President Droupadi Murmu: ಎಚ್​ಎಎಲ್​ನಲ್ಲಿ 208 ಕೋಟಿ ಮೊತ್ತದ ರಾಕೆಟ್ ಎಂಜಿನ್ ಉತ್ಪಾದನಾ ಘಟಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ

ಮುಂದಿನ ದಿನಗಳಲ್ಲಿ ಇಸ್ರೋಗೆ ಈ ಘಟಕವು ಪೂರ್ಣ ಪ್ರಮಾಣದಲ್ಲಿ ಸಿದ್ಧಗೊಂಡಿರುವ ರಾಕೆಟ್ ಎಂಜಿನ್​ಗಳನ್ನು ಪೂರೈಸಲಿದೆ.

President Droupadi Murmu: ಎಚ್​ಎಎಲ್​ನಲ್ಲಿ 208 ಕೋಟಿ ಮೊತ್ತದ ರಾಕೆಟ್ ಎಂಜಿನ್ ಉತ್ಪಾದನಾ ಘಟಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ
ರಾಷ್ಟ್ರಪತಿ ದ್ರೌಪದಿ ಮುರ್ಮು (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 27, 2022 | 8:07 AM

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಇದೀಗ ಕರ್ನಾಟಕ ಪ್ರವಾಸದಲ್ಲಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡಹಬ್ಬ ದಸರಾ ಉತ್ಸವಕ್ಕೆ (Dasara Festival) ನಿನ್ನೆಯಷ್ಟೇ ಚಾಲನೆ ನೀಡಿದ್ದ ಅವರು, ಇಂದು ಬೆಂಗಳೂರಿನಲ್ಲಿ ₹ 208 ಕೋಟಿ ಮೊತ್ತದಲ್ಲಿ ಸಿದ್ಧಗೊಂಡಿರುವ ರಾಕೆಟ್ ಇಂಜಿನ್ ಉತ್ಪಾದನಾ ಘಟಕವನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ಎಚ್​ಎಎಲ್ (Hindustan Aeronautics Limited – HAL) ಈ ಘಟಕವನ್ನು ಇಸ್ರೋ (Indian Space Research Organisation – ISRO) ಸಂಸ್ಥೆಗಾಗಿ ಸ್ಥಾಪಿಸಿದೆ. ಈ ಘಟಕವನ್ನು ‘ಇಂಟಿಗ್ರೇಟೆಡ್ ಕ್ರಯೋಜೆನಿಕ್ ಇಂಜಿನ್ ಮ್ಯಾನುಫ್ಯಾಕ್ಚರಿಂಗ್ ಫೆಸಿಲಿಟಿ’ಗೆ (Integrated Cryogenic Engine Manufacturing Facility – ICMF) ಎಂದು ಕರೆಯಲಾಗುತ್ತದೆ.

ಮುಂದಿನ ದಿನಗಳಲ್ಲಿ ಇಸ್ರೋಗೆ ಈ ಘಟಕವು ಪೂರ್ಣ ಪ್ರಮಾಣದಲ್ಲಿ ಸಿದ್ಧಗೊಂಡಿರುವ ರಾಕೆಟ್ ಎಂಜಿನ್​ಗಳನ್ನು ಪೂರೈಸಲಿದೆ. ಎಚ್‌ಎಎಲ್‌ನ ಏರೋಸ್ಪೇಸ್ ವಿಭಾಗದಲ್ಲಿ ಕ್ರಯೋಜೆನಿಕ್ ಎಂಜಿನ್ ಮಾಡ್ಯೂಲ್‌ಗಳನ್ನು ಉತ್ಪಾದಿಸುವ ಸೌಲಭ್ಯವನ್ನು ಸ್ಥಾಪಿಸಲು 2013ರಲ್ಲಿ ಇಸ್ರೋದೊಂದಿಗೆ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಯಿತು. ನಂತರ ₹ 208 ಕೋಟಿ ಹೂಡಿಕೆಯೊಂದಿಗೆ ICMF ಸ್ಥಾಪನೆಗೆ ಅವಕಾಶ ಕಲ್ಪಿಸಲು 2016ರಲ್ಲಿ ಒಪ್ಪಂದವನ್ನು ನವೀಕರಿಸಲಾಯಿತು.

ಕ್ರಯೋಜೆನಿಕ್ ಇಂಜಿನ್‌ಗಳು ವಿಶ್ವಾದ್ಯಂತ ಉಡಾವಣಾ ವಾಹನಗಳಲ್ಲಿ ಹೆಚ್ಚಾಗಿ ಬಳಸುವ ಎಂಜಿನ್‌ಗಳಾಗಿವೆ. ಫ್ರಾನ್ಸ್, ಚೀನಾ, ಜಪಾನ್, ರಷ್ಯಾ ಮತ್ತು ಅಮೆರಿಕಾ ಈ ಕೆಲವೇ ರಾಷ್ಟ್ರಗಳು ಕ್ರಯೋಜೆನಿಕ್ ಎಂಜಿನ್‌ ತಯಾರಿಕೆ ತಂತ್ರಜ್ಞಾನವನ್ನು ಕರಗತ ಮಾಡಿಕೊಂಡಿವೆ. ಅತ್ಯಂತ ಸಂಕೀರ್ಣವಾದ ಈ ಎಂಜಿನ್​ಗಳ ತಯಾರಿಗೆ ಇದೀಗ ಭಾರತವೂ ಮುಂದಾಗಿದೆ. 2014ರಲ್ಲಿ GSLV-D5 ಅನ್ನು ಕ್ರಯೋಜೆನಿಕ್ ಎಂಜಿನ್ ಬಳಸಿ ಯಶಸ್ವಿಯಾಗಿ ಹಾರಿಸುವ ಮೂಲಕ ಭಾರತವು ಕ್ರಯೋಜೆನಿಕ್ ಎಂಜಿನ್‌ಗಳನ್ನು ಅಭಿವೃದ್ಧಿಪಡಿಸಿದ 6ನೇ ರಾಷ್ಟ್ರವೆಂಬ ಖ್ಯಾತಿಗೆ ಪಾತ್ರವಾಯಿತು.

ಬೆಂಗಳೂರಿನಲ್ಲಿ ಹಲವು ಕಾರ್ಯಕ್ರಮ

ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ (ಸೆ 27) ಬೆಂಗಳೂರಿನಲ್ಲಿ ಇಂಟಿಗ್ರೆಟೆಡ್ ಕ್ರಯೊಜಿನಿಕ್ ಎಂಜಿನ್ಸ್ ತಯಾರಿಕಾ ಸೌಲಭ್ಯವನ್ನು ಉದ್ಘಾಟನಾ ಸಮಾರಂಭದೊಂದಿಗೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ದಕ್ಷಿಣ ವಲಯ ವೈರಾಣು ಸಂಸ್ಥೆಗೆ ವರ್ಚುಯಲ್ ಆಗಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಸಮಾರಂಭ ಹಾಗೂ ಕರ್ನಾಟಕ ಸರ್ಕಾರದಿಂದ ಆಯೋಜಿಸಿರುವ ನಾಗರಿಕ ಸನ್ಮಾನ ಸಮಾರಂಭದಲ್ಲಿಯೂ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.

Published On - 8:07 am, Tue, 27 September 22

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ