AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಐ ಎಡಿಟ್ ಫೋಟೋ ಹಂಚಿಕೊಂಡು ವಿವಾದಕ್ಕೆ ಸಿಲುಕಿದ ಸಚಿವ ಪ್ರಿಯಾಂಕ್ ಖರ್ಗೆ! ನೆಟ್ಟಿಗರ ಆಕ್ರೋಶ

ಎಐ ಮೂಲಕ ಎಡಿಟ್ ಮಾಡಿದ ಫೋಟೋ ಹಂಚಿಕೊಂಡ ಆರೋಪದ ಮೇಲೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಮದ್ದುಗುಂಡು ವಶ ಪ್ರಕರಣದಲ್ಲಿ ಆರ್‌ಎಸ್‌ಎಸ್ ನಂಟಿನ ಬಗ್ಗೆ ಅವರು ಹಂಚಿಕೊಂಡ ಚಿತ್ರ ವಿವಾದಕ್ಕೆ ಕಾರಣವಾಗಿದ್ದು, ತೇಜಸ್ವಿ ಸೂರ್ಯ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಬನಶಂಕರಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಎಐ ಎಡಿಟ್ ಫೋಟೋ ಹಂಚಿಕೊಂಡು ವಿವಾದಕ್ಕೆ ಸಿಲುಕಿದ ಸಚಿವ ಪ್ರಿಯಾಂಕ್ ಖರ್ಗೆ! ನೆಟ್ಟಿಗರ ಆಕ್ರೋಶ
ಪ್ರಿಯಾಂಕ್ ಖರ್ಗೆImage Credit source: PTI
ಭಾವನಾ ಹೆಗಡೆ
|

Updated on: Nov 11, 2026 | 9:56 AM

Share

ಮುಖ್ಯಾಂಶಗಳು

  • ಎಐ ಎಡಿಟ್ ಮಾಡಿದ ಫೋಟೋ ಹಂಚಿಕೆ ಆರೋಪ
  • ತೇಜಸ್ವಿ ಸೂರ್ಯ ರಾಜೀನಾಮೆಗೆ ಆಗ್ರಹ
  • ಖರ್ಗೆ ಪೋಸ್ಟ್‌ಗೆ ನೆಟ್ಟಿಗರಿಂದ ತೀವ್ರ ಆಕ್ರೋಶ, ಜವಾಬ್ದಾರಿ ಪ್ರಶ್ನಿಸಿ ಟೀಕೆ

ಬೆಂಗಳೂರು, ನವೆಂಬರ್ 11: ಸಾಮಾಜಿಕ ಜಾಲತಾಣದಲ್ಲಿ ಎಐ ಮೂಲಕ ಎಡಿಟ್ ಮಾಡಲಾದ ಫೋಟೋ ಹಂಚಿಕೊಂಡ ಆರೋಪದ ಮೇಲೆ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದ್ದಾರೆ. ಬಿಹಾರ ಮತ್ತು ಹರಿಯಾಣದಲ್ಲಿ ನಡೆದ ಭಾರೀ ಪ್ರಮಾಣದ ಮದ್ದುಗುಂಡು ವಶ ಪ್ರಕರಣದಲ್ಲಿ ಆರ್‌ಎಸ್‌ಎಸ್ ನಂಟಿನ ಬಗ್ಗೆ ಪ್ರಶ್ನಿಸಿ ಅವರು ಹಂಚಿಕೊಂಡಿದ್ದ ಫೋಟೋ ಈಗ ವಿವಾದಕ್ಕೆ ಕಾರಣವಾಗಿದೆ. ಮೂಲ ಚಿತ್ರದಲ್ಲಿ ಒಬ್ಬ ವ್ಯಕ್ತಿ ಮಾತ್ರ ಆರ್‌ಎಸ್‌ಎಸ್ ಸಮವಸ್ತ್ರದಲ್ಲಿದ್ದರೆ, ಎಡಿಟ್ ಮಾಡಿದ ಚಿತ್ರದಲ್ಲಿ ಇತರರನ್ನೂ ಅದೇ ಸಮವಸ್ತ್ರದಲ್ಲಿ ತೋರಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬೆಳವಣಿಗೆ ಬೆನ್ನಲ್ಲೇ ಬಿಜೆಪಿ ನಾಯಕರು ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದು, ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ.

AI ಫೋಟೋ ಮೂಲಕ RSS ಹೆಸರು ಎಳೆದು ತಂದ ಆರೋಪ!

ಪ್ರಿಯಾಂಕ್ ಖರ್ಗೆ ನವೆಂಬರ್ 10ರಂದು ತಮ್ಮ ಎಕ್ಸ್ ಖಾತೆಯಲ್ಲಿ ಕಾರ್ಟ್ರಿಡ್ಜ್ ವಶ ಪ್ರಕರಣದ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದರು. ಅಂತರರಾಜ್ಯ ಮದ್ದುಗುಂಡು ಕಳ್ಳಸಾಗಣೆ ಜಾಲದಲ್ಲಿ ಭಾಗಿಯಾಗಿರುವ ಆರೋಪಿಗಳ ಪೈಕಿ ಕೆಲವರು ಆರ್‌ಎಸ್‌ಎಸ್ ಸಮವಸ್ತ್ರದಲ್ಲಿರುವ ಬಗ್ಗೆ ವರದಿಗಳು ಮತ್ತು ಫೋಟೋಗಳಿವೆ ಎಂದು ಉಲ್ಲೇಖಿಸಿದ್ದರು. ಆದರೆ ವೈರಲ್ ಆಗಿರುವ ಫೋಟೋವನ್ನು ಪರಿಶೀಲಿಸಿದ ವರದಿಗಳ ಪ್ರಕಾರ, ಮೂಲ ಚಿತ್ರದಲ್ಲಿ ಒಬ್ಬ ವ್ಯಕ್ತಿ ಮಾತ್ರ ಆರ್‌ಎಸ್‌ಎಸ್ ಸಮವಸ್ತ್ರದಲ್ಲಿದ್ದರೆ, ನಂತರದ ಚಿತ್ರದಲ್ಲಿ ಇತರರನ್ನೂ ಅದೇ ರೀತಿಯಲ್ಲಿ ತೋರಿಸಲಾಗಿದೆ. ಈ ಬದಲಾವಣೆಗೆ AI ಬಳಕೆಯಾಗಿದೆ ಎಂಬ ಆರೋಪ ಕೇಳಿಬಂದಿದೆ.

ಖರ್ಗೆ ಪೋಸ್ಟ್​ಗೆ ನೆಟ್ಟಿಗರು ಗರಂ!

ಖರ್ಗೆ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಹಲವರು, ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ಗಮನಹರಿಸುವ ಬದಲು ಅನಗತ್ಯವಾಗಿ ಆರ್‌ಎಸ್‌ಎಸ್‌ ವಿಚಾರವನ್ನು ಪ್ರಸ್ತಾಪಿಸುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಭಯೋತ್ಪಾದಕನೊಂದಿಗೆ ಕೈಕುಲುಕಿದ ಉದಾಹರಣೆಯನ್ನು ಮುಂದಿಟ್ಟುಕೊಂಡು, ಇದೇ ತರ್ಕವನ್ನು ಅನ್ವಯಿಸಿದರೆ ಅದಕ್ಕೆ ಖರ್ಗೆ ಏನು ಉತ್ತರ ನೀಡುತ್ತಾರೆ ಎಂದು ಒಬ್ಬರು ಪ್ರಶ್ನಿಸಿದ್ದಾರೆ. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದ ಖರ್ಗೆ ಅವರೇ ಈಗ ತಪ್ಪು ಮಾಹಿತಿ ಹರಡುತ್ತಿದ್ದಾರೆಯೇ ಎಂದು ಮತ್ತೊಬ್ಬರು ಟೀಕಿಸಿದ್ದಾರೆ.

ಇನ್ನೊಬ್ಬರು, ಜವಾಬ್ದಾರಿಯುತ ಗೃಹಮಂತ್ರಿಯ ಸ್ಥಾನದಲ್ಲಿರುವವರು ಎಐ ಮೂಲಕ ಸೃಷ್ಟಿಸಲಾದ ಚಿತ್ರವನ್ನು ಆಧಾರವಾಗಿಟ್ಟುಕೊಂಡು ಆರ್‌ಎಸ್‌ಎಸ್‌ ವಿರುದ್ಧ ಆರೋಪ ಮಾಡಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪ ಮಾಡುವ ಮೊದಲು ಸತ್ಯಾಸತ್ಯತೆ ಪರಿಶೀಲಿಸಬೇಕಿತ್ತು. ಗೃಹಮಂತ್ರಿಯ ಆದ್ಯತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಮತ್ತು ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿರಬೇಕು; ಆಧಾರರಹಿತ ಆರೋಪಗಳ ಮೂಲಕ ರಾಜಕೀಯ ಪ್ರಚಾರ ಮಾಡುವುದಲ್ಲ ಎಂದು ಕಾಮೆಂಟ್‌ಗಳಲ್ಲಿ ಆಕ್ಷೇಪ ವ್ಯಕ್ತವಾಗಿದೆ.

ತೇಜಸ್ವಿ ಸೂರ್ಯ ವಾಗ್ದಾಳಿ, ರಾಜೀನಾಮೆಗೆ ಆಗ್ರಹ

ಈ ವಿಚಾರವಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದ್ದಾರೆ. ಕರ್ನಾಟಕದ ಗೃಹ ಸಚಿವರೇ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂದು ಆರೋಪಿಸಿರುವ ಅವರು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಮತ್ತೊಂದೆಡೆ, ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮತ್ತು ದಾರಿತಪ್ಪಿಸುವ ಮಾಹಿತಿ ಹರಡಿದ್ದಾರೆ ಎಂದು ಆರೋಪಿಸಿ ನವೆಂಬರ್ 10ರಂದು ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಬಿಗ್ ಬಾಸ್ ಮನೆಯಲ್ಲಿ ಮತ್ತೆ ಮಂಜು-ಯಶಸ್ ಕಿರಿಕ್; ಮರುಕಳಿಸುತ್ತಾ ಇತಿಹಾಸ?
ಬಿಗ್ ಬಾಸ್ ಮನೆಯಲ್ಲಿ ಮತ್ತೆ ಮಂಜು-ಯಶಸ್ ಕಿರಿಕ್; ಮರುಕಳಿಸುತ್ತಾ ಇತಿಹಾಸ?
ಇಂದು ಈ ರಾಶಿಯವರು ಇತರರಿಂದ ಸಾಲ ಪಡೆಯದಿರಿ
ಇಂದು ಈ ರಾಶಿಯವರು ಇತರರಿಂದ ಸಾಲ ಪಡೆಯದಿರಿ
ಮಲ್ಲೇಶ್ವರಂ ಮಂತ್ರಿ ಮಾಲ್ ಮೆಟ್ರೋ ನಿಲ್ದಾಣದಲ್ಲಿ ಜೀವ ಭಯ
ಮಲ್ಲೇಶ್ವರಂ ಮಂತ್ರಿ ಮಾಲ್ ಮೆಟ್ರೋ ನಿಲ್ದಾಣದಲ್ಲಿ ಜೀವ ಭಯ
ಸಂಸತ್ ಭವನದಲ್ಲಿ ಮಹನೀಯರ ಫೋಟೋ ಜತೆ ಟಿಪ್ಪು ಫೋಟೋ ಇಡಬೇಕು: ವಾಟಾಳ್ ನಾಗರಾಜ್
ಸಂಸತ್ ಭವನದಲ್ಲಿ ಮಹನೀಯರ ಫೋಟೋ ಜತೆ ಟಿಪ್ಪು ಫೋಟೋ ಇಡಬೇಕು: ವಾಟಾಳ್ ನಾಗರಾಜ್
ಗಾನವಿ ಬುಸ್ ಅಂದ್ರೆ ಭಯ ಬೀಳ್ತಾರಾ ತಾಂಡವ್ ರಾಮ್?
ಗಾನವಿ ಬುಸ್ ಅಂದ್ರೆ ಭಯ ಬೀಳ್ತಾರಾ ತಾಂಡವ್ ರಾಮ್?
ರಾಜ್​ ಸಂಬಂಧಿ ಮನೆಯಲ್ಲಿ ಸ್ಫೋಟ: ಸ್ಥಳ ಮಹಜರು ವೇಳೆ ಹೈಡ್ರಾಮಾ
ರಾಜ್​ ಸಂಬಂಧಿ ಮನೆಯಲ್ಲಿ ಸ್ಫೋಟ: ಸ್ಥಳ ಮಹಜರು ವೇಳೆ ಹೈಡ್ರಾಮಾ
ಎನ್​ಡಿಎ ಪರೀಕ್ಷೆಯಲ್ಲಿ ಐತಿಹಾಸಿಕ ಸಾಧನೆ ಮಾಡಿದ ಭದ್ರಾವತಿಯ ಶ್ರೇಯಾ
ಎನ್​ಡಿಎ ಪರೀಕ್ಷೆಯಲ್ಲಿ ಐತಿಹಾಸಿಕ ಸಾಧನೆ ಮಾಡಿದ ಭದ್ರಾವತಿಯ ಶ್ರೇಯಾ
ಬರ ಪರಿಹಾರದಲ್ಲಿ ವ್ಯತ್ಯಾಸ: ಆಕ್ರೋಶ; ಸರ್ಕಾರಕ್ಕೆ ಚೆಕ್ ಬರೆದ ಅನ್ನದಾತರು
ಬರ ಪರಿಹಾರದಲ್ಲಿ ವ್ಯತ್ಯಾಸ: ಆಕ್ರೋಶ; ಸರ್ಕಾರಕ್ಕೆ ಚೆಕ್ ಬರೆದ ಅನ್ನದಾತರು
ರೈಲಿನಡಿ ಬಿದ್ದು ಸಾಯುತ್ತಿದ್ದ ಮಹಿಳೆಯ ಜೀವ ಕಾಪಾಡಿದ ಆರ್​ಪಿಎಫ್​ ಸಿಬ್ಬಂದಿ
ರೈಲಿನಡಿ ಬಿದ್ದು ಸಾಯುತ್ತಿದ್ದ ಮಹಿಳೆಯ ಜೀವ ಕಾಪಾಡಿದ ಆರ್​ಪಿಎಫ್​ ಸಿಬ್ಬಂದಿ
ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ಹಾಸನಾಂಬೆಗೆ ಹರಕೆ ಹೊತ್ತ ಅಭಿಮಾನಿ
ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ಹಾಸನಾಂಬೆಗೆ ಹರಕೆ ಹೊತ್ತ ಅಭಿಮಾನಿ