AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ಹರಿಹಾಯ್ದ ಹೆಚ್​​​ಡಿ ಕುಮಾರಸ್ವಾಮಿ

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್​. ಡಿ ಕುಮಾರಸ್ವಾಮಿ ಟ್ವೀಟ್​ ಮಾಡಿ, "ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ ಸರಕಾರ ಮೈಮರೆತಿದ್ದು ಯಾಕೆ?" ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ ಎಂದು ಸರ್ಕಾರವನ್ನು ಪಶ್ನಿಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ಹರಿಹಾಯ್ದ ಹೆಚ್​​​ಡಿ ಕುಮಾರಸ್ವಾಮಿ
ಜೆಡಿಎಸ್ ನಾಯಕ ಎಚ್​ಡಿ ಕುಮಾರಸ್ವಾಮಿ
TV9 Web
| Edited By: ವಿವೇಕ ಬಿರಾದಾರ|

Updated on:Jul 27, 2022 | 2:45 PM

Share

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು (Paraveen Nettar) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್​. ಡಿ ಕುಮಾರಸ್ವಾಮಿ (HD Kumarswamy) ಟ್ವೀಟ್​ ಮಾಡಿ, “ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು? ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ ಸರಕಾರ ಮೈಮರೆತಿದ್ದು ಯಾಕೆ?” ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

“ಪ್ರತಿ ಕೊಲೆ ಅದ ಮೇಲೆಯೂ ಮೈ ಕೊಡವಿಕೊಂಡು ಎದ್ದೇಳುವ ಸರಕಾರ, ಕೊಲೆಯೇ ಆಗದಂತೆ ತಡೆಯುವ ಪ್ರಯತ್ನ ಮಾಡುತ್ತಿಲ್ಲ, ಏಕೆ? ಕೊಲೆಗಳೆಂದರೆ ಕೆಲವರಿಗೇಕೆ ಇಷ್ಟೊಂದು ಇಷ್ಟ? ಚುನಾವಣೆ ಹತ್ತಿರ ಆದಂತೆಲ್ಲ ನೆತ್ತರ ಓಕುಳಿ ಹರಿಯುತ್ತಿದೆ! ಈ ನೆತ್ತರ ಮೇಲೆ ರಾಜಕೀಯ ಆಟ ವಿಜೃಂಭಿಸುತ್ತಿದೆ” ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.  

“ಈ ಮೊದಲು ಕೊಲೆಯಾಗಿದ್ದ ಮಸೂದ್ ಕೂಡ ಬಡವ, ಈಗ ಕೊಲೆಯಾದ ಪ್ರವೀಣ್ ನೆಟ್ಟಾರು ಕೂಡ ಬಡ ಕುಟುಂಬದವರೇ. ಶ್ರಮಜೀವಿಗಳ ಕುಟುಂಬದ ಮಕ್ಕಳೇ ಸಾವಿಗೆ ತುತ್ತಾಗುತ್ತಿದ್ದಾರೆ! ರಾಜಕಾರಣಿಗಳು, ಸಂಘಟನೆಗಳ ಮುಖಂಡರ ಮಕ್ಕಳು ಇಂಥ ಗಲಾಟೆಗಳಲ್ಲಿ ಕಾಣೋದೇ ಇಲ್ಲ!” ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಕೆಲ ಸಂಘಟನೆಗಳು ಬಡ ಯುವಕರನ್ನು ದಾರಿ ತಪ್ಪಿಸಿ ಸ್ವಾರ್ಥ ಸಾಧನೆಗಾಗಿ ಸಾವಿನ ದವಡೆಗೆ ದೂಡುತ್ತಿವೆ. ಬಡ ಕುಟುಂಬಗಳ ಜೀವನಾಧಾರವಾಗಿರುವ ಯುವಕರನ್ನು ಬಲಿ ತೆಗೆದುಕೊಳ್ಳುತ್ತವೆ. ಈ ಬಗ್ಗೆ ಯುವಕರು, ಪೋಷಕರು ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದ್ದಾರೆ.

ಹಿಂಸೆಗೆ ಜಾತಿ, ಧರ್ಮ ಎಂಬುದಿಲ್ಲ. ರಕ್ತಪಿಪಾಸುಗಳಿಗೆ ಮಾನವೀಯತೆ ಇಲ್ಲ. ಕೊಲೆಗೆಡುಕ ಶಕ್ತಿಗಳ ಮುಂದೆ ಸರಕಾರ ಕೋಲೆ ಬಸವನಂತೆ ಆಗಿದೆ. ಈ ಕೊಲೆಗಳ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಲು ದೈರ್ಯ ಇಲ್ಲ. ಈ ಅಸಹಾಯಕತೆಗೆ ಕಾರಣ ಏನು? ಎಂದು ಪ್ರಶ್ನಿಸಿದ್ದಾರೆ.

ಅಂಕೆಯೇ ಇಲ್ಲದ ಹಂತಕರ ಆಟಕ್ಕೆ ಇತಿಶ್ರೀ ಹಾಡಿ, ಹೆಡೆಮುರಿ ಕಟ್ಟಬೇಕು. ಅದು ಬಿಟ್ಟು ಅಬ್ಬರದ ಹೇಳಿಕೆಗಳಿಂದ ಉಪಯೋಗವೇನು? ಪ್ರತಿ ಕೊಲೆಗೂ ಕೋಮು ಬಣ್ಣ ಹಚ್ಚುವ ನಾಯಕರ ರಾಜಕೀಯ ತಲೆಯಲ್ಲಿ ಭಯಂಕರ ದುರುದ್ದೇಶವೇ ಅಡಗಿದೆ ಎಂದರು.

ಕರ್ನಾಟವು ಸರ್ವ ಜನಾಂಗದ ಶಾಂತಿಯ ತೋಟ. ಶಾಂತಿ, ಸೌಹಾರ್ದತೆ, ಸಹಿಷ್ಣುತೆಯ ಬೀಡು. ಭಾವನಾತ್ಮಕ ವಿಷಯಗಳಿಂದ ಬಂಡವಾಳ ಹೂಡಿಕೆಯಲ್ಲಿ ಈಗಾಗಲೇ ರಾಜ್ಯಕ್ಕೆ ಹೊಡೆತ ಬಿದ್ದಿದೆ. ಹೊಸ ಕೈಗಾರಿಕೆಗಳು ಬರುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಶಾಂತಿ, ಸುವ್ಯಸ್ಥೆ ಸಮಸ್ಯೆಯಿಂದ ಆರ್ಥಿಕ ಹಿಂಜರಿತ ಉಂಟಾಗಿ ಕೈಗಾರಿಕೆಗಳು ವಲಸೆ ಹೋದರೆ ಎದುರಾಗುವ ನಿರುದ್ಯೋಗ ಸಮಸ್ಯೆಗೆ ಯಾರು ಹೊಣೆ ಆಗುತ್ತಾರೆ? ನಿರುದ್ಯೋಗವೇ ಇಂಥ ಘಟನೆಗಳಿಗೆ ಕಾರಣ. ಹತಾಶ ಯುವಕರ ಮನಸ್ಸು ಕೆಡಿಸಲಾಗುತ್ತಿದೆ. ಈ ಬಗ್ಗೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

Published On - 2:45 pm, Wed, 27 July 22

Follow Us
TV9 Web
TV9 Web

TV9 Kannada

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ