AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕಿ ಸೌಮ್ಯ ರೆಡ್ಡಿ ವಿರುದ್ಧ ಪ್ರತಿಭಟನೆ ನಡೆಸಿದ ಕನ್ನಡ ಸಂಘಟನೆಗಳು

ಕನ್ನಡಪರ ಸಂಘಟನೆಗಳು ಒಂದುಗೂಡಿ ಜಯನಗರದ ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಅವರ ವಿರುದ್ಧ ಕಿಡಿಕಾರಿ ಪ್ರತಿಭಟನೆ ನಡೆಸಿದ ಘಟನೆ ಇಂದು ಜಯನಗರದಲ್ಲಿ ನಡೆದಿದೆ. ರಾಷ್ಟ್ರಕವಿ ಕುವೆಂಪು ಅವರು ರಚಿಸಿರುವ ನಾಡಗೀತೆಯ ಸಾಲುಗಳನ್ನು ತಿರುಚಿರುವುದಕ್ಕೆ ಸಂಘಟನೆಗಳ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೌಮ್ಯ ರೆಡ್ಡಿಯವರ ಬೆಂಬಲಿತ ಸಂಘಟನೆಯನ್ನು ಸಹ ಕನ್ನಡ-ಪರ ಹೋರಾಟಗಾರರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾರ್ಯಕ್ರಮ ನಡೆದಿದ್ದ ಸ್ಥಳದಲ್ಲಿ ಹಾಕಲಾಗಿದ್ದ ಬ್ಯಾನರ್​ಗಳನ್ನು ಹರಿದುಹಾಕಿದ ಪ್ರತಿಭಟನೆಕಾರರು, ಶಾಸಕಿಯ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ತಮ್ಮ ಅಸಾಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಸದರಿ ಸಂಘಟನೆ ಹಾಗೂ […]

ಶಾಸಕಿ ಸೌಮ್ಯ ರೆಡ್ಡಿ ವಿರುದ್ಧ ಪ್ರತಿಭಟನೆ ನಡೆಸಿದ ಕನ್ನಡ ಸಂಘಟನೆಗಳು
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 24, 2020 | 10:21 PM

Share

ಕನ್ನಡಪರ ಸಂಘಟನೆಗಳು ಒಂದುಗೂಡಿ ಜಯನಗರದ ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಅವರ ವಿರುದ್ಧ ಕಿಡಿಕಾರಿ ಪ್ರತಿಭಟನೆ ನಡೆಸಿದ ಘಟನೆ ಇಂದು ಜಯನಗರದಲ್ಲಿ ನಡೆದಿದೆ.

ರಾಷ್ಟ್ರಕವಿ ಕುವೆಂಪು ಅವರು ರಚಿಸಿರುವ ನಾಡಗೀತೆಯ ಸಾಲುಗಳನ್ನು ತಿರುಚಿರುವುದಕ್ಕೆ ಸಂಘಟನೆಗಳ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೌಮ್ಯ ರೆಡ್ಡಿಯವರ ಬೆಂಬಲಿತ ಸಂಘಟನೆಯನ್ನು ಸಹ ಕನ್ನಡ-ಪರ ಹೋರಾಟಗಾರರು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾರ್ಯಕ್ರಮ ನಡೆದಿದ್ದ ಸ್ಥಳದಲ್ಲಿ ಹಾಕಲಾಗಿದ್ದ ಬ್ಯಾನರ್​ಗಳನ್ನು ಹರಿದುಹಾಕಿದ ಪ್ರತಿಭಟನೆಕಾರರು, ಶಾಸಕಿಯ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ತಮ್ಮ ಅಸಾಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಸದರಿ ಸಂಘಟನೆ ಹಾಗೂ ಶಾಸಕಿ ಸೌಮ್ಯ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸುವಂತೆ ಅವರು ಆಗ್ರಹಿಸಿದ್ದಾರೆ.

‘ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯ ಶಿವ’ ಇರಬೇಕಾದ ಸಾಲಿನಲ್ಲಿ, ‘ಓ ಕರ್ನಾಟಕ ಹೃದಯ ಏಸು’ ಎಂಬ ಪದಬಳಕೆಯನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಪ್ರತಿಭಟನೆ ನಡೆಸಿದವು.