ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ: ತನಿಖೆಗಾಗಿ ಮೂರು ವಿಶೇಷ ತಂಡಗಳ ರಚನೆ

ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಸತ್ಯಾಂಶ ತಿಳಿಯುವುದಕ್ಕಾಗಿ ಇವುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲು ನಿರ್ಧರಿಸಲಾಗಿದೆ. ಪ್ರಕರಣದ ತನಿಖೆಗಾಗಿ ಮೂರು ವಿಶೇಷತಂಡಗಳನ್ನು ರಚಿಸಲಾಗಿದೆ. ಕಾನೂನು, ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಗೃಹ ಸಚಿವರ ನಿವಾಸಕ್ಕೆ ತೆರಳಿ ಘಟನೆ ಸಂಬಂಧ ಮಾಹಿತಿ ನೀಡಿದ್ದಾರೆ.

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ: ತನಿಖೆಗಾಗಿ ಮೂರು ವಿಶೇಷ ತಂಡಗಳ ರಚನೆ
ಗೃಹ ಸಚಿವ ಪರಮೇಶ್ವರ್ ನಿವಾಸಕ್ಕೆ ಕಾನೂನು, ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ
Follow us
Jagadisha B
| Updated By: Ganapathi Sharma

Updated on: Feb 28, 2024 | 8:33 AM

ಬೆಂಗಳೂರು, ಫೆಬ್ರವರಿ 28: ರಾಜ್ಯಸಭೆ ಚುನಾವಣೆಯ ಫಲಿತಾಂಶದ ನಂತರ ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಬೆಂಗಳೂರು (Bengaluru) ಕೇಂದ್ರ ವಿಭಾಗದ ಡಿಸಿಪಿ ಶೇಖರ್ ತಿಳಿಸಿದ್ದಾರೆ. ಮಂಗಳವಾರ ತಡರಾತ್ರಿವರೆಗೂ ಠಾಣೆಯಲ್ಲೇ ಉಳಿದುಕೊಂಡಿದ್ದ ಅವರು ಪೊಲೀಸ್ (Bengaluru Police) ಸಿಬ್ಬಂದಿಯ ಜೊತೆ ಚರ್ಚೆ ನಡೆಸಿ ಮಾಹಿತಿ ಕಲೆ ಹಾಕಿದ್ದರು. ಪ್ರಕರಣದ ಮುಂದಿನ ಆಯಾಮ ಹಾಗೂ ತನಿಖೆಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಿದ್ದರು.

ವಿಜೇತ ಅಭ್ಯರ್ಥಿ ನಾಸಿರ್ ಹುಸೇನ್ ಜೊತೆ ಬಂದವರ ಪಟ್ಟಿ ಸಂಗ್ರಹಿಸಲಾಗಿದ್ದು, ಟೆಕ್ನಿಕಲ್ ಅನಾಲಿಸಿಸ್ ಹಾಗೂ ವಿಡಿಯೋಗಳನ್ನು ಪರಿಗಣಿಸುವ ಕಾರ್ಯ ಮಾಡಲಾಗುತ್ತಿದೆ. ಸದ್ಯ ವಿಧಾನಸೌಧ ಪೊಲೀಸರು ಘೋಷಣೆ ಕೂಗಿದಾತನ ಶೋಧ ನಡೆಸುತ್ತಿದ್ದಾರೆ.

ಘೋಷಣೆ ಕೂಗಿದ ಸಂದರ್ಭದಲ್ಲಿ ನಾಸೀರ್ ಹುಸೇನ್ ಬಳಿ ಇದ್ದ ವ್ಯಕ್ತಿಗಳನ್ನು ಕರೆಸಿ ಇಂದು (ಬುಧವಾರ) ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಈ ಮಧ್ಯೆ, ಪ್ರಕರಣಕ್ಕೆ ಸಂಬಂಧಿಸಿ ಗೃಹ ಸಚಿವ ಪರಮೇಶ್ವರ್ ಅವರಿಗೆ ಮಾಹಿತಿ ನೀಡಲು ಕಾನೂನು, ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಮುಂದಾಗಿದ್ದಾರೆ. ಬುಧವಾರ ಬೆಳಗ್ಗೆ ಅವರು ಗೃಹ ಸಚಿವರ ನಿವಾಸಕ್ಕೆ ತೆರಳಿದ್ದಾರೆ. ಸದಾಶಿವನಗರದಲ್ಲಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿವಾಸಕ್ಕೆ ತೆರಳಿರುವ ಹಿತೇಂದ್ರ, ಮಂಗಳವಾರದ ಘಟನೆ, ಪ್ರಕರಣದ ಬೆಳವಣಿಗೆ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರಿಂದ ವಿಡಿಯೋ ಸಂಗ್ರಹ

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಆರೋಪಕ್ಕೆ ಸಂಬಂಧಿಸಿ ವಿಧಾನಸೌಧದಲ್ಲಿನ ವಿಡಿಯೋ ತುಣುಕುಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ವಾಸ್ತವಾಂಶ ತಿಳಿಯುವುದಕ್ಕಾಗಿ ಅವುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲು ತಯಾರಿ ಮಾಡಲಾಗುತ್ತಿದೆ.

ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆ

ಪಾಕಿಸ್ತಾನವರ ಘೋಷಣೆ ಖಂಡಿಸಿ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಮಂಗಳವಾರ ರಾತ್ರಿ ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ, ಅಪರಿಚಿತ ವ್ಯಕ್ತಿ ವಿರುದ್ಧ ಎಫ್​ಐಆರ್ ದಾಖಲು

ಮತ್ತೊಂದೆಡೆ, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಸಿರ್ ಹುಸೇನ್ ಸ್ಪಷ್ಟನೆ ನೀಡಿದ್ದಾರೆ. ವಿಜಯೋತ್ಸವದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ನನಗೆ ಕೇಳಿಸಿಲ್ಲ. ಒಂದು ವೇಳೆ ಯಾರಾದರೂ ಆ ರೀತಿ ಘೋಷಣೆ ಕೂಗಿದ್ದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್