AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದುತ್ವಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ಒತ್ತಾಯ: ಇಂದು ಹಿಂದೂ ಜನಜಾಗೃತಿ ಸಮಿತಿ ಸಭೆ

ಹಿಂದುತ್ವ ಪರ ಹೋರಾಟಗಳಲ್ಲಿ ಭಾಗಿಯಾದವರ ಮೇಲೆ ಹೂಡಿರುವ ಎಲ್ಲ ಮೊಕದ್ದಮೆಗಳನ್ನು ಹಿಂಪಡೆಯಬೇಕು ಎಂದು ಸಂಘಟನೆಗಳು ಒತ್ತಾಯಿಸಿವೆ.

ಹಿಂದುತ್ವಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ಒತ್ತಾಯ: ಇಂದು ಹಿಂದೂ ಜನಜಾಗೃತಿ ಸಮಿತಿ ಸಭೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:May 08, 2022 | 10:08 AM

Share

ಬೆಂಗಳೂರು: ಮಸೀದಿಗಳಲ್ಲಿ ಆಜಾನ್ ಕೂಗಲು ಧ್ವನಿವರ್ಧಕ ಬಳಸುವ ವಿರುದ್ಧ ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಹಿಂದುತ್ವ ಪರ ಸಂಘಟನೆಗಳು ನಿರ್ಧರಿಸಿವೆ. ಮುಂಜಾನೆ 10.30ಕ್ಕೆ ರಾಜಾಜಿನಗರದಲ್ಲಿರುವ ಕೆಂಪೇಗೌಡ ಸಮುದಾಯ ಭವನದಲ್ಲಿ ಈ ಸಂಬಂಧ ಮಹತ್ವದ ಸಭೆ ನಡೆಯಲಿದೆ. ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿಗೆ ನೀಡಿದ್ದ ಗಡುವು ನಾಳೆಗೆ (ಮೇ 9) ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ ಮುಂದಿನ ಹೋರಾಟದ ರೂಪರೇಷೆಯನ್ನು ಸಭೆಯಲ್ಲಿ ನಿರ್ಧರಿಸಲು ಪ್ರಮುಖರು ನಿರ್ಧರಿಸಿದ್ದಾರೆ. ಹಿಂದೂ ಜನಜಾಗೃತಿ ಸಮಿತಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಹಿಂದೂ ಮಹಾಸಭಾ, ರಾಷ್ಟ್ರ ರಕ್ಷಣಾ ಪಡೆ ಮತ್ತು ಕೆಲ ಮಠಾಧೀಶರು ಭಾಗಿಯಾಗುವ ಸಾಧ್ಯತೆಯಿದೆ.

ಈ ಹಿಂದೆ ನಡೆದ ಹಿಜಾಬ್ ವಿರೋಧಿ ಹೋರಾಟ, ಹಲಾಲ್ ಬಾಯ್ಕಾಟ್ ಅಭಿಯಾನ ಮತ್ತು ಶಾಲೆಗಳಲ್ಲಿ ಭಗವದ್ಗೀತೆ ಭೋದನೆಗೆ ಆಗ್ರಹಿಸಿ ನಡೆದ ಹೋರಾಟಗಳಲ್ಲಿ ಭಾಗಿಯಾದವರ ಮೇಲೆ ಹೂಡಿರುವ ಎಲ್ಲ ಮೊಕದ್ದಮೆಗಳನ್ನು ಹಿಂಪಡೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರವನ್ನು ಒತ್ತಾಯಿಸಲು ನಾಳೆಯಿಂದ ಮನೆಮನೆ ರಾಮ ಭಜನೆ ಅಭಿಯಾನ ಆರಂಭಿಸಲಾಗುವುದು. ದೇವಾಲಯಗಳ ಮೇಲೆ ಲೌಡ್ ಸ್ಪೀಕರ್ ಅಳವಡಿಸಿ ಆಜಾನ್​​ ಕೂಗುವುದಕ್ಕೆ ಸೆಡ್ಡು ಹೊಡೆಯುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.

ಮಸೀದಿಗಳ ಬಳಿಯ ದೇಗುಲಗಳಲ್ಲಿ ಹನುಮಾನ್ ಚಾಲೀಸಾ

ಕಲಬುರಗಿ: ಮಸೀದಿಗಳಲ್ಲಿ ಸೌಡ್​ ಸ್ಪೀಕರ್ ಬಳಸಿ ಆಜಾನ್ ಕೂಗುವ ಪದ್ಧತಿಯನ್ನು ವಿರೋಧಿಸುತ್ತಿರುವ ಶ್ರೀರಾಮಸೇನೆಯು ಮೇ 9ರಿಂದ ಮಸೀದಿಗಳ ಸಮೀಪದ ದೇಗುಲಗಳಲ್ಲಿ ಹನುಮಾನ್ ಚಾಲೀಸ ಮತ್ತು ಭಜನೆಗಳನ್ನು ಲೌಡ್​ಸ್ಪೀಕರ್​ಗಳಲ್ಲಿ ಮೊಳಗಿಸುವುದಾಗಿ ಹೇಳಿದೆ. ಈ ಕುರಿತು ಮಾಹಿತಿ ನೀಡಿರುವ ಶ್ರೀರಾಮಸೇನೆ ರಾಜ್ಯ ಘಟಕದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಆಟೊ ನಿಲ್ದಾಣ ಬಳಿಯ ದೇವಸ್ಥಾನದಲ್ಲಿ ಹನುಮಾನ್ ಚಾಲೀಸಾ ಹಾಕಲಾಗುವುದು. ಮಧ್ಯಾಹ್ನ 12ರಿಂದ 2 ಗಂಟೆಯವರಗೆ ಭಜನೆ, ಹನುಮಾನ ಚಾಲಿಸಾ ಪಠಿಸಲಾಗುವುದು. ಮಸೀದಿ ಮೇಲಿನ ಧ್ವನಿವರ್ಧಕ ತೆರವುಗೊಳಿಸದೇ ಇರುವುದರಿಂದ ಜನರಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಏನಾದರೂ ಅನಾಹುತವಾದರೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಸಿದ್ದಲಿಂಗ ಸ್ವಾಮಿಜಿ ಎಚ್ಚರಿಕೆ ನೀಡಿದರು.

ಮಸೀದಿಗಳಲ್ಲಿ ಆಜಾನ್ ಮೊಳಗಿಸಲು ಲೌಡ್​ಸ್ಪೀಕರ್ ಬಳಸುವುದನ್ನು ವಿರೋಧಿಸುತ್ತಿರುವ ಶ್ರೀರಾಮಸೇನೆ, ಸುಪ್ರೀಂಕೋರ್ಟ್ ತೀರ್ಪು ಜಾರಿ ಮಾಡಲು ನೀಡಿದ್ದ ಗಡುವಿಗೆ ಇನ್ನೊಂದು ದಿನ ಮಾತ್ರ ಬಾಕಿಯಿದೆ. ನಾಳೆಯಿಂದ ರಾಜ್ಯದ ಬಹುತೇಕ ದೇವಸ್ಥಾನಗಳಲ್ಲಿ ರಾಮಮಂತ್ರ, ಹನುಮಾನ್ ಚಾಲೀಸದ ಜೊತೆಗೆ ವೇದಮಂತ್ರಗಳನ್ನು ಮೊಳಗಿಸಲು ಶ್ರೀರಾಮಸೇನೆ ಮತ್ತು ಇತರ ಹಿಂದುತ್ವಪರ ಸಂಘಟನೆಗಳು ಮುಂದಾಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಪೂರ್ವನಿಗದಿಯಂತೆ 9ರಿಂದ ದೇವಸ್ಥಾನಗಳಲ್ಲೂ ಲೌಡ್ ಸ್ಪೀಕರ್ ಅಳವಡಿಸಲು ಕಾರ್ಯಕರ್ತರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: Loud Speakers: ಮಸೀದಿಗಳ ಬಳಿಯ ದೇಗುಲಗಳಲ್ಲಿ ಹನುಮಾನ್ ಚಾಲೀಸಾ: ಮತ್ತೊಂದು ಮಜಲಿಗೆ ಆಜಾನ್ ವಿವಾದ

ಇದನ್ನೂ ಓದಿ: Raj Thackeray ನಾಳೆ ಧ್ವನಿವರ್ಧಕಗಳಲ್ಲಿ ಆಜಾನ್ ಕೂಗಿದರೆ ಮಸೀದಿಗಳ ಹೊರಗೆ ಹನುಮಾನ್ ಚಾಲೀಸಾ ನುಡಿಸಿ: ರಾಜ್ ಠಾಕ್ರೆ ಕರೆ

Published On - 10:06 am, Sun, 8 May 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ