ಜ.19 ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮನ; ಸಂಚಾರ ಮಾರ್ಗ ಬದಲಾವಣೆ ವಿವರ ಇಲ್ಲಿದೆ

| Updated By: ಆಯೇಷಾ ಬಾನು

Updated on: Jan 18, 2024 | 11:50 AM

ಜನವರಿ 19 ರಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್‌ನಲ್ಲಿ ಹೊಸ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ (BIETC) ಕ್ಯಾಂಪಸ್ ನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಹೀಗಾಗಿ ಬೆಂಗಳೂರಿಗೆ ಆಗಮಿಸುತ್ತಿದ್ದು ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕೆಲ ಕಡೆ ಸಂಚಾರ ನಿಷೇಧಿಸಲಾಗಿದೆ.

ಜ.19 ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮನ; ಸಂಚಾರ ಮಾರ್ಗ ಬದಲಾವಣೆ ವಿವರ ಇಲ್ಲಿದೆ
ನರೇಂದ್ರ ಮೋದಿ
Image Credit source: The Week
Follow us on

ಬೆಂಗಳೂರು, ಜ.18: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಜನವರಿ 19ರಂದು ಬೆಂಗಳೂರು ಹೊರವಲಯದ ದೇವನಹಳ್ಳಿಗೆ ಭೇಟಿ ನೀಡಲಿದ್ದಾರೆ. ಹೀಗಾಗಿ ಸಂಚಾರ ಮಾರ್ಗ ಬದಲಾವಣೆ ಮಾಡಿ ಬೆಂಗಳೂರು ನಗರ ಸಂಚಾರ ಪೊಲೀಸರು ಆದೇಶ ಹೊರಡಿಸಿದ್ದಾರೆ. ಪ್ರಧಾನಿ ಮೋದಿ ಅವರು ನಾಳೆ (ಜ.19) ಮಧ್ಯಾಹ್ನ 2:10 ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Bengaluru Airport) ಬಂದು ಇಳಿಯಲಿದ್ದಾರೆ. ನಾಳೆ ಹೆಣ್ಣೂರು-ಬಾಗಲೂರು ರಸ್ತೆ (ಹೊಸ ವಿಮಾನ ನಿಲ್ದಾಣ ರಸ್ತೆ) ಮತ್ತು ಕೆಐಎಗೆ ಹೋಗುವ ಇತರ ರಸ್ತೆಗಳಲ್ಲಿ ಸಂಚಾರ ವ್ಯತ್ಯಯವಾಗಲಿದೆ.

ಜನವರಿ 19 ರಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್‌ನಲ್ಲಿ ಹೊಸ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ (BIETC) ಕ್ಯಾಂಪಸ್ ನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಹೀಗಾಗಿ ಬೆಂಗಳೂರಿಗೆ ಆಗಮಿಸುತ್ತಿದ್ದು ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕೆಲ ಕಡೆ ಸಂಚಾರ ನಿಷೇಧಿಸಲಾಗಿದೆ.

ಈ ರಸ್ತೆಗಳಲ್ಲಿ ಸಂಚಾರ ತಾತ್ಕಾಲಿಕ ನಿಷೇಧ

ಮೋದಿ ಭೇಟಿ ಹಿನ್ನೆಲೆ ನಾಳೆ ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಗೊಲ್ಲಹಳ್ಳಿ ಗೇಟ್ ನಿಂದ ಹುನಚೂರುವರೆಗೆ, ಏರ್ ಲೈನ್ಸ್ ಡಾಬಾದಿಂದ ಬೂದಿಗೆರೆಯವರೆಗೆ, ಹೆಣ್ಣೂರು-ಬಗಲೂರು ಮುಖ್ಯ ರಸ್ತೆಯಿಂದ ವಿಮಾನ ನಿಲ್ದಾಣ ರಸ್ತೆಯವರೆಗೆ, ಚಿಕ್ಕಜಾಲ ಕೋಟೆ ಮುಖ್ಯ ರಸ್ತೆಯಿಂದ ವಿಮಾನ ನಿಲ್ದಾಣದವರೆಗೆ, ಬಗಲೂರಿನಿಂದ ವಿಮಾನ ನಿಲ್ದಾಣದವರೆಗೆ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

1. ವೈಟ್ ಫೀಲ್ಡ್, ಕೆ.ಆರ್. ಪುರಂನಿಂದ ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಗೊಲ್ಲಹಳ್ಳಿ ಗೇಟ್ ಮಾರ್ಗವಾಗಿ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು:

ಗೊಲ್ಲಹಳ್ಳಿ ಗೇಟ್-ಬಲದಿರುವು-ಹೊನ್ನಹಳ್ಳಿ ಗೇಟ್-ಬೆಟ್ಟಕೋಟೆ-ಎಲ್‌ಲೈನ್ ಡಾಬಾ-ಎಡತಿರುವು-ದೇವನಹಳ್ಳಿ ಬಸ್ ನಿಲ್ದಾಣ-ಎಡ ತಿರುವು-ದೇವನಹಳ್ಳಿ ಬೈಪಾಸ್-ಎಡ ತಿರುವು-ಬಿ.ಬಿ ರಸ್ತೆ-ದೇವನಹಳ್ಳಿ ಟೋಲ್-ಎಡ ತಿರುವು-ಕೆಂಪೇಗೌಡ ವಿಮಾನ ನಿಲ್ದಾಣ.

2. ರಾಷ್ಟ್ರೀಯ ಹೆದ್ದಾರಿ-648 ಏರ್‌ಲೈನ್ ಡಾಬಾ ಜಂಕ್ಷನ್ ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಕಡೆಗೆ ಕೆ.ಐ.ಎ.ಡಿ.ಬಿ ಇಂಡಸ್ಟ್ರೀಯಲ್ ಏರಿಯಾ ಸಂಚರಿಸುವ ವಾಹನ ಸಂಚರಿಸಬೇಕಾದ ಮಾರ್ಗಗಳು:

ಏರ್‌ಲೈನ್ಸ್ ಡಾಬಾ-ದೇವನಹಳ್ಳಿ ಬಸ್ ನಿಲ್ದಾಣ-ಎಡತಿರುವು-ದೇವನಹಳ್ಳಿ ಬೈಪಾಸ್-ಎಡ ತಿರುವು-ಬಿ.ಬಿ ರಸ್ತೆ- ದೇವನಹಳ್ಳಿ ಟೋಲ್-ಎಡ ತಿರುವು- ಕೆಂಪೇಗೌಡ ವಿಮಾನ ನಿಲ್ದಾಣ.

3. ಹೆಣ್ಣೂರು-ಬಾಗಲೂರು ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಗಾಳಮ್ಮ ಸರ್ಕಲ್ ಮಾರ್ಗವಾಗಿ ಸಂಚರಿಸುವ ವಾಹನ ಸಂಚರಿಸಬೇಕಾದ ಮಾರ್ಗಗಳು:

ಬಾಗಲೂರು ಗುಂಡಪ್ಪ ಸರ್ಕಲ್-ಎಡ ತಿರುವು-ರೇವಾ ಕಾಲೇಜು ಜಂಕ್ಷನ್-ಬಾಗಲೂರು ಕ್ರಾಸ್-ಬಲ ತಿರುವು- ಚಿಕ್ಕ ಚಾಲ-ಸಾದಹಳ್ಳಿ ಟೋಲ್ -ಏರ್ ಪೋರ್ಟ ಪ್ರೈ ಓವರ್ ಎಂಟ್ರಿ- ಕೆಂಪೇಗೌಡ ವಿಮಾನ ನಿಲ್ದಾಣ.

4. ಚಿಕ್ಕಜಾಲ ಕೋಟೆ ಕ್ರಾಸ್ ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಗಾಳಮ್ಮ ಸರ್ಕಲ್ ಮಾರ್ಗವಾಗಿ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು: ಚಿಕ್ಕಚಾಲ-ಸಾದಹಳ್ಳಿ ಟೋಲ್ – ಏರ್ ಪೋರ್ಟ ಪ್ರೈ ಓವರ್ ಎಂಟ್ರಿ- ಕೆಂಪೇಗೌಡ ವಿಮಾನ ನಿಲ್ದಾಣ

5. ಬಾಗಲೂರು ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಗಾಳನ್ನು ಸರ್ಕಲ್ ಮಾರ್ಗವಾಗಿ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು: ಬಾಗಲೂರು ಕಾಲೋನಿ ಬಲ ತಿರುವು – ರಜಾಕ್ ಪಾಳ್ಯ – ಎಂ.ವಿ.ಐ.ಟಿ ಕಾಲೇಜು – ಚಿಕ್ಕಚಾಲ ಬಲ ತಿರುವು – ಬಿಬಿ ರಸ್ತೆ – ಸಾದಹಳ್ಳಿ ಟೋಲ್- ಏರ್ ಪೋರ್ಟ ಪ್ರೈ ಓವರ್ ಎಂಟ್ರಿ- ಕೆಂಪೇಗೌಡ ವಿಮಾನ ನಿಲ್ದಾಣ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ