ಬೆಂಗಳೂರಿನಲ್ಲಿ ಇಂದು ಮತ್ತೊಂದು ಪ್ರತಿಭಟನೆ: ಖಾಸಗಿ ಶಾಲಾ ಶಿಕ್ಷಕರ ಧರಣಿ

ಶಿಕ್ಷಕರನ್ನೂ ಕೊರೊನಾ ಯೋಧರು ಎಂದು ಪರಿಗಣಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ವಿಶೇಷ ಅನುದಾನ ನೀಡಬೇಕು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ವಿಮಾ ಸೌಲಭ್ಯ ಒದಗಿಸಬೇಕು ಎಂಬುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಖಾಸಗಿ ಶಾಲಾ ಶಿಕ್ಷಕರು ಸರ್ಕಾರದ ಮುಂದಿಟ್ಟಿದ್ದಾರೆ.

  • Ghanashyam D M | ಡಿ.ಎಂ.ಘನಶ್ಯಾಮ
  • Published On - 7:04 AM, 16 Dec 2020
ಬೆಂಗಳೂರಿನಲ್ಲಿ ಇಂದು ಮತ್ತೊಂದು ಪ್ರತಿಭಟನೆ: ಖಾಸಗಿ ಶಾಲಾ ಶಿಕ್ಷಕರ ಧರಣಿ
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಶಿಕ್ಷರು ಬುಧವಾರ ನಗರದಲ್ಲಿ ಪ್ರತಿಭಟನಾ ಱಲಿ ನಡೆಸಲಿದ್ದಾರೆ.

ಱಲಿಯಲ್ಲಿ ಸುಮಾರು 3 ಸಾವಿರ ಶಿಕ್ಷಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮೌರ್ಯ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಈ ವೇಳೆ ಟ್ರಾಫಿಕ್ ಜಾಂ ಆಗುವ ಸಾಧ್ಯತೆ ಇದೆ.

ಶಿಕ್ಷಕರನ್ನೂ ಕೊರೊನಾ ಯೋಧರು ಎಂದು ಪರಿಗಣಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ವಿಶೇಷ ಅನುದಾನ ನೀಡಬೇಕು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ವಿಮಾ ಸೌಲಭ್ಯ ಒದಗಿಸಬೇಕು ಎಂಬುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಖಾಸಗಿ ಶಾಲಾ ಶಿಕ್ಷಕರು ಸರ್ಕಾರದ ಮುಂದಿಟ್ಟಿದ್ದಾರೆ.

ಹಲವು ಪೋಷಕರು ಶಾಲಾ ಶುಲ್ಕಗಳನ್ನು ಬಾಕಿ ಉಳಿಸಿಕೊಂಡಿದ್ದಾರೆ. ಅಂಥವರಿಗೆ ಶೀಘ್ರ ಬಾಕಿ ಶುಲ್ಕ ಪಾವತಿಸುವ ಕುರಿತು ಆದೇಶ ಹೊರಡಿಸಬೇಕು. ಶಾಲಾ ಸಿಬ್ಬಂದಿಗೆ ಮೊದಲ ಹಂತದಲ್ಲಿಯೇ ಆದ್ಯತೆ ಮೇಲೆ ಕೊರೊನಾ ಲಸಿಕೆ ವಿತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಹೊಸ ರೂಪದಲ್ಲಿ ವಿದ್ಯಾಗಮ ಯೋಜನೆ ಮತ್ತೆ ಆರಂಭ