ಬೆಂಗಳೂರು: ರಾಜಾಧಿರಾಜ ಗೋವಿಂದ ದೇವಸ್ಥಾನ ಲೋಕಾರ್ಪಣೆ ಮಾಡಿದ ರಾಷ್ಟ್ರಪತಿ ರಾಮನಾಥ ಕೋವಿಂದ್

ಇಸ್ಕಾನ್ ಪ್ರಕಾರ, ಕನಕಪುರ ರಸ್ತೆಯಲ್ಲಿರುವ ವೈಕುಂಠ ಬೆಟ್ಟದಲ್ಲಿರುವ ಶ್ರೀ ರಾಜಾಧಿರಾಜ ಗೋವಿಂದ ದೇವಸ್ಥಾನವು ಸಾಂಪ್ರದಾಯಿಕ, ಕಲ್ಲಿನ ಕೆತ್ತಿದ ರಚನೆಯಾಗಿದೆ. ಇದು ಆಂಧ್ರಪ್ರದೇಶದ ತಿರುಮಲದಲ್ಲಿರುವ ಪ್ರಸಿದ್ಧ ಶ್ರೀ ವೆಂಕಟೇಶ್ವರ ದೇವಸ್ಥಾನದ ಪ್ರತಿರೂಪವಾಗಿದೆ

ಬೆಂಗಳೂರು: ರಾಜಾಧಿರಾಜ ಗೋವಿಂದ ದೇವಸ್ಥಾನ ಲೋಕಾರ್ಪಣೆ ಮಾಡಿದ ರಾಷ್ಟ್ರಪತಿ ರಾಮನಾಥ ಕೋವಿಂದ್
ರಾಷ್ಟ್ರಪತಿ ರಾಮನಾಥ ಕೋವಿಂದ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jun 14, 2022 | 2:21 PM

ಬೆಂಗಳೂರು: ಇಸ್ಕಾನ್ ನಿರ್ಮಿಸಿರುವ ರಾಜಾಧಿರಾಜ ಗೋವಿಂದ ದೇವಾಲಯವನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಮಂಗಳವಾರ ಲೋಕಾರ್ಪಣೆ ಮಾಡಿದ್ದಾರೆ. ಕನಕಪುರ ರಸ್ತೆಯ ವಸಂತಪುರದಲ್ಲಿ ನಿರ್ಮಿಸಲಾಗಿರುವ ದೇವಾಲಯಕ್ಕೆ ಕೋವಿಂದ್ ಪತ್ನಿ ಸವಿತಾ ಜತೆ ಆಗಮಿಸಿದ್ದು ದೇವರ ದರ್ಶನ ಪಡೆದಿದ್ದಾರೆ. ದೇವರ ದರ್ಶನ ನಂತರ ಉದ್ಘಾಟನಾ ಕಾರ್ಯಕ್ರಮ ನಡೆದಿದೆ. ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಇಸ್ಕಾನ್ (International Society for Krishna Consciousness) ಪ್ರಕಾರ, ಕನಕಪುರ ರಸ್ತೆಯಲ್ಲಿರುವ ವೈಕುಂಠ ಬೆಟ್ಟದಲ್ಲಿರುವ ಶ್ರೀ ರಾಜಾಧಿರಾಜ ಗೋವಿಂದ ದೇವಸ್ಥಾನವು ಸಾಂಪ್ರದಾಯಿಕ, ಕಲ್ಲಿನ ಕೆತ್ತಿದ ರಚನೆಯಾಗಿದೆ. ಇದು ಆಂಧ್ರಪ್ರದೇಶದ ತಿರುಮಲದಲ್ಲಿರುವ ಪ್ರಸಿದ್ಧ ಶ್ರೀ ವೆಂಕಟೇಶ್ವರ ದೇವಸ್ಥಾನದ ಪ್ರತಿರೂಪವಾಗಿದೆ. ಇಲ್ಲಿರುವಶ್ರೀನಿವಾಸ ದೇವರು ಕೂಡಾ ಸರಿಸುಮಾರು ಅದೇ ಎತ್ತರವಿದ್ದು ಶ್ರೀ ರಾಜಾಧಿರಾಜ ಗೋವಿಂದ ಎಂದು ಹೆಸರಿಸಲಾಗಿದೆ, ಅಂದರೆ ಅವನು ರಾಜರ ರಾಜ ಎಂದು ಇಸ್ಕಾನ್ ಹೇಳಿದೆ.

ಈ ದೇವಾಲಯವು ಮಕ್ಕಳು, ಯುವಕರು ಮತ್ತು ಕುಟುಂಬಗಳ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಶಿಕ್ಷಣಕ್ಕಾಗಿ ಸೌಲಭ್ಯಗಳನ್ನು ಹೊಂದಿರುತ್ತದೆ. ರಾಜಾಧಿರಾಜ ಶ್ರೀ ಗೋವಿಂದ ಮತ್ತು ಇತರ ದೇವತೆಗಳ ದರ್ಶನಕ್ಕಾಗಿ ಭಕ್ತರು ಆರಾಮವಾಗಿ ಕಾಯಲು ದೊಡ್ಡ ಸರತಿ ಸಭಾಂಗಣ ಲಭ್ಯವಿರುತ್ತದೆ. ಉಚಿತ ಅನ್ನದಾನ ಹಾಲ್  ಇಲ್ಲಿರಲಿದ್ದು. ದಾನಿಗಳು ಮತ್ತು ಪೋಷಕರ ಉದಾರ ಕೊಡುಗೆಯೊಂದಿಗೆ ಈ ಸಂಕೀರ್ಣವನ್ನು ನಿರ್ಮಿಸಲಾಗಿದೆ. ದೇವಾಲಯದಿಂದ ಲಭ್ಯವಿರುವ ಮಾಹಿತಿಯ ಪ್ರಕಾರ ಈ ಕ್ಯಾಂಪಸ್ ಆಗಸ್ಟ್ 1, 2022 ರಿಂದ ಸಾರ್ವಜನಿಕರಿಗೆ ಸಂಪೂರ್ಣವಾಗಿ ತೆರೆದಿರುತ್ತದೆ.

ಗೋವಾ ಪ್ರವಾಸ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಗಳವಾರ ಗೋವಾ ಪ್ರವಾಸವನ್ನು ಕೈಗೊಳ್ಳಲಿದ್ದು, ಈ ಸಂದರ್ಭದಲ್ಲಿ ಅವರು ಹೊಸ ರಾಜಭವನಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ರಾಷ್ಟ್ರಪತಿಗಳು ಬುಧವಾರ ರಾಜ್ಯ ರಾಜಧಾನಿಯ ಡೋನಾ ಪೌಲಾ ಪ್ರದೇಶದಲ್ಲಿ ಹೊಸ ರಾಜಭವನಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮೇ 30 ರಂದು ಗೋವಾ ರಾಜ್ಯೋತ್ಸವ ದಿನದಂದು ಅವರು ಶಂಕುಸ್ಥಾಪನೆ ಮಾಡಬೇಕಿತ್ತು, ಆದರೆ ಅದನ್ನು ರದ್ದುಗೊಳಿಸಿ ಮರು ನಿಗದಿಪಡಿಸಲಾಯಿತು. ಗೋವಾ ರಾಜ್ಯಪಾಲ ಪಿ.ಎಸ್. ಶ್ರೀಧರನ್‌ ಪಿಳ್ಳೈ, ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಮತ್ತು ಸಚಿವ ಸಂಪುಟ ಬುಧವಾರದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದೆ.

ರಾಜ್ಯದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 1:42 pm, Tue, 14 June 22

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ