Narendra Modi Bengaluru Visit: ಬೆಂಗಳೂರಿನ ಎಚ್​ಎಎಲ್​ಗೆ ಪ್ರಧಾನಿ ನರೇಂದ್ರ ಮೋದಿ ಆಗಮನ

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಎಚ್​ಎಎಲ್​ ಏರ್​ಪೋರ್ಟ್​ಗೆ ಆಗಮಿಸಿದ್ದಾರೆ. ಇಂದು ಬೆಂಗಳೂರಿನ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

Narendra Modi Bengaluru Visit: ಬೆಂಗಳೂರಿನ ಎಚ್​ಎಎಲ್​ಗೆ ಪ್ರಧಾನಿ ನರೇಂದ್ರ ಮೋದಿ ಆಗಮನ
Narendra Modi
Follow us
TV9 Web
| Updated By: ನಯನಾ ರಾಜೀವ್

Updated on:Nov 11, 2022 | 9:27 AM

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಎಚ್​ಎಎಲ್​ ಏರ್​ಪೋರ್ಟ್​ಗೆ ಆಗಮಿಸಿದ್ದಾರೆ. ಇಂದು ಬೆಂಗಳೂರಿನ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 9ಕ್ಕೆ ಹೆಚ್ ಎ ಲ್ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಿದ್ದಾರೆ. 9. 45 – ಕನಕದಾಸ ಮತ್ತು ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ, ವಿಧಾನಸೌಧದಿಂದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಪ್ರಯಾಣ, ಬಳಿಕ 10 .20 – 10.40 – ವಂದೇ ಭಾರತ ಎಕ್ಸ್‌ಪ್ರೆಸ್‌ ಹಾಗೂ ಭಾರತ ಗೌರವ್ ಕಾಶಿ ದರ್ಶನ ರೈಲ್ವೆಗೆ ಚಾಲನೆ ನೀಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಹೆಲಿಕಾಪ್ಟರ್​ನಲ್ಲಿ ಎಚ್​ಎಎಲ್ ವಿಮಾನ ನಿಲ್ದಾಣದಲ್ಲಿ ಮೇಖ್ರಿ ಸರ್ಕಲ್​ ಸಮೀಪ ಇರುವ ವಾಯುಪಡೆಯ ಟ್ರೇನಿಂಗ್​ ಕಮಾಂಡ್​ಗೆ ಬಂದಿಳಿದರು. ಅಲ್ಲಿಂದ ಕೆಲವೇ ಕ್ಷಣಗಳಲ್ಲಿ ವಿಧಾನಸೌಧದತ್ತ ತೆರಳಲಿದ್ದಾರೆ. ಅಲ್ಲಿ ಕನಕದಾಸ, ವಾಲ್ಮೀಕಿ ಪ್ರತಿಮೆಗಳಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ.

ನಗರದ ಎಚ್​ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಕೆಲವೇ ಕ್ಷಣಗಳಲ್ಲಿ ವಿಧಾನಸೌಧ ಸಮೀಪದ ಶಾಸಕರ ಭವನಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಅಂತಿಮ ಹಂತದ ಭದ್ರತಾ ವ್ಯವಸ್ಥೆಯನ್ನು ಡಿಸಿಪಿ ಶ್ರೀನಿವಾಸ್‌ಗೌಡ ಪರಿಶೀಲಿಸಿದರು. ಇದೇ ವೇಳೆ ಶಾಸಕರ ಭವನ ಸರ್ಕಲ್​ನಲ್ಲಿದ್ದ 10ಕ್ಕೂ ಹೆಚ್ಚು ನಾಯಿಗಳನ್ನು ಸೆರೆ ಹಿಡಿಯಲು ಬಿಬಿಎಂಪಿ ಸಿಬ್ಬಂದಿ ಕಸರತ್ತು ನಡೆಸಿದರು. ಬಿಬಿಎಂಪಿ ಸಿಬ್ಬಂದಿ ತಂದ ಶ್ವಾನ ಬಲೆ ನೋಡಿ ನಾಯಿಗಳು ಓಡಿಹೋದವು.

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ (ನ 11) ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಎಚ್​ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ಸ್ವಾಗತಿಸಿದರು. ಎಚ್​ಎಎಲ್​ನಿಂದ ಮೋದಿ ನೇರವಾಗಿ ವಿಧಾನಸೌಧದ ಬಳಿಯ ಶಾಸಕರ ಭವನಕ್ಕೆ ತೆರಳಲಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:18 am, Fri, 11 November 22