ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್​​: ಪೊಲೀಸ್​​ ಇಲಾಖೆ ಮಾನ ಹರಾಜು ಹಾಕಿದ ಹಿರಿಯ IPS ಅಧಿಕಾರಿ

ಡಿಜಿಪಿ ರಾಮಚಂದ್ರ ರಾವ್ ಅವರ ಖಾಸಗಿ ವಿಡಿಯೋ ವೈರಲ್ ಆಗಿದ್ದು, ಪೊಲೀಸ್ ಸಮವಸ್ತ್ರದಲ್ಲೇ ಮಹಿಳೆಯೊಂದಿಗೆ ಸರಸ ನಡೆಸುವ ದೃಶ್ಯಗಳು ಇದರಲ್ಲಿವೆ. ಇದು ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೂ ಮುನ್ನ ನಡೆದಿರುವುದು ಎಂಬುದು ಬಹಿರಂಗವಾಗಿದ್ದು, ರನ್ಯಾ ರಾವ್ ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿಯೂ ಇವರ ಹೆಸರು ತಳಕು ಹಾಕಿಕೊಂಡಿತ್ತು. ಅಧಿಕಾರ ದುರ್ಬಳಕೆ ಆರೋಪದಡಿ ಅಧಿಕಾರಿಯನ್ನು ಕಡ್ಡಾಯ ರಜೆಗೆ ಕಳುಹಿಸಲಾಗಿತ್ತು.

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್​​: ಪೊಲೀಸ್​​ ಇಲಾಖೆ ಮಾನ ಹರಾಜು ಹಾಕಿದ ಹಿರಿಯ IPS ಅಧಿಕಾರಿ
ಕೆ. ರಾಮಚಂದ್ರ ರಾವ್
Edited By:

Updated on: Jan 19, 2026 | 4:40 PM

ಬೆಂಗಳೂರು, ಜನವರಿ 19: ಹಿರಿಯ ಪೊಲೀಸ್​​ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್​​ ಆಗಿದೆ. ಮಹಿಳೆಯೋರ್ವರ ಜೊತೆ ಡಿಜಿಪಿ ಇರುವ ಖಾಸಗಿ ವಿಡಿಯೋ ಪೊಲೀಸ್ ಇಲಾಖೆಯ ಮಾನ ಹರಾಜು ಹಾಕಿದ್ದು, ವಿಡಿಯೋದಲ್ಲಿರೋದು 1 ವರ್ಷದ ಹಿಂದೆ ಸೆರೆಯಾಗಿದ್ದ ದೃಶ್ಯಗಳು ಎಂಬುದು ಗೊತ್ತಾಗಿವೆ. ಸದ್ಯ ಡಿಸಿಆರ್​ಇ ಡಿಜಿಪಿಯಾಗಿ ರಾಮಚಂದ್ರ ರಾವ್ ಕಾರ್ಯನಿರ್ವಹಿಸುತ್ತಿದ್ದಾರೆ.

ಸಮವಸ್ತ್ರದಲ್ಲೇ ಸರಸ!

ಕಚೇರಿಯಲ್ಲಿ ಕುಳಿತು ಪೊಲೀಸ್​ ಯೂನಿಫಾರಂನಲ್ಲಿಯೇ ರಾಮಚಂದ್ರರಾವ್​​ ಮುತ್ತಿಟ್ಟಿರುವ ಹಸಿಬಿಸಿ ದೃಶ್ಯಗಳು ವೈರಲ್​​ ಆದ ವಿಡಿಯೋದಲ್ಲಿವೆ. ಚೇರ್ ಮೇಲೆ ಕುಳಿತು ಮಹಿಳೆಯನ್ನ ಅಪ್ಪಿಕೊಂಡು IPS ಅಧಿಕಾರಿ ಸರಸ ನಡೆಸಿದ್ದು, ಇದು ರನ್ಯಾರಾವ್​ ಪ್ರಕರಣಕ್ಕಿಂತ ಮೊದಲು ನಡೆದಿರುವ ಘಟನೆ ಎಂಬ ಮಾಹಿತಿ ಸಿಕ್ಕಿದೆ. ಅತ್ತ ಮಗಳು ರನ್ಯಾರಾವ್​ ಚಿನ್ನ ಕಳ್ಳಸಾಗಾಣಿಕೆ ಕೇಸ್​​ನಕಲ್ಲಿ ಸಿಕ್ಕಿ ಒದ್ದಾಡುತ್ತಿದ್ದರೆ ಇತ್ತ ಮಲತಂದೆಯ ರಾಸಲೀಲೆಯ ವಿಡಿಯೋ ವೈರಲ್​​ ಆಗಿರೋದು ಜನ ಹುಬ್ಬೇರುವಂತೆ ಮಾಡಿದೆ.

ಇದನ್ನೂ ಓದಿ: ಹೆಂಡತಿಯನ್ನೇ ಅಕ್ಕ ಎಂದು ಪರಿಚಯಿಸಿ ಮತ್ತೊಬ್ಬಳಿಗೆ ಗಾಳ; ವ್ಯಕ್ತಿ ವಂಚನೆ ಕಂಡು ಯುವತಿ ಕಕ್ಕಾಬಿಕ್ಕಿ

ಈ ಹಿಂದೆ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣ ಸಂಬಂಧ ನಟಿ ರನ್ಯಾ ರಾವ್ ಬಂಧನ ಬೆನ್ನಲ್ಲೇ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರ ಹೆಸರೂ ಪ್ರಕರಣದಲ್ಲಿ ತಳಕು ಹಾಕಿಕೊಂಡಿತ್ತು. ನಟಿ ರನ್ಯಾಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆಗೆ ಕರ್ನಾಟಕ ಗೃಹ ಇಲಾಖೆ ಆದೇಶಿಸಿತ್ತು. ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ರಾಮಚಂದ್ರ ರಾವ್ ಕೂಡ ಶಾಮಿಲಾಗಿದ್ದಾರೆಯೇ? ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ ಆಗಿರುವುದರಲ್ಲಿ ಅವರ ಕೈವಾಡ ಇದೆಯೇ ಎಂಬ ಬಗ್ಗೆ ತನಿಖೆಗೆ ಸೂಚಿಸಲಾಗಿತ್ತು.

ಯಾರು ಈ ರಾಮಚಂದ್ರ ರಾವ್​​?

ಕೆ. ರಾಮಚಂದ್ರ ರಾವ್ ಕರ್ನಾಟಕ ಕೇಡರ್​​​ನ ಐಪಿಎಸ್ ಅಧಿಕಾರಿಯಾಗಿದ್ದು, ಈ ಹಿಂದೆ ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮ ಲಿಮಿಟೆಡ್‌ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಮತ್ತು ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಗಿ ಸೇವೆ ಸಲ್ಲಿಸಿದ್ದರು. 2023ರಲ್ಲಿ ಇವರನ್ನು ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್‌ನ ಡಿಜಿಪಿ ಮತ್ತು ಅಧ್ಯಕ್ಷ ಮತ್ತು ಎಂಡಿ ಆಗಿ ಬಡ್ತಿ ನೀಡಲಾಗಿತ್ತು. ಬಳಿಕ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿಯಾಗಿ ನೇಮಕಗೊಂಡಿದ್ದರು. ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಇವರ ಮಲಮಗಳು ರನ್ಯಾ ರಾವ್ ಭಾಗಿ ಪ್ರಕರಣ ಸಂಬಂಧ ಪೊಲೀಸರ ಸವಲತ್ತುಗಳನ್ನು ದುರುಪಯೋಗಪಡಿಸಿಕೊಂಡ ಆರೋಪದಡಿ ಮಾರ್ಚ್ 2025ರಲ್ಲಿ ಇವರನ್ನು ಕಡ್ಡಾಯ ರಜೆಗೆ ಕಳುಹಿಸಲಾಗಿತ್ತು.

‘ಗೃಹ ಇಲಾಖೆಗೆ ದೊಡ್ಡ ಅಪಮಾನ’

ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್​​ ವಿಚಾರ ಸಂಬಂಧ ಅಧಿಕಾರಿ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಟಿವಿ9 ಮೂಲಕ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ.  ಹಿಂದೆಯೂ ರಾಮಚಂದ್ರ ರಾವ್ ಇದೇ ರೀತಿ ನಡೆದುಕೊಂಡಿದ್ದರು, ಆದರೂ ಇಲಾಖೆಯಲ್ಲಿ ಮುಂದುವರಿದಿದ್ದಾರೆ. ಕಚೇರಿಯಲ್ಲೇ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿರೋದು, ಗೃಹ ಇಲಾಖೆಗೆ ದೊಡ್ಡ ಅಪಮಾನ ಎಂದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:21 pm, Mon, 19 January 26