Hubli-Dharwad: ಯುವಜನೋತ್ಸವ ಪ್ರಧಾನಿ ಮೋದಿಯಿಂದ ಉದ್ಘಾಟನೆ; ಉತ್ಸವಕ್ಕೆ ಒಡಿಶಾ ವ್ಯಕ್ತಿ ರಚಿಸಿದ ಲಾಂಛನ ಆಯ್ಕೆ

ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ನಡೆಯುವ ರಾಷ್ಟ್ರೀಯ ಯುವಜನೋತ್ಸವವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಸಚಿವ ಡಾ. ಕೆ. ಸಿ, ನಾರಾಯಣಗೌಡ ತಿಳಿಸಿದ್ದಾರೆ.

Hubli-Dharwad: ಯುವಜನೋತ್ಸವ ಪ್ರಧಾನಿ ಮೋದಿಯಿಂದ ಉದ್ಘಾಟನೆ; ಉತ್ಸವಕ್ಕೆ ಒಡಿಶಾ ವ್ಯಕ್ತಿ ರಚಿಸಿದ ಲಾಂಛನ ಆಯ್ಕೆ
ರಾಷ್ಟ್ರೀಯ ಯುವಜನೋತ್ಸವ ಲಾಂಛನ ಬಿಡುಗಡೆ, ಪ್ರಧಾನಿ ಮೋದಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 07, 2023 | 8:46 PM

ಬೆಂಗಳೂರು/ ಧಾರವಾಡ: ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಜನವರಿ 12 ರಿಂದ 16ರವರೆಗೆ 5 ದಿನಗಳ ಕಾಲ ನಡೆಯುವ ರಾಷ್ಟ್ರೀಯ ಯುವಜನೋತ್ಸವವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ರಾಜ್ಯ ಯುವ ವ್ಯವಹಾರಗಳ ಸಚಿವ ಡಾ. ಕೆ. ಸಿ, ನಾರಾಯಣಗೌಡ (C Narayana Gowda) ಟ್ವೀಟ್​ ಮಾಡುವ ಮೂಲಕ ತಿಳಿಸಿದ್ದಾರೆ. ಇಂದು (ಜನವರಿ 7) ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಯುವಜನೋತ್ಸವದ ಲಾಂಛನ ಮತ್ತು ಮ್ಯಾಸ್ಕಟ್ ಬಿಡುಗಡೆ ಮಾಡಿದರು. ವಿಧಾನ ಪರಿಷತ್​ ಸದಸ್ಯೆ, ನಟಿ ತಾರಾ ಅನುರಾಧ (Tara Anuradha) ಉಪಸ್ಥಿತರಿದ್ದರು. ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ (Anurag Singh Thakur), ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ವರ್ಚುಯಲ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇನ್ನೂ ಯುವಜನೋತ್ಸವದಲ್ಲಿ ದೇಶದ ವಿವಿಧ ರಾಜ್ಯಗಳ ಜನರು ಸೇರಿ 7,500 ಜನರು ಭಾಗವಹಿಸಲಿದ್ದಾರೆ. ಯುವಜನೋತ್ಸವದ ವ್ಯವಸ್ಥೆಗಳನ್ನು ರಾಜ್ಯದ ಯುವ ಶಾಸಕರು, ಸಂಸದರು ಮತ್ತು ಇತರೆ ಜನಪ್ರತಿನಿಧಿಗಳು ನೋಡಿಕೊಳ್ಳುತ್ತಾರೆ ಎಂದು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ಯುವಜನ ಉತ್ಸವ: ಲೋಗೋ ಮತ್ತು ಮ್ಯಾಸ್ಕಟ್ ಬಿಡುಗಡೆ

ಹಾಗೇ ದೇಶದ ವಿವಿಧ ರಾಜ್ಯಗಳಿಂದ ಹುಬ್ಬಳ್ಳಿ-ಧಾರವಾಡಕ್ಕೆ ಬರುವ ಪ್ರತಿನಿಧಿಗಳಿಗಾಗಿ ವಿಶೇಷ ಬೋಗಿಗಳನ್ನು ತಯಾರಿಸಲು ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ಯುವಜನೋತ್ಸವದ ಲಾಂಛನವನ್ನು ವಿನ್ಯಾಸಕ್ಕೆ ಅನುರಾಗ್ ಸಿಂಗ್ ಠಾಕೂರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಯುವಜನೋತ್ಸವ ಲಾಂಛನದ ವಿಶೇಷತೆ

ಯುವಜನೋತ್ಸವ ಲಾಂಛನವನ್ನು ಒಡಿಶಾದ ಬನ್ಸಿಲಾಲ್ ಕೇತ್ಕಿ ಎಂಬುವುರು ರಚಿಸಿದ್ದಾರೆ. ಇವರಿಗೆ 50,000 ರೂ. ಬಹುಮಾನ ದೊರೆಯಲಿದೆ. ಈ ಲಾಂಛನ ರಾಷ್ಟ್ರೀಯತೆ, ನಿಸ್ವಾರ್ಥ ಸೇವೆ ಮತ್ತು ವೈವಿಧ್ಯತೆ ನಡುವೆಯೂ ಏಕತೆ ಹಾಗೂ ಸಹಕಾರವನ್ನು ಪ್ರತಿನಿಧಿಸುತ್ತದೆ. ಜಾಗತಿಕ ಮಟ್ಟದಲ್ಲಿ ಆರ್ಥಿಕವಾಗಿ, ವಿದೇಶಾಂಗ ವ್ಯವಹಾರದಲ್ಲಿ ಹಾಗೂ ಸೇನಾಬಲದಲ್ಲಿ ಭಾರತದ ಉನ್ನತಿಯನ್ನು ಬಿಂಬಿಸುವ ಜೊತೆಗೆ, ಜಿ20 ಹಾಗೂ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷತೆಯನ್ನು ಸಹ ಅಭಿವ್ಯಕ್ತಪಡಿಸುತ್ತದೆ.

ಚಂಪಿ ಚಿಕ್ಕ ಮ್ಯಾಸ್ಕಟ್ ವಿಶೇಷತೆ

ಚಂಪಿ ಚಿಕ್ಕ ಮ್ಯಾಸ್ಕಟ್​ನ್ನು ಬೆಂಗಳೂರಿನ ಇನ್ಬಂ ರಚಿಸಿದ್ದಾರೆ. ಇವರಿಗೂ ರೂ. 50,000 ಬಹುಮಾನ ದೊರೆಯಲಿದೆ. ಇದು ಆನೆಯ ವಿನ್ಯಾಸ ಹೊಂದಿದೆ. ದು ಆನೆಯ ವಿನ್ಯಾಸವನ್ನು ಹೊಂದಿದ್ದು, ಕರ್ನಾಟದಲ್ಲಿ ಅತಿ ಹೆಚ್ಚಿರುವ ಆನೆಗಳ ಸಂಖ್ಯೆಯನ್ನು ಪ್ರತಿನಿಧಿಸುತ್ತದೆ. ಜೊತೆಗೆ ಜಾಗತಿಕ ಮಟ್ಟದಲ್ಲಿ ಹವಾಮಾನ ಬದಲಾವಣೆ, ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆ, ವಿಶ್ವ ಶಾಂತಿಯ ಜೊತೆಗೆ ಕ್ರೀಡೆ, ಸ್ಟಾರ್ಟಪ್, ನಾವಿನ್ಯತೆ, ಶಿಕ್ಷಣ ಸೇರಿಂದ ವಿವಿಧ ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿರುವ ಯುವ ಮತ್ತು ಆಧುನಿಕ ಭಾರತವನ್ನು ಬಿಂಬಿಸುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:46 pm, Sat, 7 January 23

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ