ಜಾಮೀನು ಪಡೆದ್ರೂ ಕರವೇ ಅಧ್ಯಕ್ಷ ನಾರಾಯಣಗೌಡಗೆ ತಪ್ಪದ ಸಂಕಷ್ಟ: ಮತ್ತೆ ವಶಕ್ಕೆ ಪಡೆಯಲು ಪೊಲೀಸ್​ ಚಿಂತನೆ

ಜಾಮೀನು ಪಡೆದರು ಕೂಡ ಅಧ್ಯಕ್ಷ ನಾರಾಯಣಗೌಡಗೆ ಸಂಕಷ್ಟ ತಪ್ಪಿಲ್ಲ. ಏಕೆಂದರೆ ಹಳೇ ಪ್ರಕರಣಗಳ ಸಂಬಂಧ ವಾರಂಟ್ ಮೇಲೆ ಮತ್ತೆ ಕಸ್ಟಡಿಗೆ ಪಡೆಯಲು ಕುಮಾರಸ್ವಾಮಿಲೇಔಟ್‌, ಹಲಸೂರು ಗೇಟ್ ಠಾಣೆ ಪೊಲೀಸರಿಂದ ಸಿದ್ಧತೆ ಮಾಡಲಾಗುತ್ತಿದೆ. ಆ ಮೂಲಕ ನಾರಾಯಣಗೌಡನನ್ನು ವಶಕ್ಕೆ ಪಡೆಯಲು ಪೊಲೀಸರು ಚಿಂತನೆ ನಡೆಸುತ್ತಿದ್ದಾರೆ.

ಜಾಮೀನು ಪಡೆದ್ರೂ ಕರವೇ ಅಧ್ಯಕ್ಷ ನಾರಾಯಣಗೌಡಗೆ ತಪ್ಪದ ಸಂಕಷ್ಟ: ಮತ್ತೆ ವಶಕ್ಕೆ ಪಡೆಯಲು ಪೊಲೀಸ್​ ಚಿಂತನೆ
ಕರವೇ ಅಧ್ಯಕ್ಷ ನಾರಾಯಣಗೌಡ
Follow us
ರಾಚಪ್ಪಾಜಿ ನಾಯ್ಕ್
| Updated By: ಗಂಗಾಧರ​ ಬ. ಸಾಬೋಜಿ

Updated on:Jan 06, 2024 | 7:25 PM

ಬೆಂಗಳೂರು, ಜನವರಿ 06: ಆಂಗ್ಲ ನಾಮಫಲಕ ವಿರುದ್ಧ ಹೋರಾಟ ಮಾಡಿದ್ದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ (Narayana Gowda) ಗೆ ಜಾಮೀನು ಮಂಜೂರು ಮಾಡಲಾಗಿದೆ. ಜಾಮೀನು ಪಡೆದರು ಕೂಡ ಅಧ್ಯಕ್ಷ ನಾರಾಯಣಗೌಡಗೆ ಸಂಕಷ್ಟ ತಪ್ಪಿಲ್ಲ. ಏಕೆಂದರೆ ಹಳೇ ಪ್ರಕರಣಗಳ ಸಂಬಂಧ ವಾರಂಟ್ ಮೇಲೆ ಮತ್ತೆ ಕಸ್ಟಡಿಗೆ ಪಡೆಯಲು ಕುಮಾರಸ್ವಾಮಿಲೇಔಟ್‌, ಹಲಸೂರು ಗೇಟ್ ಠಾಣೆ ಪೊಲೀಸರಿಂದ ಸಿದ್ಧತೆ ಮಾಡಲಾಗುತ್ತಿದೆ.

ಹಿರಿಯ ಅಧಿಕಾರಿಗಳ ಸೂಚನೆಯಂತೆ ನಾರಾಯಣಗೌಡ ವಿರುದ್ಧದ ಹಳೇ ಕೇಸ್​ಗಳನ್ನು ಪೊಲೀಸರು ಕೆದಕುತ್ತಿದ್ದಾರೆ. ಬೆಂಗಳೂರಿನ ಎಲ್ಲಾ ಠಾಣೆಗಳ ಕೇಸ್ ರೀಓಪನ್ ಮಾಡಿ ನಾರಾಯಣಗೌಡನನ್ನು ವಶಕ್ಕೆ ಪಡೆಯಲು ಪೊಲೀಸರು ಚಿಂತನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕರವೇ ಅಧ್ಯಕ್ಷ ನಾರಾಯಣಗೌಡಗೆ ಜಾಮೀನು ಮಂಜೂರು ಮಾಡಿದ ದೇವನಹಳ್ಳಿ ಕೋರ್ಟ್

2017ರಲ್ಲಿ ಎನ್​ಡಿಎಂಎ ಆ್ಯಕ್ಟ್​ನಡಿ ಹಲಸೂರು ಗೇಟ್ ಠಾಣೆಯಲ್ಲಿ ಒಂದು ಪ್ರಕರಣ, ಕುಮಾರಸ್ವಾಮಿ ಲೇಔಟ್‌ ಠಾಣೆಯಲ್ಲಿ ಮತ್ತೊಂದು ಕೇಸ್‌ ದಾಖಲಾಗಿದ್ದವು. ಈ ಕೇಸ್ ಸಂಬಂಧ ನಾರಾಯಣಗೌಡ ವಿರುದ್ಧ  NBW ಜಾರಿ ಮಾಡಲಾಗಿತ್ತು. ಇವೆರಡು ಕೇಸ್‌ಗಳ ಸಂಬಂಧ ವಾರಂಟ್ ಮೇಲೆ ಕಸ್ಟಡಿಗೆ ಪಡೆಯಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ನಾರಾಯಣಗೌಡ ಸೇರಿದಂತೆ 33 ಕರವೇ ಕಾರ್ಯಕರ್ತರಿಗೂ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ ನ್ಯಾಯಾಧೀಶ ಬಿರಾದಾರ್ ದೇವೇಂದ್ರಪ್ಪ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಜಲಶಕ್ತಿ ಮಂತ್ರಿಗಳ ಜೊತೆ ಕರವೇ ನಾರಾಯಣ ಗೌಡ ಭೇಟಿಗೆ ಅವಕಾಶ; ಪ್ರಹ್ಲಾದ್ ಜೋಶಿ

ಕನ್ನಡದಲ್ಲಿ ನಾಮಫಲಕ ಅಳವಡಿಸುವಂತೆ ಪ್ರತಿಭಟನೆ ನಡೆಸಿದ್ದರು. ನಾರಾಯಣಗೌಡ ವಿರುದ್ಧ ಚಿಕ್ಕಜಾಲ ಠಾಣೆಯಲ್ಲಿ ದೂರು ದಾಖಲಾಗಿದ್ದು, ಡಿ.27ರಂದು ಬಂಧಿಸಲಾಗಿತ್ತು.

ನಾರಾಯಣಗೌಡ ಬಂಧನಕ್ಕೆ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಕೋಲಾರ ಜಿಲ್ಲೆಯಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಾಲೂರು ಪಟ್ಟಣದ ಮಾರಿಕಾಂಬ ವೃತ್ತದಲ್ಲಿ ಬೆಂಗಳೂರು-ಮಾಲೂರು-ಹೊಸೂರು ಮಾರ್ಗದ ರಸ್ತೆ ತಡೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದರು. ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:21 pm, Sat, 6 January 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ