AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪ್ರೆಸಿಡೆನ್ಸಿ ವಿವಿಯ 9ನೇ ಘಟಿಕೋತ್ಸವ: 4,830 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವ ಶನಿವಾರ ಅದ್ಧೂರಿಯಾಗಿ ನೆರವೇರಿದೆ. 35 ಚಿನ್ನದ ಪದಕ ವಿಜೇತರು, 56 ಪಿಎಚ್‌ಡಿ ಸಂಶೋಧಕರು ಸೇರಿದಂತೆ ಒಟ್ಟು 4,830 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗಿದೆ. ಶಾಸಕ ಎನ್.ಎ. ಹ್ಯಾರಿಸ್​ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಗುಣಮಟ್ಟದ ಶಿಕ್ಷಣ ನೀಡುವ ವಿಶ್ವವಿದ್ಯಾಲಯದ ಕೊಡುಗೆಯನ್ನು ಅವರು ಶ್ಲಾಘಿಸಿದ್ದಾರೆ.

ಬೆಂಗಳೂರು ಪ್ರೆಸಿಡೆನ್ಸಿ ವಿವಿಯ 9ನೇ ಘಟಿಕೋತ್ಸವ: 4,830 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಪ್ರೆಸಿಡೆನ್ಸಿ ವಿವಿ ಘಟಿಕೋತ್ಸವ
ಗಂಗಾಧರ​ ಬ. ಸಾಬೋಜಿ
|

Updated on: Nov 28, 2026 | 6:18 PM

Share

ಬೆಂಗಳೂರು, ನವೆಂಬರ್​​ 28: ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ 2026ನೇ ಸಾಲಿನ 9ನೇ ವಾರ್ಷಿಕ ಘಟಿಕೋತ್ಸವ ಶನಿವಾರ ಅದ್ಧೂರಿಯಾಗಿ ನಡೆಯಿತು. ಘಟಿಕೋತ್ಸವದಲ್ಲಿ ಒಟ್ಟು 4,830 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗಿದೆ. ಇದರಲ್ಲಿ 35 ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದಿದ್ದು, 56 ಪಿಎಚ್‌ಡಿ ಸಂಶೋಧಕರು, 1,190 ಸ್ನಾತಕೋತ್ತರ ಹಾಗೂ 3,584 ಪದವಿಪೂರ್ವ ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದ್ದಾರೆ.

ಘಟಿಕೋತ್ಸವಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಶಾಸಕ ಎನ್.ಎ. ಹ್ಯಾರಿಸ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕರ್ನಾಟಕ ಸರ್ಕಾರದ ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಡಾ. ಎಂಎ ಸಲೀಂ ಗೌರವ ಅತಿಥಿಯಾಗಿ ಭಾಗವಹಿಸಿದ್ದರು.

ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಕುಲಪತಿಯನ್ನ  ಶ್ಲಾಘಿಸಿದ ಶಾಸಕ ಎನ್​ಎ ಹ್ಯಾರಿಸ್

ಇನ್ನು ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎನ್​ಎ ಹ್ಯಾರಿಸ್, ‘ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಕುಲಪತಿ ಡಾ. ನಿಸ್ಸಾರ್ ಅಹಮದ್ ಅವರ ಶ್ರಮ ಮತ್ತು ದೂರದೃಷ್ಟಿಯನ್ನು ಶ್ಲಾಘಿಸಿದರು. ಪ್ರೆಸಿಡೆನ್ಸಿ ಶಿಕ್ಷಣ ಸಂಸ್ಥೆಗಳ ಮೂಲಕ ಕಳೆದ 50 ವರ್ಷಗಳಿಂದ ಎಲ್ಲರಿಗೂ ಗುಣಮಟ್ಟದ ಹಾಗೂ ಕೈಗೆಟುಕುವ ದರದಲ್ಲಿ ಶಿಕ್ಷಣ ಒದಗಿಸಲು ಅವರು ನೀಡಿರುವ ಕೊಡುಗೆಯನ್ನು ಪ್ರಶಂಸಿಸಿದರು. ಬೆಂಗಳೂರು ಜಾಗತಿಕ ಮಟ್ಟದಲ್ಲಿ ಶಿಕ್ಷಣ, ಸಂಶೋಧನೆ ಹಾಗೂ ನಾವೀನ್ಯತೆಯ ಪ್ರಮುಖ ತಾಣವಾಗಿ ಬೆಳೆಯಬೇಕೆಂಬ ಆಶಯವನ್ನು’ ಅವರು ವ್ಯಕ್ತಪಡಿಸಿದರು.

ಕೃತಕ ಬುದ್ಧಿಮತ್ತೆ ಮಾನವ ವಿವೇಕಕ್ಕೆ ಪರ್ಯಾಯವಲ್ಲ: ಡಾ. ಎಂಎ ಸಲೀಂ

ಡಾ. ಎಂ.ಎ. ಸಲೀಂ ಮಾತನಾಡಿ, ‘ಇಂದಿನ ಯುವಜನತೆ ಅಭೂತಪೂರ್ವ ಬದಲಾವಣೆಯ ಯುಗದಲ್ಲಿ ಬದುಕುತ್ತಿದ್ದಾರೆ. ತಂತ್ರಜ್ಞಾನ ಹಾಗೂ ಕೃತಕ ಬುದ್ಧಿಮತ್ತೆ ವೇಗವಾಗಿ ಬೆಳೆಯುತ್ತಿರುವ ಸಂದರ್ಭದಲ್ಲಿ, ಕೃತಕ ಬುದ್ಧಿಮತ್ತೆಯು ಮಾನವನ ವಿವೇಕ, ಸಹಾನುಭೂತಿ, ಪ್ರಾಮಾಣಿಕತೆ ಹಾಗೂ ಸರಿಯಾದ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯಕ್ಕೆ ಪರ್ಯಾಯವಾಗಲು ಸಾಧ್ಯವಿಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.

Presidency

ಘಟಿಕೋತ್ಸವದ ಅಧ್ಯಕ್ಷತೆಯನ್ನು ವಿಶ್ವವಿದ್ಯಾಲಯದ ಕುಲಪತಿ ಡಾ. ನಿಸ್ಸಾರ್ ಅಹಮದ್ ವಹಿಸಿದ್ದರು. ಈ ಸಂದರ್ಭದಲ್ಲಿ ಉಪಕುಲಪತಿ ಡಾ. ತಿರುವೇಂಗಡಂ, ಪ್ರೊವೋಸ್ಟ್ ಡಾ. ದಿನೇಶ್ ನಿಲಕಾಂತ್, ಸಹ ಉಪಕುಲಪತಿಗಳಾದ ಡಾ. ವಿದ್ಯಾ ಶಂಕರ್ ಶೆಟ್ಟಿ ಮತ್ತು ಡಾ. ಶಿವ ಪೆರುಮಾಳ್, ಸಂಸ್ಥಾಪಕ ಟ್ರಸ್ಟಿ ಕೌಸರ್ ನಿಸ್ಸಾರ್, ಉಪಾಧ್ಯಕ್ಷ ಸುಹೇಲ್ ಅಹಮದ್, ಉಪಾಧ್ಯಕ್ಷ ಸಲ್ಮಾನ್ ಅಹಮದ್, ಪ್ರೆಸಿಡೆನ್ಸಿ ಗ್ರೂಪ್ ಆಫ್ ಸ್ಕೂಲ್ಸ್ ನಿರ್ದೇಶಕಿ ಡಾ. ನಫೀಸಾ ಅಹಮದ್ ಸೇರಿದಂತೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಪದಕ ಗೆದ್ದ ಅಯಿಷಾ

ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ. ವೆಂಕಟೇಶ್ವರನ್ ಎಸ್. ಅವರ ನೇತೃತ್ವದಲ್ಲಿ ಘಟಿಕೋತ್ಸವದ ಮೆರವಣಿಗೆ ನಡೆಯಿತು. ಪದವಿ ಪಡೆದ ವಿದ್ಯಾರ್ಥಿಗಳ ಸಾಧನೆಗೆ ಗಣ್ಯರು ಅಭಿನಂದನೆ ಸಲ್ಲಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More