ಜೂನ್ 20 ಮತ್ತು 21ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಜೂನ್​ 21ರಂದು ಮೈಸೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಹಿನ್ನಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆ ನಗರದಲ್ಲಿ ಸ್ಚಾಗತಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ.

ಜೂನ್ 20 ಮತ್ತು 21ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
ಪ್ರಧಾನಿ ನರೇಂದ್ರ ಮೋದಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jun 16, 2022 | 10:43 AM

ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಯವರು 2022ರ ಜೂನ್ ಮಾಹೆಯ 20 & 21 ರಂದು ಕರ್ನಾಟಕ ರಾಜ್ಯಕ್ಕೆ ಭೇಟಿ ನೀಡಿ ಬೆಂಗಳೂರು ಹಾಗೂ ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ದಿನಾಂಕ: 20-06-2022 ರಂದು ಬೆಂಗಳೂರಿನಲ್ಲಿ ನಿರ್ಮಾಣವಾಗಿರುವ ದೇಶದ ಮೊದಲ ಹವಾನಿಯಂತ್ರಿತ ರೈಲ್ವೆ ನಿಲ್ದಾಣ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಉದ್ಘಾಟನೆ, ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆ ಲೋಕಾರ್ಪಣೆ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ, ಐಐಎಸ್ಸಿಯಲ್ಲಿ ವಿವಿಧ ಕಟ್ಟಡಗಳ ಉದ್ಘಾಟನೆ ಮತ್ತು ಕೊಮ್ಮಘಟ್ಟದಲ್ಲಿ ಸಬ್ ಅರ್ಬನ್ ರೈಲ್ವೆ ಭೂಮಿ ಪೂಜೆ ಹಾಗೂ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.

ಇದನ್ನೂ ಓದಿ: ರಾಹುಲ್‌ಗಾಂಧಿಗೆ ಇಡಿ‌ ಹಿನ್ನೆಲೆ: ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರಿಂದ ರಾಜ್ ಭವನ್‌ ಚಲೋ

ದಿನಾಂಕ: 21-06-2022 ರಂದು ಮೈಸೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆ, ಮಹಾರಾಜ ಕಾಲೇಜು ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಭೆ, AIISHನಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಪ್ರಸ್ತುತ ಉಲ್ಲೇಖಿಸರುವ ಪ್ರತಿ ಕಾರ್ಯಕ್ರಮದ ವರದಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾನ್ಯತಾ ಪತ್ರ ಹೊಂದಿರುವ ರಾಜ್ಯ ಹಾಗೂ ರಾಷ್ಟ್ರಮಟ್ಟದ ದಿನಪತ್ರಿಕೆಗಳು ಹಾಗೂ ಸ್ಯಾಟ್-ಲೈಟ್ ಸುದ್ದಿ ವಾಹಿನಗಳ ಇಬ್ಬರು (One Reporter + One Cameraman) ಪ್ರತಿನಿಧಿಗಳಿಗೆ ಅಧಿಕೃತ ಪ್ರವೇಶ ಪತ್ರಗಳನ್ನು ನೀಡಲಾಗುವುದು.

ಜೂನ್​ 21ರಂದು ಮೈಸೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಹಿನ್ನಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆ ನಗರದಲ್ಲಿ ಸ್ಚಾಗತಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಜೂ 21 ರಂದು ಮೈಸೂರಿಗೆ ಮೋದಿ ಆಗಮಿಸುತ್ತಿದ್ದು, ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಅರಮನೆ ಆವರಣದಲ್ಲಿ‌ ಯೋಗ ಫೆಡರೇಶನ್‌ನಿಂದ ತಾಲೀಮು ನಡೆಯುತ್ತಿದೆ.

ವೇದಿಕೆ ಮೇಲೆ ಯಾರಿಗೂ ಅವಕಾಶವಿಲ್ಲ:

ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ಮಾಡುವ ವೇದಿಕೆ ರಾಜಕೀಯ ವೇದಿಕೆಯಲ್ಲ. ಸಭಾ ಕಾರ್ಯಕ್ರಮದಲ್ಲಿ ನನಗೂ ಅವಕಾಶವಿಲ್ಲ. ಯಾವುದೇ ಸ್ಥಳೀಯ ಶಾಸಕರಿಗೂ ಅವರ ವೇದಿಕೆಯಲ್ಲಿ ಸ್ಥಾನ ಇರುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಮೋದಿ ಅವರ ಜೊತೆ ಮುಖ್ಯಮಂತ್ರಿ, ರಾಜ್ಯಪಾಲರು, ಕೇಂದ್ರ ಆಯುಷ್ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾತ್ರ ಅವಕಾಶವಿದೆ. ನಾವೆಲ್ಲರೂ ವೇದಿಕೆಯ ಕೆಳಭಾಗದ ಒಂದು ಬದಿಯಲ್ಲಿರುತ್ತೇವೆ. ಇದರಲ್ಲಿ ಯಾವ ಬದಲಾವಣೆಗಳು ಇಲ್ಲ ಎಂದು ಹೇಳಿದರು. ನನ್ನ ಮತ್ತು ರಾಮದಾಸ್ ನಡುವೆ ಈ ವಿಚಾರದಲ್ಲಿ ಕ್ರೆಡಿಟ್ ವಾರ್ ನಡೆಯುತ್ತಿಲ್ಲ. ಮೋದಿ ಅವರ ವೇದಿಕೆ ಮುಂಭಾಗ 7 ಸಾವಿರ ಜನಕ್ಕೆ ಅವಕಾಶ ಇರುತ್ತದೆ. ಒಟ್ಟಾರೆ ಅರಮನೆಯ ಎಲ್ಲಾ ಭಾಗವೂ ಸೇರಿ 15 ಸಾವಿರ ಜನಕ್ಕೆ ಅವಕಾಶವಾಗಬಹುದು. ಆದರೆ ಎಲ್ಲರಿಗೂ ಮೋದಿ ಅವರು ಕಾಣುವುದಿಲ್ಲ.

ರಾಜದ್ಯ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ ಮಾಡಿ. 

Published On - 10:08 am, Thu, 16 June 22