ಪಿಎಸ್ಐಗೆ ಆಯ್ಕೆಯಾದರೂ ಇನ್ನೂ ನೇಮಕವಾಗದ ಹಿನ್ನೆಲೆ ಸಿಎಂ ಭೇಟಿಗೆ PSIಗೆ ಆಯ್ಕೆಯಾದ ಅಭ್ಯರ್ಥಿಗಳ ಆಗಮನ

ಪಿಎಸ್ಐಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನ ಆರ್.ಟಿ.ನಗರದ ನಿವಾಸದ ಬಳಿ ಜಮಾಯಿಸಿದ್ದಾರೆ. PSIಗೆ ನೇಮಕಾತಿ ಮಾಡುವಂತೆ ಸಿಎಂ ಬಳಿ ಮನವಿ ಮಾಡಲು ಆಗಮಿಸಿದ್ದಾರೆ.

ಪಿಎಸ್ಐಗೆ ಆಯ್ಕೆಯಾದರೂ ಇನ್ನೂ ನೇಮಕವಾಗದ ಹಿನ್ನೆಲೆ ಸಿಎಂ ಭೇಟಿಗೆ PSIಗೆ ಆಯ್ಕೆಯಾದ ಅಭ್ಯರ್ಥಿಗಳ ಆಗಮನ
ಸಿಎಂ ಬೊಮ್ಮಾಯಿ
Follow us
TV9 Web
| Updated By: ಆಯೇಷಾ ಬಾನು

Updated on: Apr 11, 2022 | 9:58 AM

ಬೆಂಗಳೂರು: ಪಿಎಸ್ಐಗೆ ಆಯ್ಕೆಯಾದರೂ ಇನ್ನೂ ನೇಮಕವಾಗದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಗೆ PSIಗೆ ಆಯ್ಕೆಯಾದ ಅಭ್ಯರ್ಥಿಗಳು ಆಗಮಿಸಿದ್ದಾರೆ. ಪಿಎಸ್ಐಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನ ಆರ್.ಟಿ.ನಗರದ ನಿವಾಸದ ಬಳಿ ಜಮಾಯಿಸಿದ್ದಾರೆ. PSIಗೆ ನೇಮಕಾತಿ ಮಾಡುವಂತೆ ಸಿಎಂ ಬಳಿ ಮನವಿ ಮಾಡಲು ಆಗಮಿಸಿದ್ದಾರೆ. 545 ಪಿಎಸ್ಐ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ನಡೆದಿತ್ತು. ಆಯ್ಕೆಯಾಗಿ 3 ತಿಂಗಳಾದರೂ ನೇಮಕವಾಗದ ಹಿನ್ನೆಲೆ ನೇಮಕಾತಿಗಾಗಿ ಮನವಿ ಮಾಡಲು ಅಭ್ಯರ್ಥಿಗಳು ಸಿಎಂ ನಿವಾಸದ ಬಳಿ ಬಂದು ಜಮಾಯಿಸಿದ್ದಾರೆ. 545 ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿ ಬಂದಿದ್ದು ಈಗಾಗಲೇ ಈ ಸಂಬಂಧ ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ.

ವಿರೇಶ್ ಎಂಬ ವಿದ್ಯಾರ್ಥಿ ವಶ 545 ಪಿಎಸ್ಐ ನೇಮಕಾತಿಯಲ್ಲಿ ಭಾರಿ ಅಕ್ರಮ ಹಿನ್ನಲೆ ಅಕ್ರಮದ ಬಗ್ಗೆ ಸಿಐಡಿ ಪೊಲೀಸರು ತನಿಖೆ‌ ನಡೆಸುತ್ತಿದ್ದಾರೆ. ವಿರೇಶ್ ಎಂಬ ವಿದ್ಯಾರ್ಥಿಯನ್ನ ವಶಕ್ಕೆ ಪಡೆಯಲಾಗಿದೆ. ವಿರೇಶ್ ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ ನಿವಾಸಿ. ವಿರೇಶ್ ತಂದೆ ಸೇಡಂ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವಿರೇಶ್ ಈ ಹಿಂದೆ ಮೂರು ಬಾರಿ ಪಿಎಸ್​ಐ ಪರೀಕ್ಷೆ ಬರೆದಿದ್ದ. ಆದ್ರೆ ಮೂರು ಬಾರಿಯೂ ಫೇಲ್ ಆಗಿದ್ದ. ವಿರೇಶ್ ವಯಸ್ಸು ಮೀರಿ ಹೋಗುತ್ತೆ ಅನ್ನೋದಕ್ಕೆ ಅಕ್ರಮವಾಗಿ ನೇಮಕಾತಿ ಪಡೆಯಲು ಮುಂದಾಗಿದ್ದನಂತೆ. ಕಳೆದ ವರ್ಷ ಕಲಬುರಗಿಯ ಜ್ಞಾನ ಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲೆಯ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದ ವಿರೇಶ್, 20 ಪ್ರಶ್ನೆಗಳಿಗೆ ಉತ್ತರ ಬರೆದಿದ್ದ ವಿರೇಶ್ 121 ಮಾರ್ಕ್ ಬಂದಿದ್ದ ಹಿನ್ನಲೆ ಅನುಮಾನ ವ್ಯಕ್ತವಾಗಿದೆ. ಜ್ಞಾನ ಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲೆ ಬಿಜೆಪಿ ಮುಖಂಡರಿಗೆ ಸೇರಿದ ಶಾಲೆ ಆಗಿದ್ದು ವಿರೇಶ್ ಜೊತೆಗೆ ಇನ್ನೂ ಹಲವು ವಿದ್ಯಾರ್ಥಿಗಳು ಅಕ್ರಮದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಸಿಐಡಿ ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ. ಮಹಿಳಾ, ಪುರುಷ ಅಭ್ಯರ್ಥಿಗಳು ಕೂಡ ಅಕ್ರಮದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಪಿಎಸ್ಐ ಅಕ್ರಮ ನೇಮಕಾತಿಯಲ್ಲಿ ಹಲವು ಪೊಲೀಸ್ ಅಧಿಕಾರಿಗಳು, ಪರೀಕ್ಷಾ ಕೊಠಡಿಯ ಮೇಲ್ವಿಚಾರಕರು ಸೇರಿದಂತೆ ಹಲವರು ಭಾಗಿಯಾಗಿರುವ ಶಂಕೆ ಇದೆ?

ಇನ್ನು ಮತ್ತೊಂದೆಡೆ ಹೊರಗುತ್ತಿಗೆ ಆಧಾರ ಮೇಲೆ ಆರೋಗ್ಯ ಸಿಬ್ಬಂದಿಗಳ ನೇಮಕ ಹಿನ್ನೆಲೆ ಮರು ನೇಮಕ ಮಾಡುವಂತೆ ಆರೋಗ್ಯ ಸಿಬ್ಬಂದಿ ಸಿಎಂ ಭೇಟಿಗೆ ಆಗಮಿಸಿದ್ದಾರೆ. ಆರ್ಟಿ ನಗರ ನಿವಾಸದ ಬಳಿ ಆಗಮಿಸಿದ್ದಾರೆ. ಸರ್ಕಾರ ಕೊವಿಡ್ ಸಮಯದಲ್ಲಿ ಕೊರೊನಾ ವಾರಿಯಾರ್ಸ್ ಗಳಾಗಿ ಸೇವೆಗೆ ಬಳಸಿಕೊಂಡಿತ್ತು. ಆದರೆ ಈಗ ಕರ್ತವ್ಯದಿಂದ ಏಕಾ ಏಕಿ ತೆಗೆದು ಹಾಕಿದೆ. ಹೀಗಾಗಿ ಮತ್ತೆ ಮರು ನೇಮಕಾತಿ ಮಾಡುವಂತೆ ಸಿಎಂ ಬೊಮ್ಮಾಯಿ ಬಳಿ ಮನವಿ ಮಾಡಲು ಸಿಬ್ಬಂದಿ ಆಗಮಿಸಿದ್ದಾರೆ. ಕಳೆದ ಹಲವು ದಿನಗಳಿಂದಲೂ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಮಾಡಿದ್ದರೂ ಏನೂ ಪ್ರಯೋಜನವಾಗಿರಲಿಲ್ಲ. ಹೀಗಾಗಿ ಸಿಬ್ಬಂದಿ ಸಿಎಂ ಭೇಟಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ: ನಿನ್ನೆ ಬಸವರಾಜ್‌ ದಡೇಸಗೂರು ಇಂದು ಶಿವರಾಜ್ ತಂಗಡಗಿ; ಕೊಪ್ಪಳದಲ್ಲಿ ಹನುಮ ಮಾಲೆ ಪಾಲಿಟಿಕ್ಸ್, ಯಾರ ಕೈ ಹಿಡಿಯುತ್ತಾನೆ ಆಂಜನೇಯ?

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್