Priyanka Gandhi: ಜ. 16ರಂದು ಬೆಂಗಳೂರಿಗೆ ಪ್ರಿಯಾಂಕಾ ಗಾಂಧಿ ಭೇಟಿ; ಮಹಿಳಾ ಸಮಾವೇಶದಲ್ಲಿ ಭಾಗಿ

ಕಾಂಗ್ರೆಸ್‌ನ ರಾಜ್ಯ ಮಹಿಳಾ ಘಟಕವು ಈ ಸಮಾವೇಶವನ್ನು ಆಯೋಜಿಸಿದ್ದು, ವಿವಿಧ ಪಂಚಾಯತ್‌ಗಳು ಮತ್ತು ಸಹಕಾರಿ ಸಂಘಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ ಮಹಿಳೆಯರೊಂದಿಗೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಕೂಡ ಭಾಗವಹಿಸಲಿದ್ದಾರೆ.

Priyanka Gandhi: ಜ. 16ರಂದು ಬೆಂಗಳೂರಿಗೆ ಪ್ರಿಯಾಂಕಾ ಗಾಂಧಿ ಭೇಟಿ; ಮಹಿಳಾ ಸಮಾವೇಶದಲ್ಲಿ ಭಾಗಿ
ಪ್ರಿಯಾಂಕಾ ಗಾಂಧಿ ವಾದ್ರಾImage Credit source: Hindustan Times
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 11, 2023 | 10:52 AM

ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಜನವರಿ 16ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಹಿಳಾ ಸಮಾವೇಶವನ್ನು (Women’s Convention) ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಮಾವೇಶದಲ್ಲಿ ಕರ್ನಾಟಕದಲ್ಲಿ ಹೆಚ್ಚಿನ ಮಹಿಳಾ ಮತದಾರರನ್ನು ಸೆಳೆಯುವ ಉದ್ದೇಶದಿಂದ ಮಹಿಳಾ ಕಲ್ಯಾಣಕ್ಕಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಕಾಂಗ್ರೆಸ್ (Congress) ಬಿಡುಗಡೆ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ.

ಬೆಂಗಳೂರಿನ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಗಾಂಧಿ ಭಾಗವಹಿಸಲಿದ್ದಾರೆ ಎಂಬುದನ್ನು ದೃಢೀಕರಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿಕೆ ಶಿವಕುಮಾರ್, “ಕರ್ನಾಟಕದಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಜನವರಿ 16ರಂದು ಅರಮನೆ ಮೈದಾನದಲ್ಲಿ ನಾನು ನಾಯಕಿ ಎಂಬ ಸಮಾವೇಶವನ್ನು ಆಯೋಜಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Rahul Gandhi: ನಾನು ರಾಹುಲ್​ ಗಾಂಧಿಯನ್ನು ಕೊಂದಿದ್ದೇನೆ: ಹೀಗೆ ಖುದ್ದು ರಾಹುಲ್​ ಗಾಂಧಿ ಹೇಳಿದ್ದೇಕೆ?

ಕಾಂಗ್ರೆಸ್‌ನ ರಾಜ್ಯ ಮಹಿಳಾ ಘಟಕವು ಈ ಸಮಾವೇಶವನ್ನು ಆಯೋಜಿಸಿದ್ದು, ವಿವಿಧ ಪಂಚಾಯತ್‌ಗಳು ಮತ್ತು ಸಹಕಾರಿ ಸಂಘಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ ಮಹಿಳೆಯರೊಂದಿಗೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಕೂಡ ಭಾಗವಹಿಸಲಿದ್ದಾರೆ. ಪ್ರತಿ ಬೂತ್ ಅಥವಾ ಪಂಚಾಯಿತಿಯಿಂದ 3ರಿಂದ 10 ಮಹಿಳೆಯರಿಗೆ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕರ್ನಾಟಕ ಮತ್ತು ದೇಶದ ಜನಸಂಖ್ಯೆಯಲ್ಲಿ ಶೇ.50ರಷ್ಟು ಮಹಿಳೆಯರೇ ಇದ್ದಾರೆ. ಹಾಗಾಗಿ, ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ. ಅವರ ಜೀವನಕ್ಕೆ ಕಾಂಗ್ರೆಸ್ ಪಕ್ಷ ಕೊಡುಗೆ ನೀಡಬೇಕು ಮತ್ತು ಅವರ ಸಮಸ್ಯೆಗಳನ್ನು ಪರಿಹರಿಸಬೇಕು. ಹೀಗಾಗಿ, ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ನಾಯಕತ್ವ ಮತ್ತು ಶಕ್ತಿಯನ್ನು ನೀಡುತ್ತಿದೆ. ಈ ಹಿಂದೆಯೂ ಕಾಂಗ್ರೆಸ್ ಅಂಗನವಾಡಿ ಕಾರ್ಯಕ್ರಮಗಳು, ಆಶಾ ಕಾರ್ಯಕರ್ತೆಯರು ಮತ್ತು ಸ್ವಸಹಾಯ ಸಂಘಗಳ ಸಮಾವೇಶಗಳನ್ನು ನಡೆಸಿದೆ ಎಂದು ಡಿಕೆಶಿ ಹೇಳಿದ್ದಾರೆ.

ಇದನ್ನೂ ಓದಿ: Bengaluru: ಮಹಿಳೆಯರಿಗಾಗಿ ‌ಪ್ರತ್ಯೇಕ ಪ್ರಣಾಳಿಕೆ ಸಿದ್ಧಪಡಿಸಲು ಕಾಂಗ್ರೆಸ್ ನಿರ್ಧಾರ; ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಮಹಿಳಾ ಪ್ರಣಾಳಿಕೆಗೆ ಜನವರಿ 15ರವರೆಗೆ ಸಲಹೆಗಳನ್ನು ಆಹ್ವಾನಿಸಲಾಗಿದೆ. ಸಾರ್ವಜನಿಕರು congresswomenmanifesto@gmail.com ಅಥವಾ WhatsApp 7996551999ಗೆ ಮೆಸೇಜ್ ಮಾಡಬಹುದು. ಮಹಿಳಾ ಸಬಲೀಕರಣದ ಮೂಲಕ ದೇಶದ ಉನ್ನತಿ ಎಂದು ನಂಬಿರುವ ಕಾಂಗ್ರೆಸ್ ಪಕ್ಷ ಮುಂಬರುವ ಚುನಾವಣಾ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ವಿಶೇಷ ಆದ್ಯತೆ ನೀಡುತ್ತಿದೆ. ನಿಮ್ಮ ಸಲಹೆಗಳನ್ನು Congresswomenmanifesto@gmail.com, ಅಥವಾ ಈ ವಾಟ್ಸಾಪ್ ಸಂಖ್ಯೆ 7996551999ಗೆ ಕಳುಹಿಸಿ. ನಿಮ್ಮ ಸಲಹೆ ನಮ್ಮ ಬದ್ಧತೆಯಾಗಿದೆ ಎಂದು ಡಿಕೆ ಶಿವಕುಮಾರ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿಯವರ ಭೇಟಿ ಮಹತ್ವ ಪಡೆದುಕೊಂಡಿದೆ. ಅವರು ಈ ಹಿಂದೆ ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿರಲಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ