ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಮುಂದುವರಿದ ಪ್ರತಿಭಟನೆ: ಬಿಜೆಪಿ ಸದಸ್ಯರಿಗೆ ಖಡಕ್​​ ವಾರ್ನಿಂಗ್​​ ಕೊಟ್ಟ ಸಭಾಪತಿ ಸಲೀಂ ಅಹ್ಮದ್​

ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಮುಂದುವರಿಸಿದೆ. ಈ ವೇಳೆ ಸಭಾಪತಿ ಸಲೀಂ ಅಹ್ಮದ್ ಕಲಾಪಕ್ಕೆ ಅಡ್ಡಿಪಡಿಸಿದ ವಿಪಕ್ಷ ಸದಸ್ಯರಿಗೆ ಹಾಗೂ ತಡವಾಗಿ ಬರುವ ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಆ ಕುರಿತ ಮಾಹಿತಿ ಇಲ್ಲಿದೆ.

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಮುಂದುವರಿದ ಪ್ರತಿಭಟನೆ: ಬಿಜೆಪಿ ಸದಸ್ಯರಿಗೆ ಖಡಕ್​​ ವಾರ್ನಿಂಗ್​​ ಕೊಟ್ಟ ಸಭಾಪತಿ ಸಲೀಂ ಅಹ್ಮದ್​
ವಿಧಾನ ಪರಿಷತ್​​ (ಸಾಂದರ್ಭಿಕ ಚಿತ್ರ)
Image Credit source: PTI
Edited By:

Updated on: Aug 24, 2026 | 12:12 PM

ಮುಖ್ಯಾಂಶಗಳು

  • ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
  • ವಿಧಾನ ಪರಿಷತ್​​ನಲ್ಲಿ ಮುಂದುವರಿದ ವಿಪಕ್ಷಗಳ ಹೋರಾಟ
  • ಸದಸ್ಯರಿಗೆ ಸಭಾಪತಿ ಸಲೀಂ ಅಹ್ಮದ್​​ರಿಂದ ಖಡಕ್​​ ವಾರ್ನಿಂಗ್

ಬೆಂಗಳೂರು, ಆಗಸ್ಟ್​​ 24: ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನ ಪರಿಷತ್​​ನಲ್ಲಿ ಇಂದು ಕೂಡ ಬಿಜೆಪಿ ಪ್ರತಿಭಟನೆ ಮುಂದುವರಿಸಿದೆ. ವಿಧಾನಪರಿಷತ್​ ಕಲಾಪ ಆರಂಭವಾಗ್ತಿದ್ದಂತೆ ವಿಪಕ್ಷದ ಹೋರಾಟ ಆರಂಭವಾದ ಕಾರಣ, ಕೈ ಮುಗಿದು ಕೋರಿಕೊಳ್ಳುತ್ತೇನೆ, ಗಲಾಟೆ ನಿಲ್ಲಿಸಿ ಎಂದು ಸಭಾಪತಿ ಸಲೀಂ ಅಹ್ಮದ್ ಮನವಿ ಮಾಡಿದ್ದಾರೆ. ಬಳಿಕ ಸ್ವಲ್ಪ ಗರಂ ಆದ ಸಭಾಪತಿಗಳು, ನನ್ನ ಸೌಮ್ಯ ಸ್ವಭಾವ ನನ್ನ ದೌರ್ಬಲ್ಯ ಅಲ್ಲ. ಆರು ದಿನಗಳಿಂದ ಸದನ ಹಾಳಾಗ್ತಿದೆ, ಕ್ರಮ ಕೈಗೊಳ್ಳಬೇಕಾಗುತ್ತೆ ಎಂದು ಖಡಕ್​​ ಎಚ್ಚರಿಕೆ ನೀಡಿ ಪ್ರಶ್ನೋತ್ತರ ಕಲಾಪ ಪ್ರಾರಂಭಿಸಿದ್ದಾರೆ.

ಸಚಿವರ ಗೈರು ಹಾಜರಿ ಬಗ್ಗೆಯೂ ಸಭಾಪತಿ ಸಲೀಂ ಎಚ್ಚರಿಕೆ ನೀಡಿದ್ದು, ಸಚಿವರಿಗೆ ಕಾಯುವುದಲ್ಲ. ಸಚಿವರು ಬಂದು ಸದನಕ್ಕಾಗಿ ಕಾಯಬೇಕು. ನೀವು ಸರಿಯಾದ ಸಮಯಕ್ಕೆ ಬರಬೇಕು, ಇದು ನಮ್ಮ ಎಚ್ಚರಿಕೆ. ಟೈಮ್​ಗೂ ಅರ್ಧ ಗಂಟೆ ಮೊದಲೇ ಸಚಿವರು ಬಂದು ಕಾಯಬೇಕು ಎಂದು ವಿಪಕ್ಷಗಳ ಗದ್ದಲದ ನಡುವೆಯೇ ಸಭಾಪತಿಗಳು ಖಡಕ್​​ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ: ವಿಕಾಸಸೌಧದ ಗೇಟ್​ ಬಳಿ ಭಾರಿ ಹೈಡ್ರಾಮಾ

ಸಭಾ ನಾಯಕರಿಗೆ ಎಂಎಲ್ಸಿಗಳ ಪತ್ರ

ಮತ್ತೊಂದೆಡೆ ವಿರೋಧ ಪಕ್ಷದ ಸದಸ್ಯರುಗಳನ್ನು ನಿಯಮ 327(1)(2)ರ ರೀತ್ಯಾ ಸದನದಿಂದ ಹೊರ ಹಾಕುವ ಪ್ರಸ್ತಾವವನ್ನು ಮಂಡಿಸಬೇಕಾಗಿ ಆಗ್ರಹಿಸಿ ಸಭಾ ನಾಯಕರಿಗೆ ಎಂಎಲ್ಸಿಗಳು ಪತ್ರ ಬರೆದಿದ್ದಾರೆ. ಅಧಿವೇಶನದಲ್ಲಿ ಶಾಸಕರುಗಳಾಗಿ ರಾಜ್ಯದ ನಾಗರೀಕರ ಹಾಗೂ ರೈತರ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕು . ಸರಕಾರದಿಂದ ಸೂಕ್ತ ಉತ್ತರ ಪಡೆಯಬೇಕಾಗಿರುವುದು ಸದನದ ಎಲ್ಲಾ ಸದಸ್ಯರ ಆದ್ಯ ಕರ್ತವ್ಯವಾಗಿರುತ್ತದೆ. ಭೀಕರ ಬರಗಾಲ ಪರಿಸ್ಥಿತಿಯಿಂದ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕಾಗಿರುವುದು ತುಂಬಾ ಅತ್ಯವಶ್ಯಕ. ಆದರೆ ಕಳೆದ ಒಂದುವಾರದಿಂದ ವಿರೋಧ ಪಕ್ಷದ ಸದಸ್ಯರುಗಳು ಈ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಾಧ್ಯವಾಗತದಂಹ ಸನ್ನಿವೇಶವನ್ನು ಸೃಷ್ಟಿಸಿದ್ದಾರೆ. ಸದನದಲ್ಲಿ ನಿರಂತರವಾಗಿ ಗದ್ದಲ ಮತ್ತು ಧಿಕ್ಕಾರಗಳನ್ನು ಕೂಗುವುದರ ಮೂಲಕ ನಾವು ಸದನದಲ್ಲಿ ಕರ್ತವ್ಯ ನಿರ್ವಹಿಸಲು ಆಗದಂತಹ ಪರಿಸ್ಥಿತಿಯನ್ನು ಉಂಟುಮಾಡಿರುತ್ತಾರೆ. ಹೀಗಾಗಿ ವಿರೋಧ ಪಕ್ಷದ ಸದಸ್ಯರುಗಳನ್ನುಸದನದಿಂದ ಹೊರ ಹಾಕುವ ಪ್ರಸ್ತಾವವನ್ನು ಮಂಡಿಸಬೇಕಾಗಿ ತಮ್ಮಲ್ಲಿ ಕೋರುತ್ತೇವೆ ಎಂದು ಪತ್ರ ಮುಖೇನ ಆಗ್ರಹಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Loading...
Unable to load recommendations.
Follow Us