ಬೆಂಗಳೂರು: ಶಕ್ತಿ ಯೋಜನೆ(Shakti Yojana) ಜಾರಿ ಆದ ಬಳಿಕ ಇದೇ ಮೊದಲ ವೀಕೆಂಡ್ ಆಗಿದ್ದು ರಾಜ್ಯಾದ್ಯಂತ ಬಹುತೇಕ ಪುಣ್ಯ ಕ್ಷೇತ್ರಗಳು ಮಹಿಳೆಯರಿಂದ ತುಂಬಿ ತುಳುಕುತ್ತಿವೆ. ಇಂದು ವೀಕೆಂಡ್ ಹಾಗೂ ಅಮಾವಾಸ್ಯೆ ಹಿನ್ನೆಲೆ ಮಹಿಳೆಯರು ಕುಟುಂಬ ಸಮೇತರಾಗಿ ಧರ್ಮ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಮಂಗಳೂರು, ಶೃಂಗೇರಿ, ಹೊರನಾಡು, ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ಬಸ್ಗಳು ತುಂಬಿ ತುಳುಕುತ್ತಿವೆ. ಇನ್ನು ಶಕ್ತಿ ಯೋಜನೆ ಯಶಸ್ಸಿನ ಕುರಿತು ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ಟ್ವೀಟ್ ಮಾಡಿ ಸಂತಸ ವ್ಯಕ್ತಡಿಸಿದ್ದಾರೆ.
ಶಕ್ತಿ ಯೋಜನೆಯಿಂದ ದೇವಸ್ಥಾನಕ್ಕೆ ಬರುವವರ ಸಂಖ್ಯೆ ದ್ವಿಗುಣವಾಗಿದೆ. ಜನರ ಅಂತರಾಳದಲ್ಲಿ ಪೂಜಿಸುವ, ಪ್ರೀತಿಸುವ ಭಾವನೆ ಸಬಲಗೊಳಿಸಲಾಗಿದೆ. ಹಿಂದುತ್ವವು ಜನರನ್ನು ಧರ್ಮದ ದಾರಿಯಲ್ಲಿ ಸಾಗಿಸುವ ಬದಲಿಗೆ ಸಮಾಜವನ್ನು ಇಬ್ಭಾಗಿಸುವ ದ್ವೇಷ ಹಾಗೂ ಅಸೂಯೆಯ ಕೂಪಕ್ಕೆ ತಳ್ಳಿತ್ತು. ದ್ವೇಷದಿಂದ ಜನರನ್ನು ದೇವರ ಬಳಿ ಕರೆದೊಯ್ಯಲು ಸಾಧ್ಯವಿಲ್ಲ. ಆದರೆ ಪ್ರೀತಿ ಹಾಗೂ ಕಾಂಗ್ರೆಸ್ ಸರ್ಕಾರದ ‘ಶಕ್ತಿ’ ಯೋಜನೆಯು ಜನರನ್ನು ತಮ್ಮ ಪೂಜ್ಯ ಸ್ಥಳಗಳಿಗೆ ಮತ್ತಷ್ಟು ಹತ್ತಿರ ಮಾಡಿದೆ. ದೇವಸ್ಥಾನಗಳ ಸುತ್ತಲಿನ ಸಣ್ಣ ವ್ಯಾಪಾರಿಗಳಿಗೆ ನೇರ ಅನುಕೂಲ ಆಗಲಿದೆ. ಅಲ್ಲಿನ ಆರ್ಥಿಕ ಪ್ರಗತಿಯ ವೇಗ ಕೂಡ ದ್ವಿಗುಣಗೊಳ್ಳಲಿದೆ. ದ್ವೇಷ ಕೇಂದ್ರಿತ ಅಧರ್ಮವನ್ನು ಸೋಲಿಸಿ ಪ್ರೀತಿ ಹಾಗೂ ಸಹಬಾಳ್ವೆ ಕೇಂದ್ರಿತ ಧರ್ಮ ಗೆಲ್ಲಿಸಲು ಹೆಜ್ಜೆ ಇಟ್ಟಿದ್ದೇವೆ. ಸಹಬಾಳ್ವೆ ಕೇಂದ್ರಿತ ಧರ್ಮ ಗೆಲ್ಲಿಸಲು ‘ಶಕ್ತಿ’ಯುತ ಹೆಜ್ಜೆ ಇಟ್ಟಿದ್ದೇವೆ ಎಂದು ಶಕ್ತಿ ಯೋಜನೆ ಯಶಸ್ಸಿನ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ವೀಕೆಂಡ್- ಅಮವಾಸ್ಯೆ: ಬಸ್ ಫುಲ್ ರಶ್, ಧಾರ್ಮಿಕ ಸ್ಥಳಗಳಿಗೆ ಮಹಿಳಾ ಭಕ್ತರ ದಂಡು: ಹಲವೆಡೆ ಗಲಾಟೆ ಗದ್ದಲ
ಹಿಂದುತ್ವ – ಜನರನ್ನ ಧರ್ಮದ ದಾರಿಯಲ್ಲಿ ಸಾಗಿಸುವ ಬದಲಿಗೆ ಸಮಾಜವನ್ನು ಇಬ್ಬಾಗಿಸುವ ದ್ವೇಷ ಹಾಗೂ ಅಸೂಯೆಯ ಕೂಪಕ್ಕೆ ತಳ್ಳಿತ್ತು.
ದ್ವೇಷಕ್ಕೆ ಜನರನ್ನ ದೇವರ ಬಳಿ ಕರೆದೊಯ್ಯಲು ಸಾಧ್ಯವಿಲ್ಲಾ. ಆದರೆ ಪ್ರೀತಿ ಹಾಗೂ ಕಾಂಗ್ರೆಸ್ ನ “ಶಕ್ತಿ” ಜನರನ್ನ ತಮ್ಮ ಪೂಜ್ಯ ಸ್ಥಳಗಳಿಗೆ ಮತ್ತಷ್ಟು ಹತ್ತಿರ ಮಾಡಿದೆ.
ಶಕ್ತಿ ಯೋಜನೆಯಿಂದಾಗಿ ದೇವಸ್ಥಾನ… pic.twitter.com/ujTKB4Odg8
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) June 18, 2023
ನಿನ್ನೆ (ಜೂ.17) ಒಂದೇ ದಿನ ನಾಲ್ಕು ನಿಗಮಗಳ ಬಸ್ಗಳಲ್ಲಿ ಪುರುಷರು ಸೇರಿದಂತೆ 1 ಕೋಟಿ 6 ಲಕ್ಷಕ್ಕೂ ಅಧಿಕ ಪ್ರಯಾಣಿಕರು ಸಂಚರಿಸಿದ್ದಾರೆ. ಇದರಲ್ಲಿ 54,30,150 ಲಕ್ಷ ಮಹಿಳೆಯರು ಪ್ರಯಾಣಿಸಿದ್ದಾರೆ. ಬಿಎಂಟಿಸಿಯಲ್ಲಿ 35,25,566, ಕೆಎಸ್ಆರ್ಟಿಸಿಯಲ್ಲಿ 30,58,458, ಎನ್ಡಬ್ಲೂಕೆಎಸ್ಆರ್ಟಿಸಿ 24,83,683, ಕೆಕೆಆರ್ಟಿಸಿ 15,68,505 ಜನ ಪ್ರಯಾಣಿಸಿದ್ದಾರೆ.
ಬೆಂಗಳೂರಿಗೆ ಸಂಬಂಧಿಸಿದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 1:34 pm, Sun, 18 June 23