AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳೇ ರೆಡಿಯಾಗಿ, ನಾಳೆಯಿಂದ 1 ರಿಂದ 5ನೇ ತರಗತಿ ಶಾಲೆ ಆರಂಭ; ಮಾರ್ಗಸೂಚಿಗಳು ಇಲ್ಲಿವೆ

ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವುದರಿಂದ ಭೌತಿಕ ತರಗತಿ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನಾಳೆ ಮಕ್ಕಳನ್ನ ಶಾಲೆಗೆ ಬರಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿಕೊಂಡಿದೆ.

ಮಕ್ಕಳೇ ರೆಡಿಯಾಗಿ, ನಾಳೆಯಿಂದ 1 ರಿಂದ 5ನೇ ತರಗತಿ ಶಾಲೆ ಆರಂಭ; ಮಾರ್ಗಸೂಚಿಗಳು ಇಲ್ಲಿವೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 24, 2021 | 9:34 AM

Share

ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ಶಾಲೆ ಆರಂಭವಾಗುತ್ತಿದೆ. ಸುಮಾರು 20 ತಿಂಗಳ ಬಳಿಕ 1ರಿಂದ 5ನೇ ತರಗತಿ ಶಾಲೆಗಳು ತೆರೆಯಲಿವೆ. ಹೀಗಾಗಿ ಮಕ್ಕಳು ಶಾಲೆಗೆ ಹೋಗಲು ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ. ಕೊರೊನಾ ಕಾರಣದಿಂದ ಶಾಲೆಗಳು ಬಂದ್ ಆಗಿದ್ದವು. ಸದ್ಯ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವುದರಿಂದ ಭೌತಿಕ ತರಗತಿ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನಾಳೆ ಮಕ್ಕಳನ್ನ ಶಾಲೆಗೆ ಬರಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿಕೊಂಡಿದೆ. ಕೊವಿಡ್ ನಿಯಮದಂತೆ ಭೌತಿಕ ತರಗತಿಗಳು ನಡೆಯಲಿವೆ.

ಪ್ರಾಥಮಿಕ ಶಾಲೆ ಆರಂಭಕ್ಕೆ ಗೈಡ್​ಲೈನ್ಸ್ ಕಠಿಣ ನಿಯಮಗಳ ಪಾಲನೆಯೊಂದಿಗೆ ಪ್ರಾಥಮಿಕ ಶಾಲೆ ಆರಂಭವಾಗುತ್ತಿದೆ. ಭೌತಿಕ ತರಗತಿ ನಡೆಸಲು ರಾಜ್ಯ ಸರ್ಕಾರ ಕೆಲ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಈ ಕೆಳಗಂಡಂತೆ ತಿಳಿಸಲಾಗಿದೆ. * ಶೇ.50 ರಷ್ಟು ಹಾಜರಾತಿಯಲ್ಲಿ ತರಗತಿ ನಡೆಸಲು ಅವಕಾಶ. * ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರವೇ ಶಾಲೆಗಳು ತೆರೆಯಬೇಕು. * ಇನ್ನುಳಿದ ಎರಡು ದಿನ ಶಾಲೆ ಕೊಠಡಿಗಳ ಸ್ವಚ್ಛತಾ ಕಾರ್ಯ, ಸ್ಯಾನಿಟೈಸರ್​ಗೆ ಅವಕಾಶ ನೀಡಲಾಗಿದೆ. * ಮಕ್ಕಳಿಗೆ ಒಂದು ದಿನ ತರಗತಿ ಒಂದು ದಿನ ರಜೆ ನೀಡಲಾಗಿದೆ. * ಮಕ್ಕಳು ಶಾಲೆಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯವಾಗಿ ಬೇಕು. * ಅನುಮತಿ ಪತ್ರದಲ್ಲಿ ವಿದ್ಯಾರ್ಥಿಯ ಕೊವಿಡ್ ಸೋಂಕು ಇಲ್ಲದೆ ಇರೋದನ್ನ ಪೋಷಕರು ದೃಢೀಕರಿಸಬೇಕು. * ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. * ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ. * ಆನ್ ಲೈನ್ ಮತ್ತು ಆಫ್ ಲೈನ್ ಎರಡೂ ತರಗತಿಗೂ ಅವಕಾಶ ನೀಡಲಾಗಿದೆ. * 15 ರಿಂದ 20 ಮಕ್ಕಳ ತಂಡ ರಚಿಸಿ ಮಕ್ಕಳಿಗೆ ಪಾಠ ಮಾಡಬೇಕು. * ಎರಡು ಡೋಸ್ ಪಡೆದ ಶಿಕ್ಷಕರಿಗೆ ಮಾತ್ರ ಪಾಠ ಮಾಡಲು ಅವಕಾಶ * ಸೋಮವಾರದಿಂದ ಶುಕ್ರವಾರದ ವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ತರಗತಿ ನಡೆಯುತ್ತದೆ. * ನವೆಂಬರ್ ಎರಡರಿಂದ ಶನಿವಾರ ಬೆಳಗ್ಗೆ 8 ರಿಂದ 11.40 ರ ವರೆಗೆ ಮಾತ್ರ ತರಗತಿ ನಡೆಯುತ್ತದೆ. * ಯಾವುದೇ ಶಾಲೆಯಲ್ಲಿ ಎಲ್.ಕೆ.ಜಿ, ಯು.ಕೆ.ಜಿ ತೆರೆಯಲು ಅವಕಾಶ ಇಲ್ಲ. * 25 ರಿಂದ ನವೆಂಬರ್ 2ರವರೆಗೂ ಅರ್ಧ ದಿನ ಮಾತ್ರ ತರಗತಿ, ನವೆಂಬರ್ 2 ರಿಂದ ಪೂರ್ತಿ ದಿನ ತರಗತಿ ನಡೆಸಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ

ಮಗು ಸೇರಿದಂತೆ ಕಂಡವರಿಗೆಲ್ಲ ಕಚ್ಚಿ ಸಾರ್ವಜನಿಕರ ಆಕ್ರೋಶಕ್ಕೆ ಬಲಿಯಾಯಿತು ಹಾಸನದ ಹುಚ್ಚು ನಾಯಿ!

ಮೆಚುರಿಟಿ ಹಣ ಕೇಳಲು ಹೋದ‌ ಯುವಕನನ್ನು ಕೂಡಿ ಹಾಕಿದ ಮ್ಯಾನೇಜರ್; ರಾತ್ರಿ 9 ರವರೆಗೆ ಬ್ಯಾಂಕನಲ್ಲೇ ಯುವಕ ಬಂಧಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್