ಮಕ್ಕಳೇ ರೆಡಿಯಾಗಿ, ನಾಳೆಯಿಂದ 1 ರಿಂದ 5ನೇ ತರಗತಿ ಶಾಲೆ ಆರಂಭ; ಮಾರ್ಗಸೂಚಿಗಳು ಇಲ್ಲಿವೆ

| Updated By: sandhya thejappa

Updated on: Oct 24, 2021 | 9:34 AM

ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವುದರಿಂದ ಭೌತಿಕ ತರಗತಿ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನಾಳೆ ಮಕ್ಕಳನ್ನ ಶಾಲೆಗೆ ಬರಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿಕೊಂಡಿದೆ.

ಮಕ್ಕಳೇ ರೆಡಿಯಾಗಿ, ನಾಳೆಯಿಂದ 1 ರಿಂದ 5ನೇ ತರಗತಿ ಶಾಲೆ ಆರಂಭ; ಮಾರ್ಗಸೂಚಿಗಳು ಇಲ್ಲಿವೆ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ಶಾಲೆ ಆರಂಭವಾಗುತ್ತಿದೆ. ಸುಮಾರು 20 ತಿಂಗಳ ಬಳಿಕ 1ರಿಂದ 5ನೇ ತರಗತಿ ಶಾಲೆಗಳು ತೆರೆಯಲಿವೆ. ಹೀಗಾಗಿ ಮಕ್ಕಳು ಶಾಲೆಗೆ ಹೋಗಲು ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ. ಕೊರೊನಾ ಕಾರಣದಿಂದ ಶಾಲೆಗಳು ಬಂದ್ ಆಗಿದ್ದವು. ಸದ್ಯ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವುದರಿಂದ ಭೌತಿಕ ತರಗತಿ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನಾಳೆ ಮಕ್ಕಳನ್ನ ಶಾಲೆಗೆ ಬರಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿಕೊಂಡಿದೆ. ಕೊವಿಡ್ ನಿಯಮದಂತೆ ಭೌತಿಕ ತರಗತಿಗಳು ನಡೆಯಲಿವೆ.

ಪ್ರಾಥಮಿಕ ಶಾಲೆ ಆರಂಭಕ್ಕೆ ಗೈಡ್​ಲೈನ್ಸ್
ಕಠಿಣ ನಿಯಮಗಳ ಪಾಲನೆಯೊಂದಿಗೆ ಪ್ರಾಥಮಿಕ ಶಾಲೆ ಆರಂಭವಾಗುತ್ತಿದೆ. ಭೌತಿಕ ತರಗತಿ ನಡೆಸಲು ರಾಜ್ಯ ಸರ್ಕಾರ ಕೆಲ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಈ ಕೆಳಗಂಡಂತೆ ತಿಳಿಸಲಾಗಿದೆ.
* ಶೇ.50 ರಷ್ಟು ಹಾಜರಾತಿಯಲ್ಲಿ ತರಗತಿ ನಡೆಸಲು ಅವಕಾಶ.
* ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರವೇ ಶಾಲೆಗಳು ತೆರೆಯಬೇಕು.
* ಇನ್ನುಳಿದ ಎರಡು ದಿನ ಶಾಲೆ ಕೊಠಡಿಗಳ ಸ್ವಚ್ಛತಾ ಕಾರ್ಯ, ಸ್ಯಾನಿಟೈಸರ್​ಗೆ ಅವಕಾಶ ನೀಡಲಾಗಿದೆ.
* ಮಕ್ಕಳಿಗೆ ಒಂದು ದಿನ ತರಗತಿ ಒಂದು ದಿನ ರಜೆ ನೀಡಲಾಗಿದೆ.
* ಮಕ್ಕಳು ಶಾಲೆಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯವಾಗಿ ಬೇಕು.
* ಅನುಮತಿ ಪತ್ರದಲ್ಲಿ ವಿದ್ಯಾರ್ಥಿಯ ಕೊವಿಡ್ ಸೋಂಕು ಇಲ್ಲದೆ ಇರೋದನ್ನ ಪೋಷಕರು ದೃಢೀಕರಿಸಬೇಕು.
* ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು.
* ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ.
* ಆನ್ ಲೈನ್ ಮತ್ತು ಆಫ್ ಲೈನ್ ಎರಡೂ ತರಗತಿಗೂ ಅವಕಾಶ ನೀಡಲಾಗಿದೆ.
* 15 ರಿಂದ 20 ಮಕ್ಕಳ ತಂಡ ರಚಿಸಿ ಮಕ್ಕಳಿಗೆ ಪಾಠ ಮಾಡಬೇಕು.
* ಎರಡು ಡೋಸ್ ಪಡೆದ ಶಿಕ್ಷಕರಿಗೆ ಮಾತ್ರ ಪಾಠ ಮಾಡಲು ಅವಕಾಶ
* ಸೋಮವಾರದಿಂದ ಶುಕ್ರವಾರದ ವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ತರಗತಿ ನಡೆಯುತ್ತದೆ.
* ನವೆಂಬರ್ ಎರಡರಿಂದ ಶನಿವಾರ ಬೆಳಗ್ಗೆ 8 ರಿಂದ 11.40 ರ ವರೆಗೆ ಮಾತ್ರ ತರಗತಿ ನಡೆಯುತ್ತದೆ.
* ಯಾವುದೇ ಶಾಲೆಯಲ್ಲಿ ಎಲ್.ಕೆ.ಜಿ, ಯು.ಕೆ.ಜಿ ತೆರೆಯಲು ಅವಕಾಶ ಇಲ್ಲ.
* 25 ರಿಂದ ನವೆಂಬರ್ 2ರವರೆಗೂ ಅರ್ಧ ದಿನ ಮಾತ್ರ ತರಗತಿ, ನವೆಂಬರ್ 2 ರಿಂದ ಪೂರ್ತಿ ದಿನ ತರಗತಿ ನಡೆಸಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ

ಮಗು ಸೇರಿದಂತೆ ಕಂಡವರಿಗೆಲ್ಲ ಕಚ್ಚಿ ಸಾರ್ವಜನಿಕರ ಆಕ್ರೋಶಕ್ಕೆ ಬಲಿಯಾಯಿತು ಹಾಸನದ ಹುಚ್ಚು ನಾಯಿ!

ಮೆಚುರಿಟಿ ಹಣ ಕೇಳಲು ಹೋದ‌ ಯುವಕನನ್ನು ಕೂಡಿ ಹಾಕಿದ ಮ್ಯಾನೇಜರ್; ರಾತ್ರಿ 9 ರವರೆಗೆ ಬ್ಯಾಂಕನಲ್ಲೇ ಯುವಕ ಬಂಧಿ