ತುಮಕೂರು: ಕ್ರಷರ್ ನಿಲ್ಲಿಸುವಂತೆ ಗ್ರಾಮಸ್ಥರು, ನೂರಾರು ರೈತರಿಂದ ಪ್ರತಿಭಟನೆ
ಯಾವುದೇ ಧನಸಹಾಯ ಸರ್ಕಾರ ಮಾಡಿಲ್ಲ ಎಂದು ಆರೋಪಿಸಲಾಗಿದೆ. ಸರ್ಕಾರದ ಗಮನ ಸೆಳೆಯಲು ಹುಬ್ಬಳ್ಳಿಯಿಂದ ಬೆಂಗಳೂರಿನವರೆಗೂ ಪಾದಯಾತ್ರೆ ಮಾಡಿಕೊಂಡು ಬಂದರುವ ಶಿಕ್ಷಕರು, ಬೇಡಿಕೆ ಈಡೇರಿಕೆಗಾಗಿ ಆಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ನಗರದ ಫ್ರೀಡಂ ಪಾರ್ಕ್‌ನಲ್ಲಿ 1997ರ ಅನುದಾನ ಸಂಹಿತೆಯಂತೆ ಸಿಬ್ಬಂದಿ ವೇತನ ಅನುದಾನ ನೀಡಲು ಒತ್ತಾಯಿಸಿ ಕರ್ನಾಟಕ ರಾಜ್ಯ ಖಾಸಗಿ ಐಟಿಐ ಸಂಘಗಳ ಒಕ್ಕೂಟದಿಂದ ಇಂದು (ಮಾರ್ಚ್ 14) ಪ್ರತಿಭಟನೆ ನಡೆಸಲಾಗಿದೆ. ಸರ್ಕಾರದ ಗಮನ ಸೆಳೆಯಲು ಹುಬ್ಬಳ್ಳಿಯಿಂದ ಬೆಂಗಳೂರಿನವರೆಗೂ ಪಾದಯಾತ್ರೆ ಮಾಡಿಕೊಂಡು ಬಂದಿರುವ ಶಿಕ್ಷಕರು, ಬೇಡಿಕೆ ಈಡೇರುವವರೆಗೆ ಆಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ 200 ಕ್ಕೂ ಹೆಚ್ಚು ಶಿಕ್ಷಕರು ಭಾಗಿ ಆಗಿದ್ದಾರೆ. 2010 ರಲ್ಲಿ ಸರ್ಕಾರ ತಂದಿರುವ ವಿದ್ಯಾರ್ಥಿ ಕೇಂದ್ರೀಕೃತ ಅನುದಾನ ರದ್ದು ಪಡಿಸಲು ಆಗ್ರಹ ವ್ಯಕ್ತವಾಗಿದೆ. 1997ರ ಅನುದಾನ ಸಂಹಿತೆಯಂತೆ ಸಿಬ್ಬಂದಿ ವೇತನ ಅನುದಾನ ನೀಡಲು ಒತ್ತಾಯ ಕೇಳಿಬಂದಿದೆ.
ಸಂಯೋಜನೆ ಹೊಂದಿ 15 ವರ್ಷ ಕಳೆದ್ರೂ ಸಹ ನಮ್ಮ ಶೈಕ್ಷಣಿಕ ಸೇವೆ ಪರಿಗಣಿಸಿಲ್ಲ. ಯಾವುದೇ ಧನಸಹಾಯ ಸರ್ಕಾರ ಮಾಡಿಲ್ಲ ಎಂದು ಆರೋಪಿಸಲಾಗಿದೆ. ಸರ್ಕಾರದ ಗಮನ ಸೆಳೆಯಲು ಹುಬ್ಬಳ್ಳಿಯಿಂದ ಬೆಂಗಳೂರಿನವರೆಗೂ ಪಾದಯಾತ್ರೆ ಮಾಡಿಕೊಂಡು ಬಂದರುವ ಶಿಕ್ಷಕರು, ಬೇಡಿಕೆ ಈಡೇರಿಕೆಗಾಗಿ ಆಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ ನೀಡಿದ್ದಾರೆ.
ತುಮಕೂರು: ಕ್ರಷರ್ ನಿಲ್ಲಿಸುವಂತೆ ಗ್ರಾಮಸ್ಥರಿಂದ ಪ್ರತಿಭಟನೆ
ಕ್ರಷರ್ ನಿಲ್ಲಿಸುವಂತೆ ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಲಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗದ ಹೋಬಳಿಯ ಬಿಸೆಗೌಡನದೊಡ್ಡಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಲಾಗಿದೆ. ನೂರಾರು ರೈತರು ಬೀದಿಯಲ್ಲಿ ಕುಳಿತು ಪ್ರತಿಭಟನೆ ಮಾಡಿದ್ದಾರೆ. ರೈತಸಂಘದ ಜಿಲ್ಲಾಧ್ಯಕ್ಷ ಆನಂದ್ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಕಳೆದ ನಾಲ್ಕು ವರ್ಷಗಳ ಹಿಂದೆ ಆರಂಭವಾದ ಕ್ರಷರ್ ಕಲ್ಲುಗಣಿಗಾರಿಕೆಯಿಂದ ಈ ಭಾಗದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಅರಣ್ಯ ಇಲಾಖೆ, ಕೃಷಿ ಇಲಾಖೆ, ಗಣಿ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಇದರಲ್ಲಿ ಭಾಗಿ ಆಗಿದ್ದಾರೆ ಎಂದು ಆರೋಪಿಸಿ ಇಲಾಖೆ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳಲಾಗಿದೆ. ಕ್ರಷರ್ ನಿಲ್ಲಿಸುವಂತೆ ಹೋರಾಟ ತೀವ್ರಗೊಂಡಿದೆ. ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಿವಮೊಗ್ಗ: ಸಹ್ಯಾದ್ರಿ ಕಾಲೇಜ್ ನಲ್ಲಿ ವಿದ್ಯಾರ್ಥಿನಿಯರಿಂದ ಪ್ರತಿಭಟನೆ
ಇತ್ತ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಂದ ಪ್ರತಿಭಟನೆ ನಡೆಸಲಾಗಿದೆ. ಸಹ್ಯಾದ್ರಿ ವಿಜ್ಞಾನ ವಸತಿ ನಿಲಯದಲ್ಲಿ ಮೊನ್ನೆ ವಿದ್ಯಾರ್ಥಿನಿಯರು ಕಲುಷಿತ ಆಹಾರ ಸೇವನೆ ಮಾಡಿ ಅಸ್ವಸ್ಥಗೊಂಡಿದ್ದರು. 27ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವಸತಿ ನಿಲಯದ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಲಾಗಿದೆ. ವಸತಿ ನಿಯಲದ ಕಲುಷಿತ ನೀರು ಆಹಾರದಿಂದ ಆರೋಗ್ಯದಲ್ಲಿ ಏರುಪೇರು ಎಂದು ಹೇಳಲಾಗಿದೆ. ಆಸ್ಪತ್ರೆಯ ವೆಚ್ಚವನ್ನು ವಸತಿ ನಿಲಯ ಅಧಿಕಾರಿಗಳು ಭರಿಸಿಲ್ಲ. ಹೀಗಾಗಿ ವಸತಿ ನಿಲಯದ ಅವ್ಯವಸ್ಥೆಗೆ ವಿದ್ಯಾರ್ಥಿನಿಯರ ಆಕ್ರೋಶ ಕೇಳಿಬಂದಿದೆ.
ಬೆಳಗಾವಿ: ಎಸ್‌ಟಿಪಿ ಪ್ಲ್ಯಾಂಟ್‌ಗೆ ರೈತರ ವಿರೋಧ
ರಾಷ್ಟ್ರೀಯ ಹೆದ್ದಾರಿ 4ರ ಬಳಿ ಎಸ್‌ಟಿಪಿ ಪ್ಲ್ಯಾಂಟ್‌ಗೆ ರೈತರ ವಿರೋಧ ವ್ಯಕ್ತವಾಗಿದೆ. 1 ಎಕರೆ 4 ಗುಂಟೆ ಜಮೀನು ಸ್ವಾಧೀನಕ್ಕೆ ಮುಂದಾಗಿದ್ದ ಅಧಿಕಾರಿಗಳ ವಿರುದ್ಧ ಕುಟುಂಬ ಸಮೇತರಾಗಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಕೈಯಲ್ಲಿ ಕಟ್ಟಿಗೆ, ಕುಡಗೋಲು, ಪೆಟ್ರೋಲ್ ಕ್ಯಾನ್ ಹಿಡಿದು ಪ್ರತಿಭಟನೆ ನಡೆಸಲಾಗಿದೆ. ಬೆಳಗಾವಿ ಪಾಲಿಕೆ, ಕೆಯುಡಬ್ಲ್ಯುಎಸ್ ಅಧಿಕಾರಿಗಳು, ಪೊಲೀಸರಿಗೆ ಧರಣಿನಿರತರಿಂದ ತರಾಟೆ ತೆಗೆದುಕೊಳ್ಳಲಾಗಿದೆ. ಯಾವುದೇ ಕಾರಣಕ್ಕೂ ನಮ್ಮ ಫಲವತ್ತಾದ ಭೂಮಿ ನೀಡಲ್ಲವೆಂದು ಆಕ್ರೋಶ ಕೇಳಿಬಂದಿದೆ. ಮಾಳಮಾರುತಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಇದನ್ನೂ ಓದಿ: BBMP: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿಬಿಎಂಪಿ ಪೌರ ಕಾರ್ಮಿಕರಿಂದ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ