ಬೆಂಗಳೂರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ; ಪೊಲೀಸ್ ಭದ್ರತೆ ಹೇಗಿದೆ ಗೊತ್ತಾ?
Republic Day 2022: ಧ್ವಜಾರೋಹಣ ಬಳಿಕ ರಾಜ್ಯಪಾಲರು ಗೌರವರಕ್ಷೆ ಸ್ವೀಕರಿಸುತ್ತಾರೆ. ನಾಡಿನ ಜನತೆಯನ್ನು ಉದ್ದೇಶಿಸಿ ಗಣರಾಜ್ಯೋತ್ಸವ ಸಂದೇಶ ಸಾರಲಿದ್ದಾರೆ. ಬಳಿಕ ನಾಡಗೀತೆ, ರೈತ ಗೀತೆಯನ್ನು ಹಾಡಲಾಗುತ್ತದೆ.
ಬೆಂಗಳೂರು: ಜನವರಿ 26ರ ಗಣರಾಜ್ಯೋತ್ಸವಕ್ಕೆ (Republic Day) ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ (Manekshaw Parade Ground) ಸಕಲ ಸಿದ್ಧತೆ ನಡೆಯುತ್ತಿದೆ. ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಸಿದ್ಧತೆಯನ್ನು ಪರಿಶೀಲನೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಧಿಕಾರಿಗಳು, 26ರಂದು ಬೆಳಗ್ಗೆ 8.58ಕ್ಕೆ ರಾಜ್ಯಪಾಲರು ಆಗಮಿಸುತ್ತಾರೆ. ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರಿಂದ ರಾಷ್ಟ್ರ ಧ್ವಜಾರೋಹಣ ನೆರವೇರುತ್ತದೆ ಅಂತ ತಿಳಿಸಿದರು.
ಧ್ವಜಾರೋಹಣ ಬಳಿಕ ರಾಜ್ಯಪಾಲರು ಗೌರವರಕ್ಷೆ ಸ್ವೀಕರಿಸುತ್ತಾರೆ. ನಾಡಿನ ಜನತೆಯನ್ನು ಉದ್ದೇಶಿಸಿ ಗಣರಾಜ್ಯೋತ್ಸವ ಸಂದೇಶ ಸಾರಲಿದ್ದಾರೆ. ಬಳಿಕ ನಾಡಗೀತೆ, ರೈತ ಗೀತೆಯನ್ನು ಹಾಡಲಾಗುತ್ತದೆ ಅಂತ ಬೆಂಗಳೂರಿನಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿ ಮಂಜುನಾಥ್ ಹೇಳಿದರು.
26ಕ್ಕೆ ಬಿಗಿ ಭದ್ರತೆ ಈ ಹಿಂದೆ ದೇಶದಲ್ಲಿ ಕೆಲ ಘಟನೆಗಳು ನಡೆದಿದ್ದು, ಅದರ ಆಧಾರದ ಮೇಲೆ ಈ ಬಾರಿ ಪೊಲೀಸ್ ಭದ್ರತೆ ನೀಡಲಾಗುತ್ತದೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಒಟ್ಟು 16 ತುಕಡಿಗಳು, 5 ವಾದ್ಯ ವೃಂದ, 2 ಡ್ಯಾಗ್ ಸ್ವಾಟ್, 4 ಕ್ಯೂ ಆರ್ಡಿ, 2 ಆರ್ಐವಿ, 6 ಅಶ್ವ ತಂಡಗಳು ಪರೇಡ್ನಲ್ಲಿ ಭಾಗಿಯಾಗಲಿವೆ ಅಂತ ಕಮಲ್ ಪಂತ್ ತಿಳಿಸಿದರು. ಒಟ್ಟು 29 ಅಧಿಕಾರಿಗಳು, 464 ಸಿಬ್ಬಂದಿಗಳು ಕವಾಯಿತಿನಲ್ಲಿ ಭಾಗಿಯಾಗುತ್ತಾರೆ. ಪರೇಡ್ ಸುತ್ತಲೂ ಭದ್ರತೆಗೆ 11 ಡಿಸಿಪಿ, 20 ಎಸಿಪಿ, 60 ಪೊಲೀಸ್ ಇನ್ಸ್ಪೆಕ್ಟರ್, 125 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಒಟ್ಟು 1,400 ಜನ ಪೊಲೀಸರನ್ನು ಭದ್ರತೆ ನಿಯೋಜನೆ ಮಾಡಲಾಗಿದೆ ಎಂದರು.
ಇನ್ನು ಮೈದಾನದ ಸುತ್ತಲೂ ಸಿಸಿ ಕ್ಯಾಮರಾಗಳನ್ನ ಅಳವಡಿಕೆ ಮಾಡಲಾಗುವುದು. ಪಾಸ್ ಇಲ್ಲದವರಿಗೆ ಪ್ರವೇಶ ಇರುವುದಿಲ್ಲ ಈ ಬಾರಿ ಆಂಧ್ರಪ್ರದೇಶದ ಪೊಲೀಸರು ಕವಾಯತಿನಲ್ಲಿ ಭಾಗಿಯಾಗುತ್ತಾರೆ ಎಂದು ತಿಳಿಸಿದ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್, ಜನವರಿ26 ರಂದು ಮಾಣಿಕ್ ಷಾ ಪರೇಡ್ ಮೈದಾನದ ಸುತ್ತಲಿರುವ ಮಾರ್ಗಗಳನ್ನ ಬದಲಾವಣೆ ಮಾಡಲಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ
ಅಕ್ಕನ ಮದುವೆಯಾಗಿದ್ದ ಆಸಾಮಿ ತಂಗಿಯೂ ಬೇಕು ಎಂದಿದ್ದ; ಕಿಡ್ನಾಪ್ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದ
ಜನಸಾಮಾನ್ಯ ಮಹಿಳೆಯರ ಜೊತೆ ನೆಲದಲ್ಲಿ ಕುಳಿತು ಭಜನೆ ಮಾಡಿದ ಮಧ್ಯಪ್ರದೇಶ ಸಿಎಂ; ವಿಡಿಯೋ ವೈರಲ್