AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋನ್ ಕದ್ದಾಲಿಕೆ ಪ್ರಕರಣ: ಐಪಿಎಸ್ ಭಾಸ್ಕರ್ ರಾವ್ ಪ್ರೊಟೆಸ್ಟ್ ಪಿಟಿಷನ್, ಕೋರ್ಟ್​ಗೆ ಬಿ ರಿಪೋರ್ಟ್ ಸಲ್ಲಿಸದೆ ವಾಪಸಾದ ಸಿಬಿಐ

ಇಬ್ಬರ ವಿರುದ್ಧ ಸಾಕ್ಷ್ಯವಿದ್ದರೂ ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಅಂತ ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಹಾಗೂ ಪತ್ರಕರ್ತೆ ಕುಶಾಲ ವಿರುದ್ಧ ಭಾಸ್ಕರ್ ರಾವ್ ನೇರ ಆರೋಪ ಮಾಡಿದ್ದಾರೆ.

ಫೋನ್ ಕದ್ದಾಲಿಕೆ ಪ್ರಕರಣ: ಐಪಿಎಸ್ ಭಾಸ್ಕರ್ ರಾವ್ ಪ್ರೊಟೆಸ್ಟ್ ಪಿಟಿಷನ್, ಕೋರ್ಟ್​ಗೆ ಬಿ ರಿಪೋರ್ಟ್ ಸಲ್ಲಿಸದೆ ವಾಪಸಾದ ಸಿಬಿಐ
ಭಾಸ್ಕರ್ ರಾವ್
TV9 Web
| Edited By: |

Updated on:Aug 31, 2021 | 1:55 PM

Share

ಬೆಂಗಳೂರು: ರಾಜಕಾರಣಿಗಳು, ಅಧಿಕಾರಿಗಳ ಫೋನ್ ಕದ್ದಾಲಿಕೆ (Phone Tapping) ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು ಇಂದು ಬಿ ರಿಪೋರ್ಟ್ ಸಲ್ಲಿಕೆಗೆ ಮುಂದಾಗಿದ್ದರು. ಸಿಟಿ ಸಿವಿಲ್ ಕೋರ್ಟ್​ನಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಕೆ ಮಾಡಲು ಸಿಬಿಐ ಅಧಿಕಾರಿಗಳು ಮುಂದಾಗಿದ್ದರು. ಆದರೆ ಈ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ (Bhaskar Rao), ಕೋರ್ಟ್​ಗೆ ಪ್ರೊಟೆಸ್ಟ್ ಪಿಟಿಷನ್ ಸಲ್ಲಿಸಿದ್ದಾರೆ. ಹೀಗಾಗಿ ಬಿ ರಿಪೋರ್ಟ್ ಸಲ್ಲಿಸದೆ ಸಿಬಿಐ ಅಧಿಕಾರಿಗಳು ವಾಪಸ್ ಆಗಿದ್ದಾರೆ.

ಫೋನ್ ಕದ್ದಾಲಿಕೆ ಸಂಬಂಧ ಮತ್ತೊಮ್ಮೆ ತನಿಖೆ ಮಾಡಬೇಕು. ಇಬ್ಬರ ವಿರುದ್ಧ ಸಾಕ್ಷ್ಯವಿದ್ದರೂ ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಅಂತ ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಹಾಗೂ ಪತ್ರಕರ್ತೆ ಕುಶಾಲ ವಿರುದ್ಧ ಭಾಸ್ಕರ್ ರಾವ್ ನೇರ ಆರೋಪ ಮಾಡಿದ್ದಾರೆ.

ಸಿಬಿಐ ತನಿಖೆ ಸರಿಯಾಗಿಲ್ಲ ಎಂದು ಪ್ರೊಟೆಸ್ಟ್ ಅಪ್ಲಿಕೇಶನ್ ಹಾಕಿದ್ದೇವೆ. ಅಲೋಕ್ ಕುಮಾರ್ ಹಾಗು ಕುಶಾಲ ವಿರುದ್ಧ ಸಾಕ್ಷಿ ಇದೆ. ಅದರೂ ಕೇಸ್​ಗೆ ಬಿ ರಿಪೋರ್ಟ್ ಸಲ್ಲಿಕೆ ಮುಂದಾಗಿದ್ದು ಸರಿಯಲ್ಲ. ಲಾಭಿ ಮಾಡಿದ್ದೀನಿ ಎಂದು ಅರೋಪಿಸಲಾದ ಆಡಿಯೋ ಹೊರಗೆ ಬಂದಿತ್ತು. ಸರ್ಕಾರ ಕೇಸ್​ನ ಸಿಬಿಐಗೆ ವರ್ಗಾವಣೆ ಮಾಡಿತ್ತು. ಕುಲ್ದೀಪ್ ಕುಮಾರ್ ಜೈನ್ ದೂರುದಾರಾಗಿದ್ರು.  ಈಗ ಕುಲ್ದೀಪ್ ಜೈನ್ ಕೇಸ್ ಬಿ ರಿಪೋರ್ಟ್ ಸಲ್ಲಿಕೆಗೆ ಯಾವುದೇ  ಅಭ್ಯಂತರ ಇಲ್ಲಾ ಎಂದು ಹೇಳಿಕೆ ನೀಡಿದ್ದಾರೆ. ಅದ್ರೆ ಇದು ಕಲ್ದೀಪ್ ಕುಮಾರ್ ಜೈನ್ ಕೇಸ್ ಅಲ್ಲ. ಸರ್ಕಾರದ ಕೇಸ್. ನ್ಯಾಯ ಸಿಗಬೇಕು. ಸಿಬಿಐ ಹಾಗು ಕಾನೂನು ನ್ಯಾಯಾಲಯದ ಮೇಲೆ ನಂಬಿಕೆ ಇದೆ ಅಂತ ಕುಲ್ದೀಪ್ ಕುಮಾರ್ ಜೈನ್ ಅಭಿಪ್ರಾಯಟಪಟ್ಟರು.

ಪ್ರಕರಣವೇನು? 2019ರ ಹೊತ್ತಿಗೆ ರಾಜಕೀಯ ವಲಯದಲ್ಲಿ ಫೋನ್ ಕದ್ದಾಲಿಕೆ ಪ್ರಕರಣ ತೀವ್ರ ಸಂಚಲಕ್ಕೆ ಕಾರಣವಾಗಿತ್ತು. ಈ ಪ್ರಕರಣವನ್ನು ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ವಹಿಸಿತ್ತು. ಹೆಚ್.ಡಿ.ಕುಮಾರಸ್ವಾಮಿ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಫೋನ್ ಕದ್ದಾಲಿಕೆ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಮೈತ್ರಿ ಸರ್ಕಾರದ ವೇಳೆ ಪಕ್ಷಗಳ ಮುಖಂಡರು, ಮಾಧ್ಯಮ ಪ್ರತಿನಿಧಿಗಳು, ಐಪಿಎಸ್ ಅಧಿಕಾರಿಗಳು ಸೇರಿದಂತೆ 300ಕ್ಕೂ ಹೆಚ್ಚು ಜನರ ಫೋನ್​ಗಳನ್ನ ಟ್ಯಾಪ್ ಮಾಡಲಾಗಿದೆ. ಎಲ್ಲರ ಮಾತುಗಳನ್ನು ಕದ್ದಾಲಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.

ಕಾಂಗ್ರೆಸ್ ನಾಯಕರ ದೂರವಾಣಿ ಕದ್ದಾಲಿಕೆ ಆರೋಪ 2018ರ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿತ್ತು. ಬಿಜೆಪಿ 104, ಕಾಂಗ್ರೆಸ್ 86, ಜೆಡಿಎಸ್​ಗೆ 36 ಸ್ಥಾನ ಬಂದಿತ್ತು. ರಾಜ್ಯಪಾಲರು ಸರ್ಕಾರ ರಚಿಸಲು ಯಡಿಯೂರಪ್ಪಗೆ ಆಹ್ವಾನ ನೀಡಲಾಗಿತ್ತು. ಆದರೆ ಯಡಿಯೂರಪ್ಪ ಬಹುಮತ ಸಾಬೀತುಪಡಿಸಲಾಗಲಿಲ್ಲ. ಬಳಿಕ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾಯಿತು. ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದರು. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಜೆಡಿಎಸ್​ಗೆ ಬೆಂಬಲ ನೀಡಿದ್ದೆವು. ಇದಕ್ಕೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಕೈಜೋಡಿಸಿತು. 2019ರ ಜುಲೈನಲ್ಲಿ 17 ಶಾಸಕರು ರಾಜೀನಾಮೆ ನೀಡಿದರು. ಯಾರೂ ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡಿರಲಿಲ್ಲ. ಆ ಶಾಸಕರು ಕುಮಾರಸ್ವಾಮಿ ಸರ್ಕಾರ ಪತನಗೊಳಿಸಿ ಬಿಜೆಪಿ ಸೇರಿದರು. ಇದಕ್ಕೆ ಬಿಜೆಪಿಯೇ ಕಾರಣ ಎಂಬ ಆರೋಪಗಳು ಕೇಳಿಬಂದಿತ್ತು.

ಇದನ್ನೂ ಓದಿ

ಮೈತ್ರಿ ಸರ್ಕಾರದ ಪತನಕ್ಕೆ ಫೋನ್ ಕದ್ದಾಲಿಕೆ ಕಾರಣ: ಮಾಜಿ ಡಿಸಿಎಂ ಪರಮೇಶ್ವರ ಸಿದ್ದರಾಮಯ್ಯ, ಕುಮಾರಸ್ವಾಮಿ ಆಪ್ತ ಸಹಾಯಕರು ಮತ್ತು ದೇವೇಗೌಡರ ಗನ್ ಮ್ಯಾನ್ ಫೋನ್ ಕದ್ದಾಲಿಕೆ ಮಾಡಲಾಗಿದೆ: ಕಾಂಗ್ರೆಸ್ ಗಂಭೀರ ಆರೋಪ

(Protest petition filed by IPS officer Bhaskar Rao about Phone Tapping)

Published On - 1:08 pm, Tue, 31 August 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ