ಬೆಂಗಳೂರಿನಲ್ಲಿ 208 ಕೋಟಿ ರೂ. ಮೊತ್ತದ ರಾಕೆಟ್ ಎಂಜಿನ್ ಉತ್ಪಾದನಾ ಘಟಕಕ್ಕೆ ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ಬೆಂಗಳೂರಿನಲ್ಲಿ ಹೆಚ್​ಎಎಲ್​ನ ಇಂಟಿಗ್ರೆಟೆಡ್ ಕ್ರಯೊಜಿನಿಕ್ ಎಂಜಿನ್ಸ್ ತಯಾರಿಕಾ ಸೌಲಭ್ಯವನ್ನು ಉದ್ಘಾಟಿಸಲಿದ್ದಾರೆ.

ಬೆಂಗಳೂರಿನಲ್ಲಿ 208 ಕೋಟಿ ರೂ. ಮೊತ್ತದ ರಾಕೆಟ್ ಎಂಜಿನ್ ಉತ್ಪಾದನಾ ಘಟಕಕ್ಕೆ ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ
ರಾಷ್ಟ್ರಪತಿ ದ್ರೌಪದಿ ಮುರ್ಮು
TV9kannada Web Team

| Edited By: Sushma Chakre

Sep 26, 2022 | 3:28 PM

ಬೆಂಗಳೂರು: ಕರ್ನಾಟಕ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡಹಬ್ಬ ದಸರಾ ಉತ್ಸವಕ್ಕೆ (Dasara Festival) ಚಾಲನೆ ನೀಡಿದ್ದಾರೆ. ಇಂದು ಸಂಜೆ ಅವರು ಬೆಂಗಳೂರಿಗೆ ತೆರಳಲಿದ್ದು, ನಾಳೆ ಬೆಂಗಳೂರಿನಲ್ಲಿ 208 ಕೋಟಿ ರೂ. ಮೌಲ್ಯದ ರಾಕೆಟ್ ಇಂಜಿನ್ ಉತ್ಪಾದನಾ ಸೌಲಭ್ಯವನ್ನು ಉದ್ಘಾಟಿಸಲಿದ್ದಾರೆ. 208 ಕೋಟಿ ರೂ. ಮೊತ್ತದ ಇಂಟಿಗ್ರೇಟೆಡ್ ಕ್ರಯೋಜೆನಿಕ್ ಇಂಜಿನ್ ಮ್ಯಾನುಫ್ಯಾಕ್ಚರಿಂಗ್ ಫೆಸಿಲಿಟಿ (ICMF) ಅನ್ನು ಬೆಂಗಳೂರಿನಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸ್ಥಾಪಿಸಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಗೆ ಇದು ಸಂಪೂರ್ಣ ರಾಕೆಟ್ ಎಂಜಿನ್ ತಯಾರಿಕೆ ನಡೆಸಲಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ಬೆಂಗಳೂರಿನಲ್ಲಿ ಹೆಚ್​ಎಎಲ್​ನ ಇಂಟಿಗ್ರೆಟೆಡ್ ಕ್ರಯೊಜಿನಿಕ್ ಎಂಜಿನ್ಸ್ ತಯಾರಿಕಾ ಸೌಲಭ್ಯವನ್ನು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ದಕ್ಷಿಣ ವಲಯ ವೈರಾಣು ಸಂಸ್ಥೆಗೆ ವರ್ಚುಯಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಾಳೆ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಸಮಾರಂಭ ಹಾಗೂ ಕರ್ನಾಟಕ ಸರ್ಕಾರದಿಂದ ಆಯೋಜಿಸಿರುವ ನಾಗರಿಕ ಸನ್ಮಾನ ಸಮಾರಂಭದಲ್ಲಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.

ಇದನ್ನೂ ಓದಿ: President Droupadi Murmu Speech: ಕನ್ನಡದಲ್ಲಿ ಭಾಷಣ ಆರಂಭಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೆಪ್ಟೆಂಬರ್ 28ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕರ್ನಾಟಕ ಪ್ರವಾಸ ಮುಗಿಸಿ ನವದೆಹಲಿಗೆ ವಾಪಸ್ಸಾಗಲಿದ್ದಾರೆ. ಸೆಪ್ಟೆಂಬರ್ 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು 4,500 ಚದರ ಮೀಟರ್ ಜಾಗದಲ್ಲಿ ನಿರ್ಮಿಸಲಾದ ಅತ್ಯಾಧುನಿಕ ICMF ಅನ್ನು ಉದ್ಘಾಟಿಸಲಿದ್ದಾರೆ. ಎಚ್‌ಎಎಲ್‌ನ ಏರೋಸ್ಪೇಸ್ ವಿಭಾಗದಲ್ಲಿ ಕ್ರಯೋಜೆನಿಕ್ ಎಂಜಿನ್ ಮಾಡ್ಯೂಲ್‌ಗಳನ್ನು ಉತ್ಪಾದಿಸುವ ಸೌಲಭ್ಯವನ್ನು ಸ್ಥಾಪಿಸಲು 2013ರಲ್ಲಿ ಇಸ್ರೋದೊಂದಿಗೆ ಎಂಒಯುಗೆ ಸಹಿ ಹಾಕಲಾಯಿತು. ನಂತರ 208 ಕೋಟಿ ರೂ. ಹೂಡಿಕೆಯೊಂದಿಗೆ ICMF ಸ್ಥಾಪನೆಗೆ ಅವಕಾಶ ಕಲ್ಪಿಸಲು 2016ರಲ್ಲಿ ಒಪ್ಪಂದವನ್ನು ನವೀಕರಿಸಲಾಯಿತು.

ಕ್ರಯೋಜೆನಿಕ್ ಇಂಜಿನ್‌ಗಳು ವಿಶ್ವಾದ್ಯಂತ ಉಡಾವಣಾ ವಾಹನಗಳಲ್ಲಿ ಹೆಚ್ಚಾಗಿ ಬಳಸುವ ಎಂಜಿನ್‌ಗಳಾಗಿವೆ. ಫ್ರಾನ್ಸ್, ಚೀನಾ, ಜಪಾನ್, ರಷ್ಯಾ ಮತ್ತು ಅಮೆರಿಕಾ ಈ ಕೆಲವೇ ರಾಷ್ಟ್ರಗಳು ಕ್ರಯೋಜೆನಿಕ್ ಎಂಜಿನ್‌ನ ಸಂಕೀರ್ಣತೆಯಿಂದಾಗಿ ಇಲ್ಲಿಯವರೆಗೆ ಕ್ರಯೋಜೆನಿಕ್ ತಂತ್ರಜ್ಞಾನವನ್ನು ಕರಗತ ಮಾಡಿಕೊಂಡಿವೆ. 2014ರಲ್ಲಿ GSLV-D5 ಅನ್ನು ಕ್ರಯೋಜೆನಿಕ್ ಎಂಜಿನ್ ಬಳಸಿ ಯಶಸ್ವಿಯಾಗಿ ಹಾರಿಸುವ ಮೂಲಕ ಭಾರತವು ಕ್ರಯೋಜೆನಿಕ್ ಎಂಜಿನ್‌ಗಳನ್ನು ಅಭಿವೃದ್ಧಿಪಡಿಸಿದ 6ನೇ ರಾಷ್ಟ್ರವೆಂಬ ಖ್ಯಾತಿಗೆ ಪಾತ್ರವಾಯಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada