AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಪೊಲೀಸ್ ತನಿಖೆಯ ಕಾರ್ಯವೈಖರಿಗೆ ಸಿಎಂ ಬೊಮ್ಮಾಯಿ ಅಸಮಾಧಾನ

ಯಾವ ರೀತಿ ತನಿಖೆ ಮಾಡ್ತಿದೀರಾ ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಭೇಟಿ ವೇಳೆ ಸಿಎಂ ಗರಂ ಆಗಿದ್ದಾರೆ. ಪ್ರವೀಣ್ ಹತ್ಯೆ ಕೇಸ್​ ಎನ್ಐಎಗೆ ವರ್ಗಾವಣೆ ಮಾಡಬೇಕು.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಪೊಲೀಸ್ ತನಿಖೆಯ ಕಾರ್ಯವೈಖರಿಗೆ ಸಿಎಂ ಬೊಮ್ಮಾಯಿ ಅಸಮಾಧಾನ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Jul 30, 2022 | 1:33 PM

Share

ಬೆಂಗಳೂರು: ಪ್ರವೀಣ್ ನೆಟ್ಟಾರು (Praveen Nettaru) ಹಂತಕರನ್ನು ಇನ್ನೂ ಬಂಧಿಸದ ಹಿನ್ನೆಲೆ ಪೊಲೀಸ್ ತನಿಖೆಯ ಕಾರ್ಯವೈಖರಿಗೆ ಸಿಎಂ ಬೊಮ್ಮಾಯಿ ಅಸಮಾಧಾನಗೊಂಡಿದ್ದಾರೆ. ನಾಲ್ಕು ದಿನಗಳಾಗಿದ್ರೂ ಇನ್ನೂ ಆರೋಪಿಗಳನ್ನು ಬಂಧಿಸಿಲ್ಲ. ಯಾವ ರೀತಿ ತನಿಖೆ ಮಾಡ್ತಿದೀರಾ ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಭೇಟಿ ವೇಳೆ ಸಿಎಂ ಗರಂ ಆಗಿದ್ದಾರೆ. ಪ್ರವೀಣ್ ಹತ್ಯೆ ಕೇಸ್​ ಎನ್ಐಎಗೆ ವರ್ಗಾವಣೆ ಮಾಡಬೇಕು. ತನಿಖೆಯಲ್ಲಿ ಯಾವುದೇ ಮುಖ್ಯ ಲೀಡ್ ಸಿಕ್ಕಿಲ್ಲ, ಪ್ರಗತಿ ಆಗಿಲ್ಲ. ಈ‌‌ ಹಂತದಲ್ಲಿ ಎನ್ಐಎಗೆ ಕೇಸ್ ವರ್ಗಾಯಿಸಬೇಕಾಗಿದೆ. ಇಲಾಖೆ ಮೇಲೆ ಅವರಿಗೆ ಯಾವ ಅಭಿಪ್ರಾಯ ಮೂಡಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ.

ಆರೋಪಿಗಳನ್ನು ಕಸ್ಟಡಿಗೆ ಪಡೆದ ಪೊಲೀಸರು, ಗೌಪ್ಯ ಸ್ಥಳದಲ್ಲಿ ವಿಚಾರಣೆ

ಪ್ರವೀಣ್ ನೆಟ್ಟಾರು ಅವರ ಭೀಕರ ಹತ್ಯೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದು, ಗೌಪ್ಯ ಸ್ಥಳದಲ್ಲಿರಿಸಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಪ್ರವೀಣ್ ಹತ್ಯೆ ನಡೆದ ಒಂದೇ ದಿನಕ್ಕೆ ಝಾಕಿರ್, ಶಫಿಕ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಸದ್ಯ ಝಾಕಿರ್ ಮತ್ತು ಶಫಿಕ್ ಎಂಬವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ. ಅದರಂತೆ ನ್ಯಾಯಾಲಯವು ಐದು ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ. ಸದ್ಯ ಆರೋಪಿಗಳನ್ನು ಗೌಪ್ಯ ಸ್ಥಳದಲ್ಲಿರಿಸಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಕೊಲೆಯಾದ ಮೂವರ ನಿವಾಸಕ್ಕೆ ಭೇಟಿ ನೀಡುತ್ತೇನೆ: ಎಚ್.ಡಿ.ಕುಮಾರಸ್ವಾಮಿ

ಮಸೂದ್ ಕೊಲೆ ನಡೆದ ಎರಡು ದಿನಗಳ ನಂತರ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬೆಳ್ಳಾರೆಯಲ್ಲಿ ಭೀಕರವಾಗಿ ಹತ್ಯೆಗೈಯಲಾಗಿತ್ತು. ಅಂದಿನಿಂದ ಕರಾವಳಿ ಬೂದಿ ಮುಚ್ಚಿದ ಕೆಂಡದಂತಾಗಿತ್ತು. ಅಲ್ಲದೆ ಕಾರ್ಯಕರ್ತನನ್ನು ಕಳೆದುಕೊಂಡು ಕೆರಳಿದ ಕರಾವಳಿ ಬಿಜೆಪಿ ಪಡೆ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಸರ್ಕಾರದ ವಿರುದ್ಧವೇ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳ್ಳಾರೆಯಲ್ಲಿ ಆರಂಭವಾದ ಪ್ರತಿಭಟನೆಯ ಕಿಚ್ಚು ಕರಾವಳಿಯನ್ನು ವ್ಯಾಪಿಸಿ ನಂತರ ಇಡೀ ರಾಜ್ಯಕ್ಕೆ ಹಬ್ಬಿದೆ. ಅದರಂತೆ ಅಲ್ಲಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗುತ್ತಿದೆ.

Published On - 1:20 pm, Sat, 30 July 22