ಬೆಂಗಳೂರು, ಮಾರ್ಚ್.18: ಹ್ಯಾಟ್ರಿಕ್ ಹೀರೋ ಶಿವ ರಾಜ್ಕುಮಾರ್ ಅವರ ಪತ್ನಿ ಗೀತಾ ಶಿವ ರಾಜ್ಕುಮಾರ್ (Geeta Shivarajkumar) ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿದ್ದಾರೆ (Lok Sabha Election). ಸದ್ಯ ದೊಡ್ಮನೆ ಕುಟುಂಬದ ಸೊಸೆಗೆ ನಿರ್ಮಾಪಕರ ಸಂಘ ಬೆಂಬಲ ಸೂಚಿಸಿದ್ದು ಗೀತಾ ಅವರ ಬಲ ದುಪ್ಪಂಟಾದಂತಿದೆ. ಈ ಸಂಬಂಧ ಮಧ್ಯಾಹ್ನ 3 ಗಂಟೆಗೆ ನಟ ಶಿವರಾಜ್ಕುಮಾರ್ ನಿವಾಸದಲ್ಲಿ ಸುದ್ದಿಗೋಷ್ಠಿ ಕರೆಯಲಾಗಿದೆ.
ಬೆಂಗಳೂರಿನ ನಾಗವಾರದಲ್ಲಿರುವ ನಟ ಶಿವರಾಜ್ಕುಮಾರ್ ನಿವಾಸದಲ್ಲಿ ಇಂದು ಸುದ್ದಿಗೋಷ್ಠಿ ನಡೆಯಲಿದೆ. ಗೀತಾರನ್ನು ಒಮ್ಮೆ ಸಂಸದೆ ಆಗಿ ನೋಡಬೇಕು ಎಂದು ನಟ ಶಿವಣ್ಣ ಆಸೆ ವ್ಯಕ್ತಪಡಿಸಿದ್ದರು. ಸದ್ಯ ನಟ ಶಿವರಾಜ್ಕುಮಾರ್ ಪತ್ನಿ ಗೀತಾ ಪರ ಪ್ರಚಾರಕ್ಕೆ ಸಿದ್ಧವಾಗ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೋಬಳಿಮಟ್ಟದಲ್ಲಿ ಪ್ರಚಾರ ನಡೆಸಲಿದ್ದಾರೆ. ತಾಲೂಕು ಮಟ್ಟದ ಸಭೆಗಳಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ. ಮಾ.20ರಂದು ಶಿವಮೊಗ್ಗಕ್ಕೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಆಗಮಿಸಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 400 ಸಭೆ ಮಾಡಲು ಪ್ಲ್ಯಾನ್ ಮಾಡಿದ್ದಾರೆ.
ಇದನ್ನೂ ಓದಿ: ನಮ್ಮ ಹೋರಾಟ ಕೇವಲ ಶಿವಮೊಗ್ಗ ಕ್ಷೇತ್ರಕ್ಕೆ ಸೀಮಿತ: ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್
ಇನ್ನು ಶಿವಮೊಗ್ಗ ಲೋಕಸಭೆ ಚುನಾವಣೆ ಕಾವು ಏರುತ್ತಿದೆ. ಶಿವಮೊಗ್ಗದಲ್ಲಿ ಕಮಲ ಒಡೆದ ಮನೆಯಾಗಿದೆ. ಬಿಎಸ್ ಯಡಿಯೂರಪ್ಪ ಮತ್ತು ಕೆ.ಎಸ್. ಈಶ್ವರಪ್ಪ ಇಬ್ಬರ ನಡುವೆ ಜಂಗೀ ಕುಸ್ತಿ ಶುರುವಾಗಿದೆ. ಬಿಎಸ್ ವೈ ಪುತ್ರನನ್ನು ಸೋಲಿಸಲು ಈಶ್ವರಪ್ಪ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಧುಮುಕಿದ್ದಾರೆ. ಕೆ.ಎಸ್. ಈಶ್ವರಪ್ಪ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಿದ್ದು ಬಿ.ವೈ. ವಿಜಯೇಂದ್ರನಿಗೆ ಇದರ ಬಿಸಿ ತಟ್ಟಲಿದೆ. ಈ ವಿಚಾರ ಗೀತಾ ಶಿವರಾಜ್ಕುಮಾರ್ ಅವರಿಗೆ ಪ್ಲೆಸ್ ಆಗಲಿದೆ.
ಈಶ್ವರಪ್ಪ ಪುತ್ರ ಕಾಂತೇಶ್ ಗೆ ಹಾವೇರಿ ಟಿಕೆಟ್ ಕೈತಪ್ಪಿಸಿದ್ದು ಯಡಿಯೂರಪ್ಪರಿಂದ. ಅವರಿಗೆ ತಮ್ಮ ಕುಟುಂಬದ ಮೇಲೆ ಮಾತ್ರ ವ್ಯಾಮೋಹ. ಮತ್ತೊಬ್ಬರ ಮಕ್ಕಳು ರಾಜಕೀಯವಾಗಿ ಬೆಳೆಯಬಾರದು. ಬಿಜೆಪಿಯು ಒಂದೇ ಕುಟುಂಬದ ಕೈಯಲ್ಲಿ ಸಿಕ್ಕು ಒದ್ದಾಡುತ್ತಿದೆ. ರಾಜ್ಯದ ಕಾರ್ಯಕರ್ತರು ಈ ವ್ಯವಸ್ಥೆ ನೋಡಿ ನೊಂದುಕೊಂಡಿದ್ದಾರೆ. ಈ ನಡುವೆ ಹಿಂದುತ್ವದ ಹಿನ್ನಲೆ ಇರುವ ಕಟೀಲು, ಪ್ರತಾಪ್ ಸಿಂಹ, ಸದಾನಂದ ಗೌಡ, ಸಿಟಿ ರವಿ ಇವರಿಗೆ ಟಿಕೆಟ್ ಕೊಟ್ಟಿಲ್ಲ. ಕೇವಲ ಬಿಎಸ್ ವೈ ಶೋಭಾಗೆ ಮತ್ತು ಬಸವರಾಜ್ ಬೊಮ್ಮಾಯಿಗೆ ಮಾತ್ರ ಹಠ ಹಿಡಿದು ಟಿಕೆಟ್ ಕೊಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಕ್ಷ ಉಳಿಸಲು ಮತ್ತು ಕುಟುಂಬ ರಾಜಕೀಯಕ್ಕೆ ಪಾಠ ಕಲಿಸಲು ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಸ್ಪರ್ಧೆಗೆ ಧುಮುಕಿರುವುದಾಗಿ ಈಶ್ವರಪ್ಪ ಅವರು ತಿಳಿಸಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ