AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್​ಕುಮಾರ್​ಗೆ ನಿರ್ಮಾಪಕರ ಸಾಥ್; ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ

ದೊಡ್ಮನೆ ಕುಟುಂಬದ ಸೊಸೆಯ ಬೆಂಬಲಕ್ಕೆ ನಿಂತ ನಿರ್ಮಾಪಕರ ಸಂಘ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್​ಕುಮಾರ್​ಗೆ ನಿರ್ಮಾಪಕರು ಸಾಥ್ ನೀಡಿದ್ದು ಮಧ್ಯಾಹ್ನ 3 ಗಂಟೆಗೆ ನಟ ಶಿವರಾಜ್​ಕುಮಾರ್​ ನಿವಾಸದಲ್ಲಿ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿದೆ. ಮಾ.20ರಂದು ಶಿವಮೊಗ್ಗಕ್ಕೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಆಗಮಿಸಲಿದ್ದು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 400 ಸಭೆ ಮಾಡಲು ಗೀತಾ ಪ್ಲ್ಯಾನ್ ಮಾಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್​ಕುಮಾರ್​ಗೆ ನಿರ್ಮಾಪಕರ ಸಾಥ್; ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ
ಗೀತಾ ಶಿವರಾಜ್​ಕುಮಾರ್​
Mangala RR
| Edited By: |

Updated on: Mar 18, 2024 | 9:50 AM

Share

ಬೆಂಗಳೂರು, ಮಾರ್ಚ್.18: ಹ್ಯಾಟ್ರಿಕ್ ಹೀರೋ ಶಿವ ರಾಜ್​ಕುಮಾರ್ ಅವರ ಪತ್ನಿ ಗೀತಾ ಶಿವ ರಾಜ್​ಕುಮಾರ್ (Geeta Shivarajkumar) ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿದ್ದಾರೆ (Lok Sabha Election). ಸದ್ಯ ದೊಡ್ಮನೆ ಕುಟುಂಬದ ಸೊಸೆಗೆ ನಿರ್ಮಾಪಕರ ಸಂಘ ಬೆಂಬಲ ಸೂಚಿಸಿದ್ದು ಗೀತಾ ಅವರ ಬಲ ದುಪ್ಪಂಟಾದಂತಿದೆ. ಈ ಸಂಬಂಧ ಮಧ್ಯಾಹ್ನ 3 ಗಂಟೆಗೆ ನಟ ಶಿವರಾಜ್​ಕುಮಾರ್​ ನಿವಾಸದಲ್ಲಿ ಸುದ್ದಿಗೋಷ್ಠಿ ಕರೆಯಲಾಗಿದೆ.

ಬೆಂಗಳೂರಿನ ನಾಗವಾರದಲ್ಲಿರುವ ನಟ ಶಿವರಾಜ್​ಕುಮಾರ್​ ನಿವಾಸದಲ್ಲಿ ಇಂದು ಸುದ್ದಿಗೋಷ್ಠಿ ನಡೆಯಲಿದೆ. ಗೀತಾರನ್ನು ಒಮ್ಮೆ ಸಂಸದೆ ಆಗಿ ನೋಡಬೇಕು ಎಂದು ನಟ ಶಿವಣ್ಣ ಆಸೆ ವ್ಯಕ್ತಪಡಿಸಿದ್ದರು. ಸದ್ಯ ನಟ ಶಿವರಾಜ್​ಕುಮಾರ್ ಪತ್ನಿ ಗೀತಾ ಪರ ಪ್ರಚಾರಕ್ಕೆ ಸಿದ್ಧವಾಗ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೋಬಳಿಮಟ್ಟದಲ್ಲಿ ಪ್ರಚಾರ ನಡೆಸಲಿದ್ದಾರೆ. ತಾಲೂಕು ಮಟ್ಟದ ಸಭೆಗಳಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ. ಮಾ.20ರಂದು ಶಿವಮೊಗ್ಗಕ್ಕೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಆಗಮಿಸಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 400 ಸಭೆ ಮಾಡಲು ಪ್ಲ್ಯಾನ್ ಮಾಡಿದ್ದಾರೆ.

ಇದನ್ನೂ ಓದಿ: ನಮ್ಮ ಹೋರಾಟ ಕೇವಲ ಶಿವಮೊಗ್ಗ ಕ್ಷೇತ್ರಕ್ಕೆ ಸೀಮಿತ: ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್

ಇನ್ನು ಶಿವಮೊಗ್ಗ ಲೋಕಸಭೆ ಚುನಾವಣೆ ಕಾವು ಏರುತ್ತಿದೆ. ಶಿವಮೊಗ್ಗದಲ್ಲಿ ಕಮಲ ಒಡೆದ ಮನೆಯಾಗಿದೆ. ಬಿಎಸ್ ಯಡಿಯೂರಪ್ಪ ಮತ್ತು ಕೆ.ಎಸ್​. ಈಶ್ವರಪ್ಪ ಇಬ್ಬರ ನಡುವೆ ಜಂಗೀ ಕುಸ್ತಿ ಶುರುವಾಗಿದೆ. ಬಿಎಸ್ ವೈ ಪುತ್ರನನ್ನು ಸೋಲಿಸಲು ಈಶ್ವರಪ್ಪ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಧುಮುಕಿದ್ದಾರೆ. ಕೆ.ಎಸ್. ಈಶ್ವರಪ್ಪ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಿದ್ದು ಬಿ.ವೈ. ವಿಜಯೇಂದ್ರನಿಗೆ ಇದರ ಬಿಸಿ ತಟ್ಟಲಿದೆ. ಈ ವಿಚಾರ ಗೀತಾ ಶಿವರಾಜ್​ಕುಮಾರ್ ಅವರಿಗೆ ಪ್ಲೆಸ್ ಆಗಲಿದೆ.

ಈಶ್ವರಪ್ಪ ಪುತ್ರ ಕಾಂತೇಶ್ ಗೆ ಹಾವೇರಿ ಟಿಕೆಟ್ ಕೈತಪ್ಪಿಸಿದ್ದು ಯಡಿಯೂರಪ್ಪರಿಂದ. ಅವರಿಗೆ ತಮ್ಮ ಕುಟುಂಬದ ಮೇಲೆ ಮಾತ್ರ ವ್ಯಾಮೋಹ. ಮತ್ತೊಬ್ಬರ ಮಕ್ಕಳು ರಾಜಕೀಯವಾಗಿ ಬೆಳೆಯಬಾರದು. ಬಿಜೆಪಿಯು ಒಂದೇ ಕುಟುಂಬದ ಕೈಯಲ್ಲಿ ಸಿಕ್ಕು ಒದ್ದಾಡುತ್ತಿದೆ. ರಾಜ್ಯದ ಕಾರ್ಯಕರ್ತರು ಈ ವ್ಯವಸ್ಥೆ ನೋಡಿ ನೊಂದುಕೊಂಡಿದ್ದಾರೆ. ಈ ನಡುವೆ ಹಿಂದುತ್ವದ ಹಿನ್ನಲೆ ಇರುವ ಕಟೀಲು, ಪ್ರತಾಪ್ ಸಿಂಹ, ಸದಾನಂದ ಗೌಡ, ಸಿಟಿ ರವಿ ಇವರಿಗೆ ಟಿಕೆಟ್ ಕೊಟ್ಟಿಲ್ಲ. ಕೇವಲ ಬಿಎಸ್ ವೈ ಶೋಭಾಗೆ ಮತ್ತು ಬಸವರಾಜ್ ಬೊಮ್ಮಾಯಿಗೆ ಮಾತ್ರ ಹಠ ಹಿಡಿದು ಟಿಕೆಟ್ ಕೊಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಕ್ಷ ಉಳಿಸಲು ಮತ್ತು ಕುಟುಂಬ ರಾಜಕೀಯಕ್ಕೆ ಪಾಠ ಕಲಿಸಲು ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಸ್ಪರ್ಧೆಗೆ ಧುಮುಕಿರುವುದಾಗಿ ಈಶ್ವರಪ್ಪ ಅವರು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ