ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಅವಾಂತರ; ನಾಳೆ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ

|

Updated on: May 22, 2023 | 9:25 PM

Karnataka Rain: ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅವಾಂತರ ಹಿನ್ನೆಲೆ ನಾಳೆ (ಮೇ 23) ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಲಿದ್ದಾರೆ.

ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಅವಾಂತರ; ನಾಳೆ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ
ಸಿಎಂ ಸಿದ್ದರಾಮಯ್ಯ
Follow us on

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ (Pre-monsoon rains in Karnataka) ಅವಾಂತರ ಹಿನ್ನೆಲೆ ನಾಳೆ (ಮೇ 23) ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ (Siddaramaiah) ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಲಿದ್ದಾರೆ. ನಾಳೆ ಮಧ್ಯಾಹ್ನ 3ಕ್ಕೆ ವಿಧಾನಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒಗಳ ಜೊತೆ ವಿವಿಧ ಭಾಗಗಳಲ್ಲಿ ಮಳೆಯಿಂದ ಆದ ಅನಾಹುತಗಳ ಬಗ್ಗೆ ಮಾಹಿತಿ ಕಲೆ ಹಾಕಿಕೊಳ್ಳಲಿದ್ದಾರೆ.

ಬಂಗಾಳಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಆರಂಭವಾದ ಮಳೆ ಕರ್ನಾಟಕದಲ್ಲಿ ಅನಾಹುತಗಳನ್ನೇ ಸೃಷ್ಟಿಮಾಡಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ನಷ್ಟ ಉಂಟಾಗಿದೆ. ಕೆಲವರ ಮನೆಗಳಿಗೆ ಹಾನಿಯಾಗಿದ್ದು, ಇನ್ನೂ ಕೆಲವು ಮನೆಗಳು ಕುಸಿದುಬಿದ್ದಿವೆ. ಸುಡು ಬೇಸಿಗೆಯಿಂದ ಕಂಗೆಟ್ಟು ಕಾಯುತ್ತಿದ್ದ ರೈತರಿಗೆ ಭಾರೀ ಮಳೆ ನಿದ್ದೆಗೆಡಿಸಿದೆ. ನಿರೀಕ್ಷೆ ಮೀರಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ.

ಇದನ್ನೂ ಓದಿ: ಸಾಲದ ವಿವರ ನೀಡಿದ ಶಿಕ್ಷಕ ಅಮಾನತು, ಕಾಂಗ್ರೆಸ್ ಆಡಳಿತದಲ್ಲಿ ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ಅಶ್ವತ್ಥನಾರಾಯಣ್

ಆಡಳಿತ ಯಂತ್ರಕ್ಕೆ ಚುರುಕು ನೀಡಲು ಸಭೆ ಕರೆದ ಸಿದ್ದರಾಮಯ್ಯ

ಆಡಳಿತ ಯಂತ್ರಕ್ಕೆ ಚುರುಕು ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ನಾಳೆ ಸಂಜೆ 5 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಅಪಾರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳ ಸಭೆ ಕರೆಯಲಾಗಿದ್ದು, ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರು ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:20 pm, Mon, 22 May 23