AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಸಾರಿಗೆ ಸೇವೆ ಬಂದ್​ಗೆ ಶಾಲೆಗಳ ಒಕ್ಕೂಟದ ಬೆಂಬಲವಿಲ್ಲ, ಎಂದಿನಂತೆ ಖಾಸಗಿ ಶಾಲೆಗಳು ಓಪನ್

ಖಾಸಗಿ ಸಾರಿಗೆ ಒಕ್ಕೂಟ ಬಂದ್​ಗೆ ಕರೆ ನೀಡಿದ್ದು, ಇದಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ಬೆಂಬಲ ವ್ಯಕ್ತಪಡಿಸಿಲ್ಲ. ಪೋಷಕರೇ ಮಕ್ಕಳನ್ನು ಶಾಲೆಗೆ ತಂದು ಬೀಡಬೇಕು ಎಂದು ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮನವಿ ಮಾಡಿದರು.

ಖಾಸಗಿ ಸಾರಿಗೆ ಸೇವೆ ಬಂದ್​ಗೆ ಶಾಲೆಗಳ ಒಕ್ಕೂಟದ ಬೆಂಬಲವಿಲ್ಲ, ಎಂದಿನಂತೆ ಖಾಸಗಿ ಶಾಲೆಗಳು ಓಪನ್
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on: Sep 10, 2023 | 9:55 AM

Share

ಬೆಂಗಳೂರು ಸೆ.10: ಇಂದು (ಸೆ.10) ಮಧ್ಯರಾತ್ರಿಯಿಂದ ನಾಳೆ (ಸೆ.11) ಮಧ್ಯರಾತ್ರಿವರೆಗೆ ಖಾಸಗಿ ಸಾರಿಗೆ ಒಕ್ಕೂಟ ಬಂದ್​ಗೆ (Private Vehicle Bandh) ಕರೆ ನೀಡಿದ್ದು, ಇದಕ್ಕೆ ಖಾಸಗಿ ಶಾಲೆಗಳ ಒಕ್ಕೂಟ (Private School Association) ಬೆಂಬಲ ವ್ಯಕ್ತಪಡಿಸಿಲ್ಲ. ಸೋಮವಾರ ಎಂದಿನಂತೆ ಖಾಸಗಿ ಶಾಲೆಗಳು (Private School) ತೆರೆಯಲಿವೆ. ಮಕ್ಕಳನ್ನು ಶಾಲೆಗೆ ತಂದು ಬೀಡುವುದು ಪೋಷಕರ ಜವಾಬ್ದಾರಿ. ಖಾಸಗಿ ಶಾಲೆಗಳ ವಾಹನಗಳ ಸಂಘ ಹಾಗೂ ಶಾಲಾ ವಾಹನಗಳ ಮಾಲೀಕರ ಸಂಘಟನೆ ಬಂದ್​​ಗೆ ಬೆಂಬಲ ಸೂಚಿಸಿವೆ. ಹೀಗಾಗಿ ನಾಳೆ ಶಾಲಾ ವಾಹನಗಳನ್ನು ರಸ್ತೆಗೆ ಇಳಿಸಲ್ಲ. ಮಕ್ಕಳನ್ನು ಕರೆದುಕೊಂಡು ಬರುವುದಿಲ್ಲ ಅಂತಿವೆ. ಹೀಗಾಗಿ ಪೋಷಕರೇ ಮಕ್ಕಳನ್ನು ಶಾಲೆಗೆ ತಂದು ಬೀಡಬೇಕು ಎಂದು ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮನವಿ ಮಾಡಿದರು.

ಆದರೆ ಆರ್ಕಿಡ್ ಶಾಲೆ ಸೇರಿದಂತೆ ಕೆಲವು ಖಾಸಗಿ ಶಾಲೆಗಳು ರಜೆ ಘೋಷಣೆ ಮಾಡಿವೆ. ಮಕ್ಕಳಿಗೆ ಶಾಲೆಗೆ ಬರಲು ಕಷ್ಟ ಹಿನ್ನೆಲೆಯಲ್ಲಿ ಕೆಲವು ಖಾಸಗಿ ಶಾಲೆಗಳು ರಜೆ ನೀಡಿವೆ.

ಇದನ್ನೂ ಓದಿ: ಇಂದು ಮಧ್ಯರಾತ್ರಿಯಿಂದ ಬೆಂಗಳೂರಲ್ಲಿ ಖಾಸಗಿ ಸಾರಿಗೆ ಸೇವೆ ಬಂದ್​: 36 ಸಂಘಟನೆಗಳು ಬೆಂಬಲ

16 ಸಾವಿರ ವಾಹನಗಳು ನಾಳೆ ಬಂದ್‌ನಲ್ಲಿ ಭಾಗವಹಿಸುತ್ತೇವೆ

ಸುಮಾರು 16 ಸಾವಿರ ವಾಹನಗಳು ನಾಳೆ ಬಂದ್‌ನಲ್ಲಿ ಭಾಗವಹಿಸುತ್ತೇವೆ. ಸರ್ಕಾರಕ್ಕೆ ನಾವು ಹಲವು ಮನವಿಗಳನ್ನು ಸಲ್ಲಿಸಿದ್ದೇವೆ. 2013ರಲ್ಲಿ ರಾಮಲಿಂಗಾರೆಡ್ಡಿ ಇದ್ದಾಗಲೇ ಬೃಹತ್‌ ಹೋರಾಟ ಮಾಡಿದ್ದೇವೆ. ಆಗ ಅವರೇ ನಮ್ಮ ಬೇಡಿಕೆಗಳಿಗೆ ಒಪ್ಪಿಗೆ ಸೂಚಿಸಿದ್ದರು. ಈಗಾಗಲೇ ನಾವು ಖಾಸಗಿ ಶಾಲಾಗಳಿಗೆ ನಾವು ಮನವಿ ಮಾಡಿದ್ದೇವೆ ಎಂದು ಕರ್ನಾಟಕ ಸಂಯುಕ್ತ ಶಾಲಾ ಹಾಗೂ ಲಘು ಚಾಲಕರ ಸಂಘ ಅಧ್ಯಕ್ಷ ಷಣ್ಮುಮುಗಂ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು