ಕಿದ್ವಾಯಿ ಆಸ್ಪತ್ರೆಯಲ್ಲಿ ಒಂದಲ್ಲಾ ಎರಡಲ್ಲಾ ಸಮಸ್ಯೆ: ಅಧಿಕಾರಿಗಳ‌ ನಿರ್ಲಕ್ಷಕ್ಕೆ ಅಸುನೀಗುತ್ತಿವೆ ಬಡ ಜೀವಗಳು

ಕಿದ್ವಾಯಿ ಆಸ್ಪತ್ರೆಯಲ್ಲಿ ಸಮಸ್ಯೆಗಳ ಸರಮಾಲೆ ಎದ್ದು ಕಾಣುತ್ತಿದ್ದು, ಅಧಿಕಾರಿಗಳ‌ ನಿರ್ಲಕ್ಷಕ್ಕೆ ಬಡ ಜೀವಗಳು ಅಸುನೀಗುತ್ತಿದ್ದರು, ಹೇಳುವವರಿಲ್ಲ, ಕೇಳುವವರಿಲ್ಲದಂತಾಗಿದೆ.

Follow us
ಗಂಗಾಧರ​ ಬ. ಸಾಬೋಜಿ
|

Updated on: May 29, 2023 | 10:39 PM

ಬೆಂಗಳೂರು: ಕಿದ್ವಾಯಿ ಆಸ್ಪತ್ರೆ (Kidwai Hospital) ಯಲ್ಲಿ ಸಮಸ್ಯೆಗಳ ಸರಮಾಲೆ ಎದ್ದು ಕಾಣುತ್ತಿದ್ದು, ಅಧಿಕಾರಿಗಳ‌ ನಿರ್ಲಕ್ಷಕ್ಕೆ ಬಡ ಜೀವಗಳು ಅಸುನೀಗುತ್ತಿವೆ. ಆಸ್ಪತ್ರೆಗೆ ಬರುವ ಜನರಿಗೆ ಸರಿಯಾದ ವ್ಯವಸ್ಥೆ ಇಲ್ಲ. ರಾತ್ರಿ ವೇಳೆ ಐಸಿಯು ನಲ್ಲಿ ಡಾಕ್ಟರ್ಸ್ ಇರಲ್ವಂತೆ. ಆಸ್ಪತ್ರೆಯ ನಿರ್ಲಕ್ಷದಿಂದಾಗಿ ವಾರಕ್ಕೆ ಎರಡರಿಂದ ಮೂರು ಸಾವು ಸಂಭವಿಸುತ್ತಿವೆ. ಈ ಕುರಿತಾಗಿ ವೈದ್ಯರನ್ನು ಪ್ರಶ್ನಿಸಿದ್ರೆ ಸರಿಯಾಗಿ ಉತ್ತರಿಸುತ್ತಿಲ್ಲ. ಇತ್ತೀಚಿಗೆ ಕಿದ್ವಾಯಿ ಆಸ್ಪತ್ರೆಗೆ ಬರುವರು ಬದುಕ್ತಾರೆ ಎನ್ನುವ ಗ್ಯಾರಂಟಿಯೇ ಹೋಗಿದೆ. ರೋಗಿ ಜೊತೆ ಬರುವ ಸಂಬಂಧಿಕರಿಗೆ ಉಳಿದುಕೊಳ್ಳುವುದಕ್ಕೆ ಜಾಗವೇ ಇಲ್ಲ.

ಎಲ್ಲರೂ ಆಸ್ಪತ್ರೆ ರೋಡ್ ಅಕ್ಕಪಕ್ಕದಲ್ಲಿ ಮಲಗುತ್ತಿದ್ದೇವೆ. ಆಸ್ಪತ್ರೆಯಲ್ಲಿ ಮೆಡಿಸನ್ ಸಹ ಸಿಗುತ್ತಿಲ್ಲ. ಪ್ರತಿ ಮೆಡಿಸನ್​ಗೆ ಹೊರಗೆ ಬರೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಸರಿಯಾಗಿ ಸಿಬ್ಬಂದಿಗಳು ಇಲ್ಲ ಅಂತ ಆಸ್ಪತ್ರೆಯ ಆಡಳಿತ ವೈಕರಿಯ ಬಗ್ಗೆ ಜನರಿಂದ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: Kidwai Hospital: ಬೆಂಗಳೂರು ಕಿದ್ವಾಯಿ ಅಸ್ಪತ್ರೆಯಲ್ಲಿ ಹಲವಾರು ಸಮಸ್ಯೆಗಳು, ಆರೋಗ್ಯ ಸಚಿವರು ಬಿಡುವಿಲ್ಲದೆ ಕೆಲಸ ಮಾಡಬೇಕಿದೆ!

ಜನರ ಜೀವದ ಜೊತೆ ಚೆಲ್ಲಾಟ

ಜನರ ಜೀವದ ಜೊತೆ ಚೆಲ್ಲಾಟ ಆಡುತ್ತಿರುವ ಆಸ್ಪತ್ರೆ ಆಡಳಿತ ಮಂಡಳಿ ಸಣ್ಣ ಪುಟ್ಟ ಸ್ಕಾನಿಂಗ್​ಗಳಿಗೂ ದುಬಾರಿ ಹಣ ಪಡೆದುಕೊಳ್ಳಲಾಗುತ್ತಿದೆ. ಹೆಸರಿಗೆ ಮಾತ್ರ ರಕ್ತ ನಿಧಿ, ಆದರೆ ಬ್ಲಡ್ ಬೇಕು ಅಂದ್ರೆ ಹೊರಗೆ ಹೋಗಿ ತೆಗೆದುಕೊಳ್ಳಬೇಕು. ಅಲ್ಲದೇ ಈ ಹಿಂದೆ ಪೆಟ್ ಸ್ಕಾನಿಂಗ್​ಗೆ 7200 ರೂಪಾಯಿ ನಿಗದಿ ಮಾಡಲಾಗಿತ್ತು. ಆದ್ರೀಗ 9 ಸಾವಿರ ರೂ. ಹೆಚ್ಚಳ ಮಾಡಲಾಗಿದೆ. ಯಾಕೆ ಅಂತ ಕೇಳಿದ್ರೆ ಸಿಬ್ಬಂದಿಗಳು ಕುಂಟು ನೆಪ ಹೇಳುತ್ತಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯಗೆ ಜೀವಬೆದರಿಕೆ ಆರೋಪ: FIR ರದ್ದು ಕೋರಿ ಹೈಕೋರ್ಟ್‌ ಮೊರೆ ಹೋದ ಅಶ್ವತ್ಥ್‌ ನಾರಾಯಣ

ಎಲ್ಲವೂ ಕೆಟ್ಟದಾಗಿದೆ ಅಂತೇನೂ ಜನರು ಹೇಳುತ್ತಿಲ್ಲ. ಆದರೆ, ಏನೇನೆಲ್ಲ ಸುಧಾರಣೆ ಅಗಬೇಕು ಅನ್ನೋದನ್ನು ಬಹಳ ಚೆನ್ನಾಗಿ ಹೇಳಲಾಗುತ್ತಿದೆ. ಸಂಬಂಧಪಟ್ಟವರು, ಎಲ್ಲಕ್ಕಿಂತ ಮುಖ್ಯವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡಲೇ ಇತ್ತ ಗಮ ಹರಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ