AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಕುಟುಂಬದ 7 ಜನರ ಹತ್ಯೆ ಪ್ರಕರಣ: ಖತರ್ನಾಕ್​​ ಪ್ಲ್ಯಾನ್​​ ಮಾಡಿ ಶವಗಳನ್ನು ಸಾಗಿಸಿದ್ದ ಆರೋಪಿ ಇಂದುಶೇಖರ್​​!

ಬೆಂಗಳೂರಿನ ಒಂದೇ ಕುಟುಂಬದ 7 ಜನರ ಭೀಕರ ಕೊಲೆ ಪ್ರಕರಣದಲ್ಲಿ ಆರೋಪಿ ಇಂದುಶೇಖರ್ 'ಪ್ರೆಸ್' ಬ್ಯಾನರ್ ಇದ್ದ ಕಾರಿನಲ್ಲಿ ಶವಗಳನ್ನು ಸಾಗಿಸಿದ್ದು, ದುರ್ವಾಸನೆ ಬಾರದಂತೆ ಪರ್ಫ್ಯೂಮ್ ಬಳಸಿ ತಪಾಸಣೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು ತನಿಖೆಯಲ್ಲಿ ಬಯಲಾಗಿದೆ. ಇನ್ನು ಪೊಲೀಸರು ವಶಪಡಿಸಿಕೊಂಡಿರುವ ಕಾರಿನ ಮೇಲೆ ಸಂಚಾರ ನಿಯಮ ಉಲ್ಲಂಘನೆಗಾಗಿ ಬರೋಬ್ಬರಿ 14,900 ರೂಪಾಯಿ ದಂಡ ಬಾಕಿ ಇದೆ ಎನ್ನಲಾಗಿದೆ.

ಒಂದೇ ಕುಟುಂಬದ 7 ಜನರ ಹತ್ಯೆ ಪ್ರಕರಣ: ಖತರ್ನಾಕ್​​ ಪ್ಲ್ಯಾನ್​​ ಮಾಡಿ ಶವಗಳನ್ನು ಸಾಗಿಸಿದ್ದ ಆರೋಪಿ ಇಂದುಶೇಖರ್​​!
ಖತರ್ನಾಕ್​​ ಪ್ಲ್ಯಾನ್​​ ಮಾಡಿ ಶವಗಳನ್ನು ಸಾಗಿಸಿದ್ದ ಆರೋಪಿ ಇಂದುಶೇಖರ್
ಪ್ರಸನ್ನ ಹೆಗಡೆ
|

Updated on: Nov 08, 2026 | 6:49 AM

Share

ಬೆಂಗಳೂರು, ನವೆಂಬರ್​​ 08: ಒಂದೇ ಕುಟುಂಬದ ಏಳು ಸದಸ್ಯರ ಹತ್ಯೆ ಪ್ರಕರಣ ಸಂಬಂಧ ಬಗೆದಷ್ಟೂ ಮಾಹಿತಿ ಬಯಲಾಗುತ್ತಿದ್ದು, ಶವ ಸಾಗಿಸಲು ಆರೋಪಿ ಇಂದುಶೇಖರ್​​ ಏನೆಲ್ಲ ಕಸರತ್ತು ನಡೆಸಿದ್ದ ಎಂಬುದೀಗ ಬಯಲಾಗಿದೆ. ಆತ ಬಳಸುತ್ತಿದ್ದ ಕಾರಿನ ಮೇಲೆ ‘ಪ್ರೆಸ್’ ಎಂದು ಬರೆದಿರುವ ಸ್ಟಿಕ್ಕರ್ ಅಂಟಿಸಲಾಗಿತ್ತು. ಅಷ್ಟೇ ಅಲ್ಲ, ಕಾರಿನ ಡಿಕ್ಕಿಯ ಮೇಲ್ಭಾಗದಲ್ಲಿ ಪತ್ರಿಕೆಯೊಂದರ ಬ್ಯಾನರ್ ಕೂಡ ಹಾಕಲಾಗಿತ್ತು. ಪೊಲೀಸರ ಕಣ್ತಪ್ಪಿಸಿ ಮೃತದೇಹಗಳನ್ನು ಸಾಗಿಸಲು ಆತ ಈ ಕಾರನ್ನೇ ಬಂಡವಾಳ ಮಾಡಿಕೊಂಡಿದ್ದ ಎನ್ನಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಆತ ಯಾವುದೇ ಆತಂಕವಿಲ್ಲದೆ ಮೃತದೇಹಗಳನ್ನು ಸಾಗಿಸುತ್ತಿದ್ದ. ಮೃತದೇಹಗಳನ್ನು ಸಾಗಿಸುವಾಗ ಮತ್ತು ವಿವಿಧ ಸ್ಥಳಗಳಲ್ಲಿ ವಿಲೇವಾರಿ ಮಾಡುವಾಗ, ವಿಶೇಷವಾಗಿ ಹೊಸೂರು ಸಮೀಪದ ಗಡಿ ದಾಟುವಾಗ ಕಾರಿನ ಮೇಲೆ ಈ ಬರಹಗಳಿರುವ ಕಾರಣ ಪೊಲೀಸರ ಕೈಗೆ ಸಿಕ್ಕಿಹಾಕಿಕೊಳ್ಳುವ ಸಾಧ್ಯತೆಯೇ ಇಲ್ಲ ಎಂಬುದು ಆತನ ಲೆಕ್ಕಾಚಾರವಾಗಿತ್ತು ಎಂದು ಮೂಲಗಳು ತಿಳಿಸಿವೆ. ಮೃತದೇಹಗಳನ್ನು ಸಾಗಿಸಲು ಆತ ಬಳಸಿದ್ದ ಎನ್ನಲಾದ ಟೊಯೊಟಾ ಎಟಿಯೋಸ್ ಕಾರನ್ನು ಈಗ ಪೊಲೀಸರು ಇದೀಗ ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 7 ಜನರ ಕೊಲೆ ಪ್ರಕರಣ: ಕಿರುಚಾಟ ಇಲ್ಲ, ಅನುಮಾನ ಬರುವ ಯಾವ ಚಟುವಟಿಕೆಯೂ ನಡೆದಿಲ್ಲ, ಸ್ಫೋಟಕ ಹೇಳಿಕೆ ನೀಡಿದ ನೆರೆಹೊರೆಯವರು

ಕಾರಿನ ಮೇಲಿದೆ 14,900 ರೂ. ಸಂಚಾರ ನಿಯಮ ಉಲ್ಲಂಘನೆ ದಂಡ!

ಇನ್ನು ಪೊಲೀಸರು ವಶಪಡಿಸಿಕೊಂಡಿರುವ ಕಾರಿನ ಮೇಲೆ ಸಂಚಾರ ನಿಯಮ ಉಲ್ಲಂಘನೆಗಾಗಿ ಬರೋಬ್ಬರಿ 14,900 ರೂಪಾಯಿ ದಂಡ ಬಾಕಿ ಇದೆ ಎನ್ನಲಾಗಿದೆ. ಅಲ್ಲದೆ, ಕಾರಿನೊಳಗೆ ಗಂಧದ ಪರಿಮಳದ ಸುಗಂಧ ದ್ರವ್ಯಗಳು ಹಾಗೂ ಗುಲಾಬಿ ನೀರಿನ ಹಲವು ಬಾಟಲಿಗಳು ಪತ್ತೆಯಾಗಿವೆ. ಮೃತದೇಹಗಳನ್ನು ಸಾಗಿಸುವಾಗ ಹೊರಹೊಮ್ಮುವ ದುರ್ವಾಸನೆಯನ್ನು ಮರೆಮಾಚಲು ಇವುಗಳನ್ನು ಬಳಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಅಪ್ರಾಪ್ತ ಮಗಳನ್ನೇ ಅಸ್ತ್ರವಾಗಿ ಬಳಸಿಕೊಂಡಿದ್ದ ಇಂದುಶೇಖರ್​​

ಪ್ರಾಥಮಿಕ ತನಿಖೆಯ ಪ್ರಕಾರ, ಇಂದುಶೇಖರ್ ತನ್ನ ಅಪ್ರಾಪ್ತ ವಯಸ್ಸಿನ ಮಗಳನ್ನೇ ಜನರನ್ನು ಬೆದರಿಸಲು ಮತ್ತು ಬ್ಲ್ಯಾಕ್‌ಮೇಲ್ ಮಾಡಲು ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದ ಎನ್ನಲಾಗಿದೆ. ತನ್ನ ನಡವಳಿಕೆಯನ್ನು ಪ್ರಶ್ನಿಸುವ ಅಥವಾ ಯಾವುದಾದರೂ ವಿವಾದದ ವಿಚಾರವಾಗಿ ಆತನನ್ನು ಎದುರುಹಾಕಿಕೊಳ್ಳುವವರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ವರ್ಷ ಇಂತಹದ್ದೇ ಒಂದು ಘಟನೆ ನಡೆದಿತ್ತು. ಮನೆಯ ಸಮೀಪ ಕಾರು ಪಾರ್ಕಿಂಗ್ ವಿಚಾರವಾಗಿ ಉಂಟಾದ ವಿವಾದ ತೀವ್ರಗೊಂಡಾಗ, ಚಾಲಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸುವುದಾಗಿ ಇಂದುಶೇಖರ್ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮಧ್ಯಪ್ರವೇಶಿಸಿ ಆತನನ್ನು ಹಾಗೂ ಆತನ ಮಗಳನ್ನು ವಿಚಾರಣೆ ನಡೆಸಿದ್ದರು. ಆರೋಪಗಳಿಗೆ ಯಾವುದೇ ಆಧಾರವಿಲ್ಲದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಇಬ್ಬರಿಗೂ ಬುದ್ಧಿವಾದ ಹೇಳಿ ಕಳುಹಿಸಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರೋದಾಗಿ ಡೆಕ್ಕನ್​​ ಹೆರಾಲ್ಡ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಪೋಲೆಂಡ್‌ನ ಕ್ರಾಕೋವ್‌ನಲ್ಲಿ ಗುಂಡಿನ ದಾಳಿ; 5 ಜನ ಸಾವು
ಪೋಲೆಂಡ್‌ನ ಕ್ರಾಕೋವ್‌ನಲ್ಲಿ ಗುಂಡಿನ ದಾಳಿ; 5 ಜನ ಸಾವು
ವೈಷ್ಣವಿ ಸಾವಿಗೆ ಕಾರಣವಾಯ್ತಾ ಅರಮನೆ ರಸ್ತೆಯ ಪ್ರೀ-ವೆಡ್ಡಿಂಗ್ ಶೂಟಿಂಗ್?
ವೈಷ್ಣವಿ ಸಾವಿಗೆ ಕಾರಣವಾಯ್ತಾ ಅರಮನೆ ರಸ್ತೆಯ ಪ್ರೀ-ವೆಡ್ಡಿಂಗ್ ಶೂಟಿಂಗ್?
ದೀಪಾವಳಿಗೆ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ ಅಯೋಧ್ಯೆ ರಾಮ ಮಂದಿರ
ದೀಪಾವಳಿಗೆ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ ಅಯೋಧ್ಯೆ ರಾಮ ಮಂದಿರ
ಬೆಂಗಳೂರಲ್ಲಿ ಸರಣಿ ಕೊಲೆ ಕೇಸ್: ತಮಿಳುನಾಡಿನ ಸೇಲಂನಲ್ಲಿ ಎರಡು ಶವ ಪತ್ತೆ
ಬೆಂಗಳೂರಲ್ಲಿ ಸರಣಿ ಕೊಲೆ ಕೇಸ್: ತಮಿಳುನಾಡಿನ ಸೇಲಂನಲ್ಲಿ ಎರಡು ಶವ ಪತ್ತೆ
30 ಲಕ್ಷಕ್ಕೂ ಹೆಚ್ಚು ದೀಪಗಳು; ಸರಯೂ ದಡದಲ್ಲಿ ಮತ್ತೊಂದು ವಿಶ್ವದಾಖಲೆ
30 ಲಕ್ಷಕ್ಕೂ ಹೆಚ್ಚು ದೀಪಗಳು; ಸರಯೂ ದಡದಲ್ಲಿ ಮತ್ತೊಂದು ವಿಶ್ವದಾಖಲೆ
ಗಾನವಿ ಮಾಡಿದ ಡ್ರಾಮಾ ಬಯಲು ಮಾಡಿದ ಸುದೀಪ್: ವಿಡಿಯೋ ನೋಡಿ
ಗಾನವಿ ಮಾಡಿದ ಡ್ರಾಮಾ ಬಯಲು ಮಾಡಿದ ಸುದೀಪ್: ವಿಡಿಯೋ ನೋಡಿ
ಬೆಲೆ ಏರಿಕೆ ಭಾಗ್ಯದ ಸರ್ಕಾರವಲ್ಲ, ಗ್ಯಾರಂಟಿಗಳ ಸರ್ಕಾರ: ಡಿಕೆ ಸುರೇಶ್
ಬೆಲೆ ಏರಿಕೆ ಭಾಗ್ಯದ ಸರ್ಕಾರವಲ್ಲ, ಗ್ಯಾರಂಟಿಗಳ ಸರ್ಕಾರ: ಡಿಕೆ ಸುರೇಶ್
ಮಗನ ಸಿನಿಮಾದಿಂದ ಹೊರಹಾಕಿದ ಪ್ರಿಯಾಂಕಾ ಉಪೇಂದ್ರ: ಅಳಲು ತೋಡಿಕೊಂಡ ನಿರ್ದೇಶಕ
ಮಗನ ಸಿನಿಮಾದಿಂದ ಹೊರಹಾಕಿದ ಪ್ರಿಯಾಂಕಾ ಉಪೇಂದ್ರ: ಅಳಲು ತೋಡಿಕೊಂಡ ನಿರ್ದೇಶಕ
ಎಥೆನಾಲ್ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಆರೋಪ ಮಾಡ್ತಿದೆ: ಜೋಶಿ
ಎಥೆನಾಲ್ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಆರೋಪ ಮಾಡ್ತಿದೆ: ಜೋಶಿ
ಪ್ರಿಯಾಂಕ್ ಖರ್ಗೆ ವಿರುದ್ಧ ಮರುಳಾರಾಧ್ಯ ಸ್ವಾಮೀಜಿ ಆಕ್ಷೇಪಾರ್ಹ ಹೇಳಿಕೆ
ಪ್ರಿಯಾಂಕ್ ಖರ್ಗೆ ವಿರುದ್ಧ ಮರುಳಾರಾಧ್ಯ ಸ್ವಾಮೀಜಿ ಆಕ್ಷೇಪಾರ್ಹ ಹೇಳಿಕೆ