AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಪ್ರತಿಭಟನೆ

ಕೇಂದ್ರ ಸರ್ಕಾರ ಬ್ಯಾಂಕ್ ಖಾಸಗೀಕರಣದ ತೀರ್ಮಾನ ನಿಲ್ಲಿಸಬೇಕೆಂದು ಆಗ್ರಹಿಸಿ ಎರಡು ದಿನದ ಮುಷ್ಕರಕ್ಕೆ ಬ್ಯಾಂಕ್‌ ಯೂನಿಯನ್​ಗಳ ಸಂಯುಕ್ತ ವೇದಿಕೆ ಕರೆಕೊಟ್ಟಿದ್ದು, ಬೆಂಗಳೂರು, ಧಾರವಾಡ, ಹಾಸನ ಮತ್ತು ಮೈಸೂರಿನಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಪ್ರತಿಭಟನೆ
ಹಾಸನದಲ್ಲಿ ಬ್ಯಾಂಕ್​ ನೌಕರರ ಪ್ರತಿಭಟನೆ
preethi shettigar
|

Updated on: Mar 15, 2021 | 12:23 PM

Share

ಬೆಂಗಳೂರು: ಕೇಂದ್ರ ಸರ್ಕಾರ ಈ ಬಾರಿ ಬಜೆಟ್​ನಲ್ಲಿ 2 ಬ್ಯಾಂಕ್ ಖಾಸಗೀಕರಣ ಮಾಡುವುದಾಗಿ ಹೇಳಿತ್ತು. ಬಳಿಕ 4 ಬ್ಯಾಂಕ್​ಗಳನ್ನು ಖಾಸಗೀಕರಣಕ್ಕೆ ಒಳಪಡಿಸಲು ಕೇಂದ್ರ ಯತ್ನಿಸಿದೆ. ಇದರಿಂದ ಸಾರ್ವಜನಿಕರ ಹಣ ಖಾಸಗಿಯವರ ಕೈ ಸೇರಲಿದೆ. ಜನರ ಹಣಕ್ಕೆ (ಠೇವಣಿಗೆ) ಯಾವುದೇ ಭದ್ರತೆ ಇರುವುದಿಲ್ಲ. ಈಗಾಗಲೇ ಹಲವು ಖಾಸಗಿ ಬ್ಯಾಂಕ್​ಗಳು ಅಕ್ರಮ ಎಸಗಿವೆ ಎಂದು ಬ್ಯಾಂಕ್‌ ಯೂನಿಯನ್​ಗಳ ಸಂಯುಕ್ತ ವೇದಿಕೆ ಆರೋಪಿಸಿದೆ.

ಈ ನಿಟ್ಟಿನಲ್ಲಿ ಬ್ಯಾಂಕ್ ಖಾಸಗೀಕರಣದಿಂದ ವಿದೇಶಿ ಬಂಡವಾಳದಾರರು ಹಾಗೂ ಉದ್ಯಮಪತಿಗಳ ಕೈಗೆ ಬ್ಯಾಂಕ್ ಹೋಗಲಿದೆ. ಇದು ದೇಶದ ಭವಿಷ್ಯದ ಆರ್ಥಿಕತೆಗೆ ಮುಳುವಾಗಲಿದೆ. ದೇಶದ ಆರ್ಥಿಕತೆ ಖಾಸಗಿ ಕ್ಷೇತ್ರದ ಹಿಡಿತಕ್ಕೆ ಸಿಲುಕಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬ್ಯಾಂಕ್ ಖಾಸಗೀಕರಣದ ತೀರ್ಮಾನ ನಿಲ್ಲಿಸಬೇಕೆಂದು ಆಗ್ರಹಿಸಿ ಎರಡು ದಿನದ ಮುಷ್ಕರಕ್ಕೆ ಬ್ಯಾಂಕ್‌ ಯೂನಿಯನ್​ಗಳ ಸಂಯುಕ್ತ ವೇದಿಕೆ ಕರೆಕೊಟ್ಟಿದೆ.

ಮೈಸೂರಿನಲ್ಲಿ ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ: ಮೈಸೂರಿನಲ್ಲೂ ಇಂದು ಮತ್ತು ನಾಳೆ ಬ್ಯಾಂಕ್‌ ನೌಕರರಿಂದ ಪ್ರತಿಭಟನೆ ನಡೆಯಲಿದ್ದು, ಬ್ಯಾಂಕ್‌ಗಳ ಖಾಸಗೀಕರಣಗೊಳಿಸುವ ತೀರ್ಮಾನ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ದೇಶವ್ಯಾಪಿ 2 ದಿನಗಳ ಕಾಲ ಮುಷ್ಕರ ನಡೆಯಲಿದೆ. ಮೈಸೂರಿನ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ನಿಟ್ಟಿನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಎಸ್‌ಬಿಐ ನೇತೃತ್ವದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್‌ನಿಂದ ಮೈಸೂರಿನ ಭಾರತೀಯ ಸ್ಟೇಟ್ ಬ್ಯಾಂಕ್ ವಲಯ ಕಛೇರಿ, ಟಿ ಕೆ ಬಡಾವಣೆಯ ಕೆನರಾ ಬ್ಯಾಂಕ್ ವಲಯ ಕಚೇರಿಯಲ್ಲಿ ಹಾಗೂ ನಜರ್​ಬಾದ್​ನ ವಲಯ ಕಚೇರಿಯ ಬಳಿ ಮುಷ್ಕರ ನಡೆಯುತ್ತಿದೆ.

ಹಾಸನದಲ್ಲಿ ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ: ಸಾರ್ವಜನಿಕ ವಲಯದ ಬ್ಯಾಂಕ್​ಗಳ ಖಾಸಗೀಕರಣ ವಿರೋದಿಸಿ ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ಹಾಸನದಲ್ಲೂ ಬ್ಯಾಂಕ್ ಬಂದ್ ಮಾಡಿ ನೌಕರರು ಹೋರಾಟಕ್ಕಿಳಿದಿದ್ದಾರೆ.ಹಾಸನದ ಎಸ್​ಬಿಐ ಮುಖ್ಯಶಾಖೆ ಎದುರು ಬ್ಯಾಂಕ್​ಗಳ ಖಾಸಗೀಕರಣದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು,ಕೇಂದ್ರ ಸರ್ಕಾರ ಖಾಸಗೀಕರಣ ನೀತಿ ಕೈ ಬಿಡಲು ಒತ್ತಾಯ ಮಾಡಿದ್ದಾರೆ.

ಧಾರವಾಡದಲ್ಲಿ ಬ್ಯಾಂಕ್ ನೌಕರರು ಹಾಗೂ ಅಧಿಕಾರಿಗಳ ಪ್ರತಿಭಟನೆ: ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ 2 ದಿನ ಮುಷ್ಕರ ನಡೆಯುತ್ತಿದ್ದು, ಧಾರವಾಡದ ಕಾಲೇಜು ರಸ್ತೆಯ ಎಸ್​ಬಿಐ ಕಚೇರಿ ಬಳಿ ಧರಣಿ ನಡೆಯುತ್ತಿದೆ. ಕೆಲಸ ಬಹಿಷ್ಕರಿಸಿ ನೂರಾರು ಬ್ಯಾಂಕ್ ಸಿಬ್ಬಂದಿಗಳು ಈ ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದಾರೆ.

bank protest

ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಇದನ್ನೂ ಓದಿ: Bank Strike: ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ಇಂದಿನಿಂದ 2 ದಿನ ಮುಷ್ಕರ

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್