AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಸಚಿವರ ಹೇಳಿಕೆ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ ಗರಂ; ಕೋರ್ಟ್ ನಿಯಮದನ್ವಯ ನಾವು ಶುಲ್ಕದ ಆದೇಶ ಸ್ವಾಗತಿಸಿದ್ದೇವೆ ಎಂದ ರುಪ್ಸಾ

ಕೋರ್ಟ್ ನಿಯಮದನ್ವಯ ನಾವು ಶುಲ್ಕದ ಆದೇಶ ಸ್ವಾಗತಿಸಿದ್ದೇವೆ. ಆದರೆ ವಿನಾಃ ಕಾರಣ ಶಿಕ್ಷಣ ಸಚಿವರು ಗೊಂದಲದ ಹೇಳಿಕೆ ನೀಡುತ್ತಿದ್ದಾರೆ. ಇವರ ಈ ಹೇಳಿಕೆಯಿಂದಲೇ ಶುಲ್ಕದ ಸಮಸ್ಯೆ ತೀವ್ರವಾಗಿದೆ ಎಂದು ರುಪ್ಸಾ ಸಂಘಟನೆ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕ ಶಿಕ್ಷಣ ಸಚಿವರ ವಿರುದ್ಧ ಆಕ್ರೋಶಗೊಂಡಿದ್ದಾರೆ.

ಶಿಕ್ಷಣ ಸಚಿವರ ಹೇಳಿಕೆ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ ಗರಂ; ಕೋರ್ಟ್ ನಿಯಮದನ್ವಯ ನಾವು ಶುಲ್ಕದ ಆದೇಶ ಸ್ವಾಗತಿಸಿದ್ದೇವೆ ಎಂದ ರುಪ್ಸಾ
ಶಿಕ್ಷಣ ಸಚಿವ ಬಿ ಸಿ ನಾಗೇಶ್ (ಸಂಗ್ರಹ ಚಿತ್ರ)
TV9 Web
| Updated By: preethi shettigar|

Updated on:Mar 27, 2022 | 3:04 PM

Share

ಬೆಂಗಳೂರು: ನಾಳೆಯಿಂದ ಎಸ್​ಎಸ್​ಎಲ್​ಸಿ (SSLC) ಪರೀಕ್ಷೆ ಆರಂಭ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೂ ಹಾಲ್ ಟಿಕೆಟ್ (Hall ticket) ನೀಡಬೇಕೆಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿಕೆ ನೀಡಿದ್ದಾರೆ. ಸದ್ಯ ಶಿಕ್ಷಣ ಸಚಿವರ ಹೇಳಿಕೆ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ ಗರಂ ಆಗಿದೆ. ಕೋರ್ಟ್ ನಿಯಮದನ್ವಯ ನಾವು ಶುಲ್ಕದ ಆದೇಶ ಸ್ವಾಗತಿಸಿದ್ದೇವೆ. ಪರೀಕ್ಷೆ ಸಮೀಪಿಸಿದ್ರೂ ಪೋಷಕರು ಶುಲ್ಕವನ್ನೇ ಪಾವತಿಸಿಲ್ಲ. ಆದರೂ ಮಾನವೀಯತೆ ದೃಷ್ಟಿಯಿಂದ ಪರೀಕ್ಷೆ (Exam) ಕೊಡುತ್ತೀದ್ದೇವೆ. ಎಷ್ಟೋ ಪಾಲಕರು ಶುಲ್ಕ ಕಟ್ಟದೆ ಬೆದರಿಕೆ ಹಾಕುತ್ತಿದ್ದಾರೆ. ಪ್ರವೇಶ ತೆಗೆದೇ ಕೊಳ್ಳುತ್ತೇವೆ ಎಂದು ದೌರ್ಜನ್ಯ ಎಸಗುತ್ತಿದ್ದಾರೆ ಎಂದು ರುಪ್ಸಾ ಸಂಘಟನೆ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಇಂತವರಿಗೆ ಇಲಾಖೆ ಯಾವುದೇ ಆದೇಶ ಮಾಡೊಲ್ಲ. ಕೋರ್ಟ್ ನಿಯಮದನ್ವಯ ನಾವು ಶುಲ್ಕದ ಆದೇಶ ಸ್ವಾಗತಿಸಿದ್ದೇವೆ. ಆದರೆ ವಿನಾಃ ಕಾರಣ ಶಿಕ್ಷಣ ಸಚಿವರು ಗೊಂದಲದ ಹೇಳಿಕೆ ನೀಡುತ್ತಿದ್ದಾರೆ. ಇವರ ಈ ಹೇಳಿಕೆಯಿಂದಲೇ ಶುಲ್ಕದ ಸಮಸ್ಯೆ ತೀವ್ರವಾಗಿದೆ ಎಂದು ರುಪ್ಸಾ ಸಂಘಟನೆ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕ ಶಿಕ್ಷಣ ಸಚಿವರ ವಿರುದ್ಧ ಆಕ್ರೋಶಗೊಂಡಿದ್ದಾರೆ.

ಹಿಜಾಬ್ ಧರಿಸಿಕೊಂಡು ಬಂದ್ರೆ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಇಲ್ಲ ಎಂಟ್ರಿ; ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆದೇಶ

ಹಿಜಾಬ್ ಧರಿಸಿಕೊಂಡು ಎಸ್ಎಸ್ಎಲ್​ಸಿ ಪರೀಕ್ಷೆ ಬಂದರೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ನೀಡಿದೆ. 1995ರ ನಿಯಮ 11ರಲ್ಲಿ ಪ್ರದತ್ತವಾಗಿರುವ ಅಧಿಕಾರದನ್ವಯ ಸಮವಸ್ತ್ರ ಜಾರಿ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗಪಡಿಸಿರುವ ಶಾಲಾ ಸಮವಸ್ತ್ರ ಕಡ್ಡಾಯವಾಗಿರಲಿದೆ. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿರ್ಧರಿಸಿರುವ ಕಡ್ಡಾಯ ಮಾಡಲಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ನೀಡಿದೆ.

ಶಾಲಾ- ಕಾಲೇಜಿನಲ್ಲಿ ಹಿಜಾಬ್ ಧರಿಸುವಂತಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂದು ಮಾರ್ಚ್ ​15ರಂದು ಕರ್ನಾಟಕ ಹೈಕೋರ್ಟ್​ ತೀರ್ಪು ನೀಡಿದೆ.  ಈ ಬೆನ್ನೆಲೆ ಕೋರ್ಟ್ ತೀರ್ಪಿಗೆ ಬೇಸರ ವ್ಯಕ್ತಪಡಿಸಿರುವ​ ಮುಸ್ಲಿಂ ಸಮುದಾಯ ಮುಖಂಡರು ಕರ್ನಾಟಕ ಬಂದ್​ಗೆ ಕರೆ ನೀಡಿದ್ದರು. ಮುಸ್ಲಿಂ ಮುಖಂಡರು ಸ್ವಯಂಪ್ರೇರಿತ ಬಂದ್​ಗೆ ಘೋಷಣೆ ಮಾಡಿದ್ದರು. ಇನ್ನೂ ಕೂಡ ಕೆಲವು ಕಡೆ ಕೋರ್ಟ್​ ತೀರ್ಪಿಗೆ ಅಸಮಾಧಾನವಿದ್ದು, ಅನೇಕ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೇ ಗೈರಾಗಿದ್ದಾರೆ. ಹೀಗಿರುವಾಗಲೇ ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದ್ದು, ಮುಂಬರುವ 2022ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಹಿಜಾಬ್​ ಧರಿಸಿ ಬಂದರೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಆದೇಶ ಹೊರಡಿಸಿದೆ.

ಇದನ್ನೂ ಓದಿ: ಹಿಜಾಬ್ ಧರಿಸಿಕೊಂಡು ಬಂದ್ರೆ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಇಲ್ಲ ಎಂಟ್ರಿ; ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆದೇಶ

ಮಾ.28 ರಿಂದ ಏ.11ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿಯಿಂದ ಉಚಿತ ಪ್ರಯಾಣಕ್ಕೆ ಅವಕಾಶ

Published On - 2:56 pm, Sun, 27 March 22