ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಮರುನಾಮಕರಣ! ಹೊಸ ಹೆಸರು ಏನು ಗೊತ್ತಾ?

ದೇಶದ ಹಲವು ರಾಜ್ಯಗಳಲ್ಲಿ 1 ನೇ ತರಗತಿಯಿಂದ 12 ನೇ ತರಗತಿಯವರೆಗೆ ಒಂದೇ ಇಲಾಖೆಗೆ ಒಳಪಡುತ್ತಿದೆ. 2020ರ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿಯೂ ಈ ಅಂಶ ಹೇಳಲಾಗಿದೆ. ಹೀಗಾಗಿ ಪ್ರಾಥಮಿಕ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಮರುನಾಮಕರಣ ಮಾಡಲಾಗಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಮರುನಾಮಕರಣ! ಹೊಸ ಹೆಸರು ಏನು ಗೊತ್ತಾ?
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Jun 24, 2022 | 10:33 PM

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಹೆಸರನ್ನು(Primary & Secondary Education Department) ಶಾಲಾ ಶಿಕ್ಷಣ & ಸಾಕ್ಷರತಾ ಇಲಾಖೆಯೆಂದು(Department of School Education and Gteracy) ಮರುನಾಮಕರಣ ಮಾಡಲಾಗಿದೆ. ಪ್ರಾಥಮಿಕ, PU ಶಿಕ್ಷಣ ಇಲಾಖೆ ಒಟ್ಟುಗೂಡಿಸಿ ಮರುನಾಮಕರಣ ಮಾಡಲಾಗಿದೆ.

ದೇಶದ ಹಲವು ರಾಜ್ಯಗಳಲ್ಲಿ 1 ನೇ ತರಗತಿಯಿಂದ 12 ನೇ ತರಗತಿಯವರೆಗೆ ಒಂದೇ ಇಲಾಖೆಗೆ ಒಳಪಡುತ್ತಿದೆ. 2020ರ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿಯೂ ಈ ಅಂಶ ಹೇಳಲಾಗಿದೆ. ಹೀಗಾಗಿ ಪ್ರಾಥಮಿಕ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಮರುನಾಮಕರಣ ಮಾಡಲಾಗಿದೆ. ಎರಡು ಇಲಾಖೆಗಳನ್ನ ಒಟ್ಟುಗೂಡಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಂತಾ ಮರುನಾಮಕರಣ ಮಾಡಿ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಚ್ ಎಸ್ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ರಾಮನಗರದಲ್ಲಿ ಶಿವರಾಜ್​ಕುಮಾರ್​ಗೆ ಭವ್ಯ ಸ್ವಾಗತ; ಇಲ್ಲಿದೆ ವಿಡಿಯೋ

education dpt

ದೇಶದ ಬಹುತೇಕ ಎಲ್ಲಾ ರಾಜ್ಯಗಳಲ್ಲಿ, 12ನೇ ತರಗತಿಯವರೆಗಿನ ಶಿಕ್ಷಣವು ಶಾಲಾ ಶಿಕ್ಷಣದ ವ್ಯಾಪ್ತಿಗೊಳಪಡುತ್ತದೆ. ರಾಷ್ಟ್ರೀಯ ಶಿಕ್ಷಣ ನೀಡಿ 20201 ರಲ್ಲಿಯೂ ಸಹ ಸದರಿ ಅಂಶವನ್ನು ಪುನರುಚ್ಛರಿಸಲಾಗಿರುತ್ತದೆ. ಈ ಹಿನ್ನಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ (ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನೊಳಗೊಂಡಂತೆ) ಪದನಾಮವನ್ನು ಶಾಲಾ ಶಿಕ್ಷಣ ಇಲಾಖೆ ಎಂದು ಬದಲಾಯಿಸುವುದು ಸೂಕ್ತ ಎಂದು ವಿವಿಧ ಹಂತದ ಚರ್ಚೆಯಲ್ಲಿ ತಜ್ಞರು ಅಭಿಪ್ರಾಯಿಸಿದ್ದಾರೆ, ಈಗಾಗಲೇ ಕೇಂದ್ರ ಸರ್ಕಾರ ಹಾಗೂ ಹೆಚ್ಚಿನ ರಾಜ್ಯಗಳಲ್ಲಿ ಶಾಲಾ ಶಿಕ್ಷಣ ಇಲಾಖೆ” ಎಂಬ ಪದನಾಮ ರೂಢಿಯಲ್ಲಿರುವುದರಿಂದ ಕರ್ನಾಟಕ ರಾಜ್ಯದಲ್ಲಿಯೂ ಸಹ ಇದೇ ಮಾದರಿಯನ್ನು ಅಳವಡಿಸಲು ಮೇಲೆ ಓದಲಾದ ಟಿಪ್ಪಣಿಯಲ್ಲಿ ಮಾನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಸೂಚಿಸಿರುತ್ತಾರೆ. ಸದರಿ ಪ್ರಸ್ತಾವನೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಆಡಳಿತ ಸುಧಾರಣೆಯ ಅಭಿಪ್ರಾಯವನ್ನು ಪಡೆಯಲಾಗಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಪ್ರಸ್ತುತ ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಎಂದು ಕರೆಯಲ್ಪಡುವ ಇಲಾಖೆಯನ್ನು ‘ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ’ (Department of School Education and Gteracy) ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮರು ನಾಮಕರಣಗೊಳಿಸಿ ಆದೇಶಿಸಲಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ. ಇದನ್ನೂ ಓದಿ: ಚೆಕ್ ಬೌನ್ಸ್ ಕೇಸ್‌ನಲ್ಲಿ ಕಾಂಗ್ರೆಸ್​ ಮಾಜಿ ಶಾಸಕ ಕೆ ವೆಂಕಟಸ್ವಾಮಿ ತಪ್ಪಿತಸ್ಥ: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ

Published On - 9:24 pm, Fri, 24 June 22

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು