ಕರ್ನಾಟಕ ಚುನವಾಣೆ: ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ; ಪ್ರಯಾಣಿಕರ ಆಕ್ರೋಶ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೆರಡು ದಿನ ಬಾಕಿ ಇರುವಾಗಲೇ ಬೆಂಗಳೂರಿನಿಂದ ರಾಜ್ಯದ ಹಲವು ಜಿಲ್ಲೆಗಳಿಗೆ ತೆರಳುವ ಖಾಸಗಿ ಬಸ್‌ಗಳ ದರ ದ್ವಿಗುಣಗೊಂಡಿದೆ.

ಕರ್ನಾಟಕ ಚುನವಾಣೆ: ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ; ಪ್ರಯಾಣಿಕರ ಆಕ್ರೋಶ
ಕರ್ನಾಟಕ ಚುನಾವಣೆ ಹಿನ್ನೆಲೆ ಖಾಸಗಿ ಬಸ್ ಟಿಕೆಟ್ ದರ ಏರಿಕೆImage Credit source: PTI File
Follow us
Rakesh Nayak Manchi
|

Updated on:May 08, 2023 | 8:42 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಇನ್ನೆರಡು ದಿನ ಬಾಕಿ ಇರುವಾಗಲೇ ಬೆಂಗಳೂರಿನಿಂದ ರಾಜ್ಯದ ಹಲವು ಜಿಲ್ಲೆಗಳಿಗೆ ತೆರಳುವ ಖಾಸಗಿ ಬಸ್‌ಗಳ ದರ (Private buses ticket price hike) ದ್ವಿಗುಣಗೊಂಡಿದೆ. ಬೇರೆ ಜಿಲ್ಲೆಗಳಿಂದ ನಗರಕ್ಕೆ ಆಗಮಿಸಿದವರ ಸಂಖ್ಯೆ ಗಮನಾರ್ಹವಾಗಿದ್ದು, ಮೇ 10 ರಂದು ತಮ್ಮ ಅಮೂಲ್ಯ ಮತ ಚಲಾಯಿಸಲು ಅನೇಕರು ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡ ಖಾಸಗಿ ಬಸ್​ ಮಾಲೀಕರು, ಟಿಕೆಟ್ ದರವನ್ನು ಹೆಚ್ಚಳ ಮಾಡಿದ್ದಾರೆ. ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹಾಗಿದ್ದರೆ ಎಷ್ಟು ದರ ಹೆಚ್ಚಳವಾಗಿದೆ? ಇಲ್ಲಿದೆ ಮಾಹಿತಿ

ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಬಸ್​ ದರ 800 ರೂ. ಇತ್ತು, ಈಗ 1800ಕ್ಕೆ ಏರಿಕೆಯಾಗಿದೆ. ಅದೇ ರೀತಿ 950ರೂ. ಇದ್ದ ಮಂಗಳೂರು ಟಿಕೆಟ್ ದರ ಇದೀಗ 2200ರೂ. ಆಗಿದೆ. ಶಿವಮೊಗ್ಗ 900ರಿಂದ 2160 ರೂ., ಉಡುಪಿ 900 ರಿಂದ 2200 ರೂ., ಬೆಳಗಾವಿ 1100 ರಿಂದ 2800 ರೂ., ಹಾಸನ 650 ರಿಂದ 2200 ರೂ., ಗೋವಾ 1100 ರಿಂದ 3500 ರೂ., ಚಿಕ್ಕಮಗಳೂರು 700 ರಿಂದ 1500 ರೂ., ಕಲಬುರಗಿ 1400 ರಿಂದ 2500 ರೂ., ಬಾಗಲಕೋಟೆ 1400 ರಿಂದ 2300 ರೂ., ಯಾದಗಿರಿ 1400 ರಿಂದ 1999 ರೂ., ಅಥಣಿ 1400 ರಿಂದ 2200 ರೂ., ಕೊಡಗು 700 ರಿಂದ 1400 ರೂ., ಬಳ್ಳಾರಿ 900 ರಿಂದ 2500 ರೂ.ಗೆ ಏರಿಸಲಾಗಿದೆ.

ಇದನ್ನೂ ಓದಿ: Karnataka Star Voters: ಮೇ 10ರಂದು ಮತ ಚಲಾಯಿಸಲಿರುವ ಕರ್ನಾಟಕದ ಸ್ಟಾರ್​ ನಟ ನಟಿಯರು ಇವರೇ ನೋಡಿ

ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಪ್ರಯಾಣಿಕರ ಆಕ್ರೋಶ

ಖಾಸಗಿ ಬಸ್​ಗಳ ಟಿಕೆಟ್ ದರ ಹೆಚ್ಚಳವಾಗಿರುವ ಹಿನ್ನೆಲೆ ಪ್ರಯಾಣಿಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಮೊನ್ನೆಯಷ್ಟೇ 900 ಕೊಟ್ಟು ಬಂದಿದ್ದೆವು. ಇದೀಗಾ 1500 ರಿಂದ 2 ಸಾವಿರದವರೆಗೂ ಟಿಕೆಟ್ ದರ ಏರಿಕೆ ಮಾಡಿದ್ದಾರೆ. ನಾವು ಊರಿಗೆ ಹೇಗೆ ಹೋಗುವುದು? ವೋಟ್ ಹಾಕುವುದು ಹೇಗೆ? ಟಿಕೆಟ್ ದರ ನೋಡಿ ಬುಕ್ ಮಾಡುದಾ? ಬೇಡವಾ? ಅಂತ ಚಿಂತೆ ಮಾಡುತ್ತಿದ್ದೇವೆ. ದರ ಹೆಚ್ಚಳದ ವಿರುದ್ಧ ಆರ್​ಟಿಒ ಅಧಿಕಾರಿಗಳು ಕೂಡ ಯಾವುದೇ ಕ್ರಮತೆಗೆದುಕೊಂಡಿಲ್ಲ ಎಂದು ಪ್ರಯಾಣಿಕರು ಟೀಕಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:40 pm, Mon, 8 May 23

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ