ರಾಜ್ಯದ ಜನರಿಗೆ ಮೊತ್ತೊಂದು ಬೆಲೆ ಏರಿಕೆ ಬಿಸಿ; ಖಾಸಗಿ ಬಸ್ ಟಿಕೆಟ್ ದರ ಹಾಗೂ ಪ್ರವಾಸಿ ಟ್ಯಾಕ್ಸಿ ವಾಹನಗಳ ಬಾಡಿಗೆ ಹೆಚ್ಚಳಕ್ಕೆ ಚಿಂತನೆ

| Updated By: ಆಯೇಷಾ ಬಾನು

Updated on: Apr 05, 2022 | 12:39 PM

ಜನರಿಗೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದೆ. ಖಾಸಗಿ ಬಸ್ ಟಿಕೆಟ್ ದರ ಹಾಗೂ ಪ್ರವಾಸಿ ಟ್ಯಾಕ್ಸಿ ವಾಹನಗಳ ಬಾಡಿಗೆ ಹೆಚ್ಚಳ ಮಾಡಲು ಚಿಂತನೆ ನಡೆದಿದೆ.

ರಾಜ್ಯದ ಜನರಿಗೆ ಮೊತ್ತೊಂದು ಬೆಲೆ ಏರಿಕೆ ಬಿಸಿ; ಖಾಸಗಿ ಬಸ್ ಟಿಕೆಟ್ ದರ ಹಾಗೂ ಪ್ರವಾಸಿ ಟ್ಯಾಕ್ಸಿ ವಾಹನಗಳ ಬಾಡಿಗೆ ಹೆಚ್ಚಳಕ್ಕೆ ಚಿಂತನೆ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಏಪ್ರಿಲ್ 04ರಂದು ರಾಜ್ಯದಲ್ಲಿ ಪ್ರತಿ ಯೂನಿಟ್ಗೆ 35 ಪೈಸೆ ಹೆಚ್ಚಳ ಮಾಡಿ ಕೆಇಆರ್ಸಿ ಆದೇಶ ಹೊರಡಿಸಿದೆ. ಮತ್ತೊಂದೆಡೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಹೋಟೆಲ್‌, ಉಪಾಹಾರ ಮಂದಿರ ಮಾಲೀಕರು ತಿಂಡಿ, ಊಟ, ಟೀ, ಕಾಫಿ ಬೆಲೆಗಳಲ್ಲಿ ಶೇಕಡಾ 10ರಷ್ಟು ಹೆಚ್ಚಳ ಮಾಡಿವೆ. ಇದರ ನಡುವೆ ಈಗ ಜನರಿಗೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದೆ. ಖಾಸಗಿ ಬಸ್ ಟಿಕೆಟ್ ದರ ಹಾಗೂ ಪ್ರವಾಸಿ ಟ್ಯಾಕ್ಸಿ ವಾಹನಗಳ ಬಾಡಿಗೆ ಹೆಚ್ಚಳ ಮಾಡಲು ಚಿಂತನೆ ನಡೆದಿದೆ.

ದರ ಏರಿಕೆಗೆ ಖಾಸಗಿ ವಾಹನ ಸಂಘಟನೆಗಳ ಚಿಂತನೆ
ದಿನೇದಿನೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಶೇಕಡಾ 10ರಷ್ಟು ಖಾಸಗಿ ಬಸ್ ಪ್ರಯಾಣ ದರ ಏರಿಕೆ ಮಾಡಲು ಖಾಸಗಿ ವಾಹನ ಸಂಘಟನೆಗಳು ಚಿಂತನೆ ನಡೆಸಿವೆ. ಹಾಗೂ ಪ್ರವಾಸಿ ಟ್ಯಾಕ್ಸಿ ವಾಹನಗಳ ಬಾಡಿಗೆ ಹೆಚ್ಚಳ ಮಾಡಲು ಚಿಂತನೆ ನಡೆದಿದೆ. ಬಾಡಿಗೆ ಜಾಸ್ತಿ ಮಾಡದೇ ಹೋದ್ರೆ ಬದುಕೋದು ಕಷ್ಟ ಎಂದು ಕರ್ನಾಟಕ ರಾಜ್ಯ ಖಾಸಗಿ ವಾಹನ ಮಾಲೀಕರ ಸಂಘದ ಅಧ್ಯಕ್ಷ ರಾಮಕೃಷ್ಣ ಹೊಳ್ಳ ತಿಳಿಸಿದ್ದಾರೆ.

ಉಕ್ರೇನ್ ರಷ್ಯಾದ ಯುದ್ಧದ ಪರಿಣಾಮ. ಪೆಟ್ರೋಲಿಯಂ ಬೆಲೆ ಏರಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಡಿಸೇಲ್ ಬೆಲೆ 10 ರೂ ಜಾಸ್ತಿ ಆಗಿದೆ. ಜೊತೆಗೆ ಬೇರೆ ಬೇರೆ ವಲಯದಲ್ಲೂ ಬೆಲೆ ಏರಿಕೆಯಾಗ್ತಿದೆ. ಟೋಲ್ ದರವೂ ಸಹ ಹೆಚ್ಚಾಗಿದೆ. ಹೀಗಾಗಿ ನಾವೂ ಸಹ ದರ ಏರಿಕೆ ಮಾಡಬೇಕಾಗಿದೆ. ಶೇಕಡಾ 10ರಷ್ಟು ಏರಿಕೆ ಆಗಲೇಬೇಕಾಗಿದೆ. ಡಿಸೇಲ್ ಬೆಲೆ ಏರಿಕೆಯಾಗ್ತಿರೋದನ್ನ ನೋಡಿದ್ರೇ ಮುಂದಿನ ದಿನಗಳಲ್ಲಿ ಟ್ಯಾಕ್ಸಿ ಬಾಡಿಗೆ ಬೆಲೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಟ್ರಾನ್ಸ್ ಪೋರ್ಟ್ ಬೆಲೆ ಜಾಸ್ತಿಯಾಗೋದು ಅನಿವಾರ್ಯವಾಗಿದೆ. ನಾವೂ ಬೆಲೆ ಏರಿಕೆ ಮಾಡದೇ ಹೋದ್ರೆ ನಮ್ಮ ಉದ್ಯಮ ನಷ್ಟ ಅನುಭವಿಸಬೇಕಾಗುತ್ತೆ ಎಂದಿದ್ದಾರೆ. ಸದ್ಯ ದರ ಏರಿಕೆ ಬಗ್ಗೆ ಈ ವಾರ ಅಥವಾ ಮುಂದಿನ ವಾರ ಸಭೆ ಮಾಡಲು ಅಸೋಸಿಯೇಷನ್ ನಿರ್ಧರಿಸಿದೆ.

ಇದನ್ನೂ ಓದಿ: ಗೃಹ ಬಳಕೆ ವಿದ್ಯುತ್​ ದರ ಏರಿಕೆಯಾಯ್ತು! ಏಪ್ರಿಲ್​ 1ರಿಂದಲೇ ಯೂನಿಟ್​​ಗೆ 35 ಪೈಸೆ ಹೆಚ್ಚಳ, ಲೆಕ್ಕಾಚಾರ ಇಲ್ಲಿದೆ

ಬೆಲೆ ಏರಿಕೆ ನಮಗೆ ನುಂಗಲಾರದ ತುತ್ತಾಗಿದೆ, ತಿಂಡಿ ಬೆಲೆ ಶೇ. 10 ಜಾಸ್ತಿ ಮಾಡ್ತಿದ್ದೇವೆ -ಸಹಿಸಿಕೊಳೀ ಎಂದ ಹೋಟೆಲು ಮಾಲೀಕರು