AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಕಾರ್ಪೊರೇಟ್ ಕೆಲಸ ಬಿಟ್ಟು ದೇಶದ ಹೆಮ್ಮೆಯ ಐಎಎಸ್ ಅಧಿಕಾರಿಯಾದ ಪ್ರಿಯಾ ರಾಣಿ

ಬೆಂಗಳೂರಿನಲ್ಲಿ ದೊಡ್ಡ ಸಂಬಳದ ಉದ್ಯೋಗ ಬಿಟ್ಟು, ಬಿಹಾರದ ಸಣ್ಣ ಹಳ್ಳಿಯಿಂದ ಬಂದ ಪ್ರಿಯಾ ರಾಣಿ, ನಾಗರಿಕ ಸೇವೆ ಸೇರುವ ಅಚಲ ಛಲದಿಂದ ಯುಪಿಎಸ್‌ಸಿ ಪರೀಕ್ಷೆಯಲ್ಲಿ 69ನೇ ಶ್ರೇಣಿ ಪಡೆದು ಐಎಎಸ್ ಅಧಿಕಾರಿಯಾದರು. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡದ ಹಿನ್ನೆಲೆಯಿಂದ ಬಂದ ಇವರು, ಅಸಾಧಾರಣ ಪ್ರಯತ್ನದಿಂದ ಸಮಾಜಕ್ಕೆ ದೊಡ್ಡ ಬದಲಾವಣೆ ತರುವ ಕನಸು ನನಸು ಮಾಡಿಕೊಂಡಿದ್ದಾರೆ. ಇವರ ಸಾಧನೆ ಸಾವಿರಾರು UPSC ಆಕಾಂಕ್ಷಿಗಳಿಗೆ ಸ್ಫೂರ್ತಿದಾಯಕ.

ಬೆಂಗಳೂರಿನ ಕಾರ್ಪೊರೇಟ್ ಕೆಲಸ ಬಿಟ್ಟು ದೇಶದ ಹೆಮ್ಮೆಯ ಐಎಎಸ್ ಅಧಿಕಾರಿಯಾದ ಪ್ರಿಯಾ ರಾಣಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jun 26, 2026 | 4:58 PM

Share

ಬೆಂಗಳೂರು, ಜೂ.26: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡದ ಸಣ್ಣ ಹಳ್ಳಿಯೊಂದರಲ್ಲಿ ಹುಟ್ಟಿ, ಇಂದು ದೇಶದ ಅತ್ಯುನ್ನತ ಆಡಳಿತ ಸೇವೆಯಾದ ಐಎಎಸ್ (IAS) ಅಧಿಕಾರಿಯಾಗಿ ದೇಶಾದ್ಯಂತ ಸಾವಿರಾರು ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಮಾದರಿಯಾಗಿದ್ದಾರೆ ಪ್ರಿಯಾ ರಾಣಿ. ಅವರ ಈ ಸಾಧನೆಯ ಹಾದಿ ಅಷ್ಟು ಸುಲಭದ್ದಾಗಿರಲಿಲ್ಲ, ಆದರೆ ಅವರಲ್ಲಿದ್ದ ಅಚಲ ಛಲ ಅವರನ್ನು ಯಶಸ್ಸಿನ ಶಿಖರಕ್ಕೇರಿಸಿದೆ.

ಪ್ರಿಯಾ ರಾಣಿ ಅವರು ಜನಿಸಿದ್ದು ಬಿಹಾರದ ‘ಕುರ್ಕುರಿ’ ಎಂಬ ಅತ್ಯಂತ ಸಣ್ಣ ಹಳ್ಳಿಯಲ್ಲಿ. ಆ ಕಾಲದಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಆ ಭಾಗದಲ್ಲಿ ಆದ್ಯತೆಯೇ ಆಗಿರಲಿಲ್ಲ. ಆದರೆ, ಪ್ರಿಯಾ ಅವರ ತಾತ ಒಂದು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದರು. ಮೊಮ್ಮಗಳ ಭವಿಷ್ಯಕ್ಕಾಗಿ ಇಡೀ ಕುಟುಂಬವನ್ನೇ ಬಿಹಾರದ ರಾಜಧಾನಿ ಪಾಟ್ನಾಕ್ಕೆ ಸ್ಥಳಾಂತರಿಸಿದರು. ತಾತನ ನಂಬಿಕೆಯನ್ನು ಹುಸಿಗೊಳಿಸದ ಪ್ರಿಯಾ, ಶಾಲಾ ಶಿಕ್ಷಣದಲ್ಲಿ ಅತ್ಯುತ್ತಮ ಅಂಕ ಗಳಿಸಿದ್ದಲ್ಲದೆ, ಪ್ರತಿಷ್ಠಿತ ಬಿಐಟಿ ಮೆಸ್ರಾ  ಸಂಸ್ಥೆಯಿಂದ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಪದವಿ ಮುಗಿಸಿದರು.

ಪದವಿ ಮುಗಿಯುತ್ತಿದ್ದಂತೆ ಪ್ರಿಯಾ ಅವರಿಗೆ ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರಮುಖ ಕಾರ್ಪೊರೇಟ್ ಕಂಪನಿಯೊಂದರಲ್ಲಿ ದೊಡ್ಡ ವೇತನದ ಉದ್ಯೋಗ ಸಿಕ್ಕಿತು. ಕೈತುಂಬಾ ಸಂಬಳ, ಆರಾಮದಾಯಕ ಜೀವನ ಸಿಕ್ಕಿದ್ದರು ಪ್ರಿಯಾ ಅವರ ಕನಸು ಮಾತ್ರ ಬೇರೆಯೇ ಆಗಿತ್ತು. ಸಮಾಜದಲ್ಲಿ ದೊಡ್ಡ ಮಟ್ಟದ ಬದಲಾವಣೆ ತರಬೇಕು ಮತ್ತು ನಾಗರಿಕ ಸೇವೆಗೆ ಸೇರಬೇಕೆಂಬ ಆಸೆಯಿಂದ ಅವರು ತಮ್ಮ ಕೈತುಂಬಾ ಸಂಬಳ ತರುತ್ತಿದ್ದ ಕಾರ್ಪೊರೇಟ್ ಕೆಲಸಕ್ಕೆ ದಿಢೀರ್ ರಾಜೀನಾಮೆ ನೀಡಿ, ಯುಪಿಎಸ್‌ಸಿ ಪರೀಕ್ಷೆಯ ತಯಾರಿಯಲ್ಲಿ ತೊಡಗಿಸಿಕೊಂಡರು.

ಇಲ್ಲಿದೆ ನೋಡಿ ಎಕ್ಸ್​​​​​​ ಪೋಸ್ಟ್​​:

ಯುಪಿಎಸ್‌ಸಿ ಪರೀಕ್ಷೆಯ ಹಾದಿ ಅತ್ಯಂತ ಸವಾಲಿನಿಂದ ಕೂಡಿತ್ತು. ಆದರೂ ಮೊದಲ ಪ್ರಯತ್ನದಲ್ಲೇ ಅವರು ಅಖಿಲ ಭಾರತ ಮಟ್ಟದಲ್ಲಿ 284ನೇ ಶ್ರೇಣಿ (AIR 284) ಪಡೆದು ‘ಇಂಡಿಯನ್ ಡಿಫೆನ್ಸ್ ಎಸ್ಟೇಟ್ಸ್ ಸರ್ವಿಸ್’ (IDES) ಸೇರಿಕೊಂಡರು. ಬಹುತೇಕರು ಇಲ್ಲಿಗೇ ತಮ್ಮ ಪ್ರಯತ್ನವನ್ನು ನಿಲ್ಲಿಸುತ್ತಿದ್ದರು. ಆದರೆ, ಪ್ರಿಯಾ ಅವರ ಗುರಿ ಕೇವಲ ಐಎಎಸ್ ಆಗಿತ್ತು.

ಇದನ್ನೂ ಓದಿ: ನೀಟ್ ಸೋಲು ಜೀವನದ ಅಂತ್ಯವಲ್ಲ; ರೋಲ್ಸ್ ರಾಯ್ಸ್‌ನಲ್ಲಿ 72.3 ಲಕ್ಷ ರೂ. ಪ್ಯಾಕೇಜ್ ಪಡೆದು ಇತಿಹಾಸ ಸೃಷ್ಟಿಸಿದ 20ರ ಹರೆಯದ ರಿತುಪರ್ಣಾ!

ಕೆಲಸದ ನಡುವೆಯೂ ಮತ್ತಷ್ಟು ಪರಿಶ್ರಮ ಪಟ್ಟ ಅವರು, 2023ರ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಬರೊಬ್ಬರಿ 69ನೇ ಶ್ರೇಣಿ (AIR 69) ಪಡೆಯುವ ಮೂಲಕ ತಮ್ಮ ಐಎಎಸ್ ಅಧಿಕಾರಿಯಾಗುವ ಕನಸನ್ನು ನನಸಾಗಿಸಿಕೊಂಡರು. ಯಶಸ್ಸು ಎಂಬುದು ನೀವು ಎಷ್ಟು ಬಾರಿ ಪ್ರಯತ್ನಿಸುತ್ತೀರಿ ಎಂಬುದರ ಮೇಲಲ್ಲ, ಬದಲಿಗೆ ಎಷ್ಟು ಕಠಿಣವಾಗಿ ಹೋರಾಡುತ್ತೀರಿ ಎಂಬುದರ ಮೇಲೆ ನಿರ್ಧಾರವಾಗುತ್ತದೆ ಎಂಬುದನ್ನು ಪ್ರಿಯಾ ರಾಣಿ ನಿರೂಪಿಸಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ