SC-ST, OBC ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಪೂರ್ವಭಾವಿ ತರಬೇತಿ; 65.78 ಕೋಟಿ ರೂ. ಬಿಡುಗಡೆಗೆ ಮಂಜೂರಾತಿ ನೀಡಿದ ರಾಜ್ಯ ಸರ್ಕಾರ

| Updated By: ಆಯೇಷಾ ಬಾನು

Updated on: Jul 15, 2022 | 10:49 PM

ಮೊದಲ ಹಂತದಲ್ಲಿ 15 ಸಾವಿರ ಅಭ್ಯರ್ಥಿಗಳಿಗೆ ತರಬೇತಿ ನೀಡಲು 65.78 ಕೋಟಿ ರೂ. ಬಿಡುಗಡೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಮಂಜೂರಾತಿ ನೀಡಿದೆ.

SC-ST, OBC ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಪೂರ್ವಭಾವಿ ತರಬೇತಿ; 65.78 ಕೋಟಿ ರೂ. ಬಿಡುಗಡೆಗೆ ಮಂಜೂರಾತಿ ನೀಡಿದ ರಾಜ್ಯ ಸರ್ಕಾರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us on

ಬೆಂಗಳೂರು: ಎಸ್ಸಿ, ಎಸ್ಟಿ, ಓಬಿಸಿ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ರಾಜ್ಯ ಸರ್ಕಾರ 65.78 ಕೋಟಿ ರೂ. ಬಿಡುಗಡೆ ಮಾಡಿದೆ. ಬಜೆಟ್ ಘೋಷಿತ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿ ನೀಡುವ ಹಿನ್ನೆಲೆ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಖಾಸಗಿ ತರಬೇತಿ ಸಂಸ್ಥೆಗಳ ಮೂಲಕ 50,000 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಮುಂದಾಗಿದ್ದು ಮೊದಲ ಹಂತದಲ್ಲಿ 15 ಸಾವಿರ ಅಭ್ಯರ್ಥಿಗಳಿಗೆ ತರಬೇತಿ ನೀಡಲು 65.78 ಕೋಟಿ ರೂ. ಬಿಡುಗಡೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಮಂಜೂರಾತಿ ನೀಡಿದೆ.

ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ UPSC / KAS / Banking/Group-C/SSC/ RRB / Judicial Services / Air Hostess Leden ಪರೀಕ್ಷೆಗಳಿಗೆ ಉಪಯೋಗವಾಗುವಂತೆ ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿ ವರ್ಷ ನೀಡಲಾಗುತ್ತಿದೆ.

ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಂದ 50,000 ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಲು ಹಾಗೂ ಮೊದಲನೇ ಹಂತದಲ್ಲಿ 15,000 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಷರತ್ತುಗಳೊಂದಿಗೆ ಆಡಳಿತಾತ್ಮಕ ಮಂಜೂರಾತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

Published On - 10:49 pm, Fri, 15 July 22