಾ ಜೈಲಿಗೆ ಪ್ರಜ್ವಲ್​​ ರೇವಣ್ಣ ಶಿಫ್ಟ್​​ ಮಾಡಲು ಆದೇಶ
Image Credit source: PTI
Edited By:

Updated on: Oct 09, 2026 | 2:32 PM

ಬೆಂಗಳೂರು, ಅಕ್ಟೋಬರ್​​ 09: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜಿ ಸಂಸದ ಪ್ರಜ್ವಲ್​​ ರೇವಣ್ಣ ಇದ್ದ ಸೆಲ್​ನಲ್ಲಿ ಮೊಬೈಲ್​ ಪತ್ತೆಯಾಗಿದ್ದ ಬೆನ್ನಲ್ಲೇ ಕಾರಾಗೃಹ ಮತ್ತು ಸುಧಾರಣೆ ಸೇವೆ ಇಲಾಖೆ ಡಿಜಿಪಿ ಅಲೋಕ್​ಕುಮಾರ್ ಮಹತ್ವದ ಆದೇಶ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿರುವ ಪ್ರಜ್ವಲ್​​ನ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್​ ಮಾಡಲು ಡಿಜಿಪಿ ಸೂಚಿಸಿದ್ದಾರೆ. ಜೀವಿತಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದನ ಸೆಲ್​​ನಲ್ಲಿ ಪರಿಶೀಲನೆ ವೇಳೆ ಪೆನ್​ಡ್ರೈವ್, ಮೊಬೈಲ್​ ಪತ್ತೆಯಾಗಿದ್ದಿದ್ದು ಭಾರಿ ಚರ್ಚೆಗೆ ಗ್ರಾಸವಾಗಿತ್ತು.

ಪ್ರಜ್ವಲ್ ರೇವಣ್ಣ ಶಿಫ್ಟ್​ ಸಂಬಂಧ ಬೆಳಗಾವಿಯ ಹಿಂಡಲಗಾ ಜೈಲಿಗೆ ಅಧಿಕೃತ ಇ-ಮೇಲ್ ಮಾಡಲಾಗಿದೆ. ಜೈಲು ಮುಖ್ಯ ಅಧೀಕ್ಷಕರಿಗೆ ಮಾಹಿತಿ ನೀಡಲಾಗಿದ್ದು, ಆದಷ್ಟು ಬೇಗ ಹಿಂಡಲಗಾ ಜೈಲಿಗೆ ಪ್ರಜ್ವಲ್​​ ಶಿಫ್ಟ್​ ಮಾಡಲಾಗುತ್ತೆ. ಯಾವಾಗ ಬೇಕಾದ್ರೂ ಎಸ್ಕಾರ್ಟ್ ಮೂಲಕ ಶಿಫ್ಟ್​ ಮಾಡಬಹುದು. ಹೀಗಾಗಿ ಈ ಬಗ್ಗೆ ಸಿದ್ಧತೆ ಮಾಡಿಕೊಳ್ಳುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸಿಸಿಬಿ ದಾಳಿ ವೇಳೆ ಪತ್ತೆಯಾಗಿದ್ದ ಮೊಬೈಲ್​​

2026ರ ಆಗಸ್ಟ್​​​ 11ರಂದು ಪರಪ್ಪನ ಅಗ್ರಹಾರ ಜೈಲಿನ ಮೇಲೆ ಡಿಸಿಪಿ ಹರಿಬಾಬು ಮತ್ತು ಇಮಾಮ್ ಖಾಸೀಂ ನೇತೃತ್ವದಲ್ಲಿ ಸಿಸಿಬಿ ದಾಳಿ ನಡೆಸಿತ್ತು. ಈ ವೇಳೆ ಪ್ರಜ್ವಲ್​​ ರೇವಣ್ಣ ಇದ್ದ ಸೆಲ್​​ನಲ್ಲಿ ಮೊಬೈಲ್​​ ಪತ್ತೆಯಾಗಿತ್ತು. ಜೊತೆಗೆ ಚಾರ್ಜರ್, ನೀಲಿ ಬಣ್ಣದ ನೋಟ್‌ಬುಕ್ ಹಾಗೂ ಪೆನ್ ಡ್ರೈವ್​​ನ ಕೂಡ ಪೊಲೀಸರು ವಶಕ್ಕೆ ಪಡೆದಿದ್ದರು. ಮೊಬೈಲ್‌ನಲ್ಲಿ ವಾಟ್ಸಾಪ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ , ನೆಟ್‌ಫ್ಲಿಕ್ಸ್ , ಪ್ರೈಮ್ ವಿಡಿಯೋ ಆ್ಯಪ್‌ಗಳು ಇದ್ದು, ಪಾಸ್‌ವರ್ಡ್‌ನಿಂದ ರಕ್ಷಿಸಲ್ಪಟ್ಟಿದ್ದವು. ವಿಧಿವಿಜ್ಞಾನ ಪರೀಕ್ಷೆಯಲ್ಲಿ (FSL) ಮೊಬೈಲ್‌ನಲ್ಲಿ ಕೆಲ ವಿಡಿಯೋ ಫೈಲ್‌ಗಳು ಕೂಡ ಪತ್ತೆಯಾಗಿವೆ ಎನ್ನಲಾಗಿತ್ತು.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಜೈಲು ಸೆಲ್‌ನಲ್ಲಿ ಮೊಬೈಲ್, ಪೆನ್‌ಡ್ರೈವ್ ಪತ್ತೆ ಕೇಸ್: ಎಫ್​ಎಸ್​ಎಲ್ ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ಜೊತೆಗೆ ಪ್ರಜ್ವಲ್​​ ರೇವಣ್ಣ ಮೊಬೈಲ್​​ನಲ್ಲಿ ಮಾತನಾಡುತ್ತಿದ್ದ ಫೋಟೋ ಕೂಡ ಹೊರಬಂದಿತ್ತು. ಪ್ರಕರಣ ಸಂಬಂಧ ಜೈಲು ಅಧಿಕಾರಿಗಳ ನಿರ್ಲಕ್ಷ್ಯ ಇರೋದು ಸಾಬೀತು ಹಿನ್ನೆಲೆ ತನಿಖೆಗಾಗಿ ಕಾರಾಗೃಹ ಮತ್ತು ಸುಧಾರಣೆ ಇಲಾಖೆ ಡಿಐಜಿ ಜಿನೇಂದ್ರ ಖನಗಾವಿ ನೇತೃತ್ವದ ತಂಡ ರಚನೆ ಮಾಡಲಾಗಿತ್ತು. ಪರಪ್ಪನ ಅಗ್ರಹಾರ ಜೈಲಿನ ಬ್ಯಾರಕ್​ನಲ್ಲಿ ಮೊಬೈಲ್ ಹೇಗೆ ಬಂತು? ಎಂಬ ಬಗ್ಗೆ ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಸೂಚನೆ ನೀಡಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:15 pm, Fri, 9 October 26

ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Loading...
Unable to load recommendations.
Follow Us