Bengaluru Crime: ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಖಾಸಗಿ ಕಂಪನಿ ಉದ್ಯೋಗಿ ಆತ್ಮಹತ್ಯೆ, ವಿಡಿಯೋ ಯೂಟ್ಯೂಬ್‍ಗೆ ಅಪ್‍ಲೋಡ್

|

Updated on: Jun 14, 2023 | 8:06 AM

ಕೆಲಸದ ವೇಳೆ ಮೂವರು ಹಿರಿಯ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದರು ಎಂದು ಮೃತ ವಿವೇಕ್ ಆರೋಪಿಸಿದ್ದು ಈ ಮೂವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ನಿರ್ಧಾರ ಮಾಡಿರುವುದಾಗಿ ಆತ್ಮಹತ್ಯೆಗೂ ಮುನ್ನ ವಿವೇಕ್ ಕುಮಾರ್ ಮೊಬೈಲ್‍ನಲ್ಲಿ ವೀಡಿಯೊ ಮಾಡಿ ಯೂಟ್ಯೂಬ್‍ಗೆ ಅಪ್‍ಲೋಡ್ ಮಾಡಿದ್ದಾರೆ.

Bengaluru Crime: ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಖಾಸಗಿ ಕಂಪನಿ ಉದ್ಯೋಗಿ ಆತ್ಮಹತ್ಯೆ, ವಿಡಿಯೋ ಯೂಟ್ಯೂಬ್‍ಗೆ ಅಪ್‍ಲೋಡ್
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಖಾಸಗಿ ಕಂಪೆನಿಯೊಂದರ ಉದ್ಯೋಗಿ, ಹಿರಿಯ ಅಧಿಕಾರಿಗಳ ಕಿರುಕುಳ(Torture) ತಾಳಲಾರದೆ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಅಮಾನವೀಯ ಘಟನೆ ಬೆಂಗಳೂರಿನ ಎಚ್‍ಎಎಲ್‍ನಲ್ಲಿ ನಡೆದಿದೆ. ಮೊಬೈಲ್​ನಲ್ಲಿ ವಿಡಿಯೋ ಮಾಡಿ ಯೂಟ್ಯೂಬ್ ಗೆ ಅಪ್ ಲೋಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನಗೆ ಯಾರ್ಯಾರು ಕಿರುಕುಳ ನೀಡ್ತಿದ್ರು ಎಂಬ ಸುದೀರ್ಘ ವಿಡಿಯೋ‌ ಮಾಡಿ ನೇಣಿಗೆ ಶರಣಾಗಿದ್ದಾರೆ.

ವಿವೇಕ್ ಕುಮಾರ್ ಮೃತ ದುರ್ದೈವಿ. ಈತ ಲ್ಯಾಂಡ್ ಮಾರ್ಕ್ ಗ್ರೂಪ್‍ಗೆ ಸೇರಿದ ಲೈಫ್ ಸ್ಟೈಲ್ ಪ್ರೈವೇಟ್ ಲಿಮಿಟೆಡ್‍ನಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದ ವೇಳೆ ಮೂವರು ಹಿರಿಯ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದರು ಎಂದು ಮೃತ ವಿವೇಕ್ ಆರೋಪಿಸಿದ್ದು ಈ ಮೂವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ನಿರ್ಧಾರ ಮಾಡಿರುವುದಾಗಿ ಆತ್ಮಹತ್ಯೆಗೂ ಮುನ್ನ ವಿವೇಕ್ ಕುಮಾರ್ ಮೊಬೈಲ್‍ನಲ್ಲಿ ವೀಡಿಯೊ ಮಾಡಿ ಯೂಟ್ಯೂಬ್‍ಗೆ ಅಪ್‍ಲೋಡ್ ಮಾಡಿದ್ದಾರೆ.

ಇದನ್ನೂ ಓದಿ: Ballari: ಪತ್ನಿ ಸೊಸೆ ಮೂವರು ಮಕ್ಕಳನ್ನ ಕೊಲೆ ಮಾಡಿದ ಆರೋಪಿಗೆ ಮರಣದಂಡನೆ ವಿಧಿಸಿದ ಹೈಕೋರ್ಟ್

ಇನ್ನು ತನಗೆ ಯಾರು ಕಿರುಕುಳ ನೀಡುತ್ತಿದ್ದರು ಎಂದು ಸುದೀರ್ಘವಾಗಿ ವಿಡಿಯೋದಲ್ಲಿ ಮೃತ ವಿವೇಕ್ ಹೇಳಿಕೊಂಡಿದ್ದಾರೆ. ತಾನು ವಾಸವಿದ್ದ ರೂಂನ ಫ್ಯಾನಿಗೆ ನೇಣು ಹಾಕಿಕೊಂಡಿದ್ದು ಫ್ಯಾನಿಗೆ ಹಾಕಿದ್ದ ಕುಣಿಕೆಯ ಮುಂದೆಯೇ ಸೆಲ್ಫಿ ವಿಡಿಯೊ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಎಚ್‍ಎಎಲ್ ಪೊಲೀಸರು ಆಗಮಿಸಿ ವಿವೇಕ್‍ಕುಮಾರ್ ಸಾವಿಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿದ್ದು ಅಟ್ರಾಸಿಟಿ ಪ್ರಕರಣ ದಾಖಲು ಮಾಡಿಕೊಂಡು ನಿತೇಶ್ ಎಂಬಾತನನ್ನು ಬಂಧಿಸಿದ್ದಾರೆ. ಉಳಿದ ಇನ್ನಿಬ್ಬರು ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ