ಎರಡನೇ ಅಧಿಕೃತ ಭಾಷೆಯಾಗಿ ತುಳು ಘೋಷಣೆಗೆ ಅಧಿವೇಶನದಲ್ಲಿ ಪ್ರಸ್ತಾಪ; ಪರಿಶೀಲಿಸುವುದಾಗಿ ಹೇಳಿದ ಸಚಿವ ತಂಗಡಗಿ

ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸುವಂತೆ ಒತ್ತಾಯ ಮಾಡಲಾಗುತ್ತಿದೆ. ಇದೀಗ, ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವಂತೆ ಕರ್ನಾಟಕ ಸರ್ಕಾರವನ್ನು ಪುತ್ತೂರು ಶಾಸಕ ಅಶೋಕ್ ರೈ ಅವರನ್ನು ಒತ್ತಾಯಿಸಿದ್ದಾರೆ.

ಎರಡನೇ ಅಧಿಕೃತ ಭಾಷೆಯಾಗಿ ತುಳು ಘೋಷಣೆಗೆ ಅಧಿವೇಶನದಲ್ಲಿ ಪ್ರಸ್ತಾಪ; ಪರಿಶೀಲಿಸುವುದಾಗಿ ಹೇಳಿದ ಸಚಿವ ತಂಗಡಗಿ
ತುಳು ಭಾಷಣೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವಂತೆ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಿದ ಶಾಸಕ ಅಶೋಕ್ ರೈ
Follow us
ಕಿರಣ್​ ಹನಿಯಡ್ಕ
| Updated By: Rakesh Nayak Manchi

Updated on: Jul 18, 2023 | 8:55 PM

ವಿಧಾನಸಭೆ: ತುಳು ಭಾಷೆಯನ್ನು (Tulu Language) ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವಂತೆ ಅಧಿವೇಶನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಅಶೋಕ್ ರೈ (Ashok Rai) ಮನವಿ ಮಾಡಿದರು. ಇದನ್ನು ತುಳು ಭಾಷೆಯಲ್ಲೇ ಪ್ರಸ್ತಾಪಿಸುತ್ತಲೇ ಸರ್ಕಾರದ ಗಮನ ಸೆಳೆದರು. ಇದಕ್ಕೆ ಸ್ಪೀಕರ್ ಯುಟಿ ಖಾದರ್ (UT Khader) ಅವರು ತುಳು ಭಾಷೆಯಲ್ಲೇ ಪ್ರತಿಕ್ರಿಯೆ ನೀಡಿದರು.

ಈ ವೇಳೆ ಜಿಲ್ಲೆಯ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಅವರು, ತುಳುವಿನಲ್ಲೇ ಮಾತಾಡಲು ಮುಂದಾದಾಗ ಕನ್ನಡದಲ್ಲೇ ಮಾತನಾಡಿ ಎಂದು ಸ್ಪೀಕರ್ ಸೂಚಿಸಿದರು. ಬಳಿಕ ಅವರು ಕನ್ನಡ ಮತ್ತು ತುಳುವಿನಲ್ಲಿ ಮಾತನಾಡಿದರು. ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಸದಸ್ಯ ಬಸವರಾಜ ರಾಯರೆಡ್ಡಿ, ತುಳು ಭಾಷೆ ಮಾತನಾಡುವುದಕ್ಕೆ ನಮ್ಮ ವಿರೋಧ ಇಲ್ಲ. ಆದರೆ ಬರೆದುಕೊಳ್ಳುವವರಿಗೆ ಸಮಸ್ಯೆ ಆಗುತ್ತದೆ ಎಂದರು.

ಇದನ್ನೂ ಓದಿ: ಸರ್ಕಾರಕ್ಕೆ ಖುಷಿಯಾಗುವ ವಿಷಯ ಮಾತಾಡಿ ಮಾರಾಯಾ: ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್​ಗೆ ಸ್ಪೀಕರ್ ಖಾದರ್ ಸೂಚನೆ

ಈ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಅರ್ಥ ಆಗದೇ ಉತ್ತರ ಕೊಡುವುದು ಹೇಗೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ಖಾದರ್, ತುಳು ಮಾತನಾಡಿದಾಗ ಎಲ್ಲರೂ ಖುಷಿ ಖುಷಿಯಿಂದ ಇದ್ದರು. ತುಳು ಮಾತಾಡುವವರು ಎಲ್ಲರನ್ನೂ ಖುಷಿಯಾಗಿರಿಸುತ್ತಾರೆ. ನೀವು ಕೂಡ ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಿ ಎಂದು ಸಲಹೆ ನೀಡಿದರು.

ನೀವು ಕಾನೂನು ಇಲಾಖೆ, ಎಲ್ಲಾ ಇಲಾಖೆಗಳ ವರದಿಗಳನ್ನು ತರಿಸಿಕೊಂಡು ತುಳು ಭಾಷೆಯನ್ನು ಎರಡನೇ ಅಧಿಕೃತ ರಾಜ್ಯಭಾಷೆಯನ್ನಾಗಿ ಮಾಡಿ‌ ಎಂದು ಸ್ಪೀಕರ್ ಸೂಚಿಸಿದರು. ಸ್ಪೀಕರ್ ಸಲಹೆಯನ್ನು ಪರಿಗಣಿಸಿದ ಸಚಿವ ತಂಗಡಗಿ, ವರದಿ ಪಡೆದು ಪರಿಶೀಲನೆ ಮಾಡುವುದಾಗಿ ಭರವಸೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?