AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಚಕರಿಂದ ಹೈಕೋರ್ಟ್ ಮೆಟ್ಟಿಲೇರುವ ಎಚ್ಚರಿಕೆ: ತಮಿಳುನಾಡಿನಂತೆ ಕರ್ನಾಟಕ ದೇವಾಲಯಗಳಲ್ಲೂ ಮೊಬೈಲ್​ ಬ್ಯಾನ್ ಆಗುತ್ತಾ?

ತಮಿಳುನಾಡಿನ ದೇಗುಲಗಳಲ್ಲಿ ಈಗಾಗಲೇ ಮೊಬೈಲ್‌ ಬಳಕೆ ಬ್ಯಾನ್ ಮಾಡಲಾಗಿದೆ. ಅದರಂತೆ ಕರ್ನಾಟಕದ ಮುಜರಾಯಿ ದೇಗುಲದಲ್ಲಿ ಮೊಬೈಲ್ ಬ್ಯಾನ್ ಮಾಡಬೇಕು ಎಂಬ ಕೂಗು ಎದ್ದಿದೆ.

ಅರ್ಚಕರಿಂದ ಹೈಕೋರ್ಟ್ ಮೆಟ್ಟಿಲೇರುವ ಎಚ್ಚರಿಕೆ: ತಮಿಳುನಾಡಿನಂತೆ ಕರ್ನಾಟಕ ದೇವಾಲಯಗಳಲ್ಲೂ ಮೊಬೈಲ್​ ಬ್ಯಾನ್ ಆಗುತ್ತಾ?
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Dec 12, 2022 | 3:49 PM

Share

ಬೆಂಗಳೂರು: ನಗರದ ದೇವಸ್ಥಾನಗಳಲ್ಲಿ ಫೋಟೋ, ಸೆಲ್ಫಿ ತೆಗೆದುಕೊಳ್ಳುವ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಕಳ್ಳತನ, ನೂಕುನುಗ್ಗಲು, ಪೂಜೆಗೆ ಅಡೆತಡೆಯಾಗುತ್ತಿರುವ ಹಿನ್ನೆಲೆ ಇನ್ಮುಂದೆ ಮೊಬೈಲ್ ಬಳಕೆಗೆ ಕಡಿವಾಣ ಹಾಕಲು ಅರ್ಚಕರಿಂದ ಒತ್ತಾಯ ಹೇಳಿ ಬಂದಿದೆ. ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಒಕ್ಕೂಟ ದೇವಸ್ಥಾನಗಳಲ್ಲಿ ಮೊಬೈಲ್ ಬ್ಯಾನ್ ಮಾಡಲು ನಿರ್ಧರಿಸಿದೆ. ಹಾಗಾಗಿ ತಮ್ಮ ಮನವಿಯನ್ನು ಮುಜರಾಯಿ ಇಲಾಖೆಯ ಮುಂದಿಟ್ಟಿದೆ.

ತಮಿಳುನಾಡಿನ ದೇಗುಲಗಳಲ್ಲಿ ಈಗಾಗಲೇ ಮೊಬೈಲ್‌ ಬಳಕೆ ಬ್ಯಾನ್ ಮಾಡಲಾಗಿದೆ. ಅದರಂತೆ ಕರ್ನಾಟಕದ ಮುಜರಾಯಿ ದೇಗುಲದಲ್ಲಿ ಮೊಬೈಲ್ ಬ್ಯಾನ್ ಮಾಡಬೇಕು. ಸದ್ಯ ದೇವಸ್ಥಾನಗಳಲ್ಲಿ ಅರ್ಚಕರ ಮೊಬೈಲ್ ಬಳಕೆಯನ್ನ ಮಾತ್ರ ಬ್ಯಾನ್ ಮಾಡಲಾಗಿದೆ. ಅದರಂತೆ ಭಕ್ತರಿಗೂ ಮೊಬೈಲ್ ಬ್ಯಾನ್ ಮಾಡಬೇಕು. ಮೊಬೈಲ್ ಬಳಕೆಯಿಂದ ದೇವಸ್ಥಾನಗಳಲ್ಲಿ ಸರಿಯಾಗಿ ಪೂಜೆಗಳನ್ನ ಮಾಡುವುದಕ್ಕೆ ಆಗುತ್ತಿಲ್ಲ. ವಿಡಿಯೋ ಮಾಡುವುದು, ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಂತಹ ಪ್ರಕರಣಗಳು ಹೆಚ್ಚಾಗಿವೆ. ಬೇರೆ ಭಕ್ತಾದಿಗಳಿಗೆ ಹಾಗೂ ಏಕಾಗ್ರತೆ ಪೂಜೆಗೂ ತೊಂದರೆಯಾಗುತ್ತಿದೆ.‌ ಕೆಲವೊಬ್ಬರು ದೇವಸ್ಥಾನದ ಬಾಗಿಲು, ಹುಂಡಿಗಳ ಬೀಗದ ಫೋಟೋಗಳನ್ನ ತೆಗೆದುಕೊಂಡು ಹೋಗುತ್ತಿದ್ದಾರೆ. ಇದರಿಂದ ದೇವಸ್ಥಾನಗಳಲ್ಲಿ ಕಳ್ಳತನ ಚಟುವಟಿಕೆಗಳು ಹೆಚ್ಚಾಗುತ್ತಿದೆ. ಸದ್ಯ ದೇವಸ್ಥಾನಗಳಲ್ಲಿ ಮೊಬೈಲ್ ನಿಷೇಧ ಎಂದು ಬರೆಯಲಾಗಿದೆ ಅಷ್ಟೇ. ಯಾವುದೇ ಆದೇಶದ ಪತ್ರವನ್ನ ನೀಡಿಲ್ಲ. ಹೀಗಾಗಿ ನಾವು ಭಕ್ತದಿಗಳಿಗೆ ಮೊಬೈಲ್ ಬಳಸಬೇಡಿ ಎಂದು ಹೇಳುವುದು ಕಷ್ಟ. ಆದ್ದರಿಂದ ಮುಜರಾಯಿ ಇಲಾಖೆಗೆ ಮನವಿ ಪತ್ರ ಸಲ್ಲಿಸಲು‌ ಅರ್ಚಕರ ಒಕ್ಕೂಟ ಮುಂದಾಗಿದೆ.

ಇದನ್ನೂ ಓದಿ: ಮಾತಾ ವೈಷ್ಣೋ ದೇವಿ ದೇಗುಲಕ್ಕೆ 87 ಲಕ್ಷ ಯಾತ್ರಾರ್ಥಿಗಳ ಆಗಮನ, ಡಿಸೆಂಬರ್ ಅಂತ್ಯಕ್ಕೆ 90 ಲಕ್ಷ ಏರಿಕೆಯಾಗುವ ನಿರೀಕ್ಷೆ

ಮೊಬೈಲ್ ಬಳಕೆಗೆ ಕಡಿವಾಣ ಹಾಕಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಹಿಂದೆ ಮುಜುರಾಯಿ ಇಲಾಖೆಗೆ ಮನವಿ ಪತ್ರ ಕೊಟ್ಟಿದ್ವಿ. ಆದ್ರೆ ಯಾವುದೇ ಉತ್ತರಗಳು ಬಂದಿಲ್ಲ. ಇದೀಗಾ ಮತ್ತೆ ಮನವಿ ಪತ್ರವನ್ನ ನೀಡುತ್ತಿದ್ದೇವೆ. ಒಂದು ವಾರ ಮುಜುರಾಯಿ ಇಲಾಖೆಗೆ ಸಮಯವನ್ನ ಕೊಡುತ್ತಿದ್ದೇವೆ. ಒಂದು ವೇಳೆ ಅರ್ಚಕರ ಮನವಿಗೆ ಸ್ಪಂಧಿಸದೇ ಇದ್ರೆ ಹೈಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ಅರ್ಚಕರು ಎಚ್ಚರಿಕೆ ನೀಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:49 pm, Mon, 12 December 22

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್