AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಾನ್ ನಿರ್ಬಂಧಿಸಲು ಏಪ್ರಿಲ್ 13ರವರೆಗೆ ಕರ್ನಾಟಕ ಸರ್ಕಾರಕ್ಕೆ ಡೆಡ್​ಲೈನ್ ನೀಡಿದ ಪ್ರಮೋದ್ ಮುತಾಲಿಕ್

ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸಿದ್ದಲಿಂಗ ಸ್ವಾಮೀಜಿ, ಕರ್ನಾಟಕವನ್ನು ಉತ್ತರ ಪ್ರದೇಶ ಮಾಡಬೇಡಿ ಅಂತ ಹೇಳಿದ್ದಾರೆ. ಅಲ್ಲಿನ ಸಿಎಂ ಸ್ವಚ್ಛ ಆಡಳಿತ ನೀಡಿದ್ದಾರೆ.

ಅಜಾನ್ ನಿರ್ಬಂಧಿಸಲು ಏಪ್ರಿಲ್ 13ರವರೆಗೆ ಕರ್ನಾಟಕ ಸರ್ಕಾರಕ್ಕೆ ಡೆಡ್​ಲೈನ್ ನೀಡಿದ ಪ್ರಮೋದ್ ಮುತಾಲಿಕ್
ಶ್ರೀರಾಮಸೇನೆಯ ನಾಯಕ ಪ್ರಮೋದ್ ಮುತಾಲಿಕ್
TV9 Web
| Edited By: |

Updated on: Apr 05, 2022 | 9:13 AM

Share

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ನಿಂದ ಆರಂಭವಾದ ವಿವಾದ ಅಜಾನ್ ವರೆಗೂ ಬಂದು ನಿಂತಿದೆ. ಮಸೀದಿಯಲ್ಲಿ ಧ್ವನಿವರ್ಧಕ ಬಳಸಲು ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಸರ್ಕಾರಕ್ಕೆ ಒತ್ತಾಯಿಸಿವೆ. ಧ್ವನಿವರ್ಧಕದಿಂದ ಶಬ್ದ ಮಾಲೀನ್ಯವಾಗುತ್ತದೆ. ಹೀಗಾಗಿ ತಕ್ಷಣ ಈ ಬಗ್ಗೆ ಕ್ರಮಕೈಗೊಳ್ಳಬೇಕು ಅಂತ ಆಗ್ರಹಿಸಿದ್ದಾರೆ. ಇನ್ನು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದು, ಏಪ್ರಿಲ್ 13ರವರೆಗೆ ಡೆಡ್​ಲೈನ್ ನೀಡಿದ್ದಾರೆ. ಕೂಡಲೇ ಅಜಾನ್ ನಿರ್ಬಂಧ ಕೈಗೊಳ್ಳಬೇಕು. ಸರ್ಕಾರ ಕ್ರಮಕೈಗೊಳ್ಳದೆ ಹೋದರೆ ಉಗ್ರ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.

ಬೃಹತ್ ಪ್ರತಿಭಟನೆಗೆ ನಿರ್ಧಾರ: ಏಪ್ರಿಲ್ 14 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಅಂತ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಮಸೀದಿಗಳ ಮೇಲೆ ಮೈಕಾಸುರರ ಹಾವಳಿ ಬಹಳ ಜೋರಾಗಿದೆ. ಮಸೀದಿಗಳಲ್ಲಿ ನ್ಯಾಯಾಲಯದ ಆದೇಶ ಪಾಲನೆಯಾಗುತ್ತಿಲ್ಲ. ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಮೈಕ್ ಹಚ್ಚದಂತೆ ಆದೇಶ ಆದರೂ ಕೂಡ ಕೋರ್ಟ್ ಆದೇಶ ಪಾಲನೆಯಾಗುತ್ತಿಲ್ಲ. ಸರ್ಕಾರ ಕೂಡ ಈ ನಿಯಮವನ್ನು ಜಾರಿಗೆ ತರುತ್ತಿಲ್ಲ. ಇನ್ನಾದ್ರು ನ್ಯಾಯಾಲಯದ ಆದೇಶ ಜಾರಿಗೊಳಿಸಬೇಕು. ಮಸೀದಿಗಳು ಧ್ವನಿವರ್ಧಕ ಬಳಕೆಗೆ ಪರವಾನಗಿ ಪಡೆದಿಲ್ಲ ಅಂತ ಕಲಬುರಗಿ ನಗರದಲ್ಲಿ ಸಿದ್ದಲಿಂಗ ಸ್ವಾಮೀಜಿ ಹೇಳಿದರು.

ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಆಕ್ರೋಶ: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸಿದ್ದಲಿಂಗ ಸ್ವಾಮೀಜಿ, ಕರ್ನಾಟಕವನ್ನು ಉತ್ತರ ಪ್ರದೇಶ ಮಾಡಬೇಡಿ ಅಂತ ಹೇಳಿದ್ದಾರೆ. ಅಲ್ಲಿನ ಸಿಎಂ ಸ್ವಚ್ಛ ಆಡಳಿತ ನೀಡಿದ್ದಾರೆ. ಹೀಗಾಗಿ ಎರಡನೇ ಬಾರಿ ಅಧಿಕಾರಕ್ಕೆ ಬಂದಿದ್ದಾರೆ. ನೀವು ರಾಜ್ಯದಲ್ಲಿ ಎರಡು ಬಾರಿ ಸಿಎಂ ಆಗಿದ್ದೀರಿ. ಆದರೂ ಜನ ನಿಮಗೆ ಬಹುಮತ ನೀಡಿಲ್ಲ. ಇದಕ್ಕೆ ಕಾರಣ ನೀವು ಹಿಂದು ವಿರೋಧಿಗಳಾಗಿದ್ದೀರಿ. ಪದೇ ಪದೇ ಉತ್ತರ ಪ್ರದೇಶ ಮಾಡಲು ಹೊರಟಿದ್ದಾರೆ ಅಂತ ಹೇಳುತ್ತೀರಿ. ನೀವು ಮಮತಾ ಬ್ಯಾನರ್ಜಿ ಜೊತೆ ಸೇರಿ ಕರ್ನಾಟಕವನ್ನು ಪಶ್ಚಿಮ ಬಂಗಾಳ ಮಾಡಲು ಹೊರಟಿದ್ದೀರಿ. ಹಿಂದೂ ಸಂಘಟನೆಗಳಿಗೆ ಬಿಜೆಪಿ ಸರ್ಕಾರದ ಬೆಂಬಲವಿದೆ ಅನ್ನೋದು ಸುಳ್ಳು ಎಂದರು.

ಇದನ್ನೂ ಓದಿ

ಜಾನಪದ ಕಲಾವಿದ ದಕ್ಕಲ ಮುನಿಸ್ವಾಮಿ ಸೇರಿ ಐವರಿಗೆ ಬಾಬು ಜಗಜೀವನ್ ರಾಂ ಪ್ರಶಸ್ತಿ

Crime News: ಹಣಕಾಸಿನ ವಿಚಾರಕ್ಕೆ ನಡೆದ ಜಗಳದಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?