ರಾಷ್ಟ್ರಪತಿ ಚುನಾವಣೆ: ಮಮತಾ ಬ್ಯಾನರ್ಜಿ ಕರೆದಿರುವ ಸಭೆಯಲ್ಲಿ ಹೆಚ್.ಡಿ. ದೇವೆಗೌಡ ಮತ್ತು ಹೆಚ್. ಡಿ ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ
ರಾಷ್ಟ್ರಪತಿ ಚುನಾವಣೆ ಸಂಬಂಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕರೆದಿರುವ ಪ್ರತಿಪಕ್ಷಗಳ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಾಳೆ (ಜೂನ್ 15) ರಂದು ಬೆಳಗ್ಗೆ ನವದೆಹಲಿಗೆ ತೆರಳಿದ್ದಾರೆ.
ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಸಂಬಂಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕರೆದಿರುವ ಪ್ರತಿಪಕ್ಷಗಳ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಾಳೆ (ಜೂನ್ 15) ರಂದು ಬೆಳಗ್ಗೆ ನವದೆಹಲಿಗೆ ತೆರಳಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ ಅವರು “ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಒಕ್ಕೂಟದಿಂದ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಸಲು ಮಮತಾ ಬ್ಯಾನರ್ಜಿ ಅವರು ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ನಲ್ಲಿ ಮಧ್ಯಾಹ್ನ 3ಕ್ಕೆ ನಡೆಯುವ ಸಭೆ ಕರೆದಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ: ಭಾರತೀಯರಿಗೆ 2 ವರ್ಷಗಳ ಕೊವಿಡ್ ವೀಸಾ ನಿಷೇಧವನ್ನು ತೆಗೆದು ಹಾಕಿದ ಚೀನಾ: ವರದಿ
ಈ ಸಭೆಯಲ್ಲಿ ಪಾಲ್ಗೊಳ್ಳಬೇಕು ಅವರು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರಿಗೆ ಹಾಗೂ ನನಗೆ ವೈಯಕ್ತಿಕವಾಗಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಹೀಗಾಗಿ ನಾವಿಬ್ಬರೂ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದೇವೆ” ಎಂದಿದ್ದಾರೆ.
ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಎಲ್ಲ ಪ್ರಾದೇಶಿಕ ಪಕ್ಷಗಳ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಮಮತಾ ಬ್ಯಾನರ್ಜಿ ಅವರು ಪ್ರಯತ್ನಗಳನ್ನು ಆರಂಭಿಸಿದ್ದು, ಸುಮಾರು ಇಪ್ಪತ್ತೆರಡಕ್ಕೂ ಹೆಚ್ಚು ಪಕ್ಷಗಳ ನಾಯಕರನ್ನು ಸಭೆಗೆ ಆಹ್ವಾನಿಸಿದ್ದಾರೆ. ಆದರೆ, ಜೆಡಿಎಸ್ ಪಕ್ಷದಿಂದ ಇಬ್ಬರು ನಾಯಕರನ್ನು ಅವರು ವೈಯಕ್ತಿವಾಗಿ ಆಹ್ವಾನಿಸಿದ್ದಾರೆಂದು ತಿಳಿಸಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.