ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಹಿನ್ನೆಲೆ ಪರೀಕ್ಷೆ ರದ್ದು ಪ್ರಶ್ನಿಸಿ ಕೆಎಟಿ ಮೊರೆ ಹೋದ ಅಭ್ಯರ್ಥಿಗಳು

ಪವಿತ್ರ ಸೇರಿ 28 ಅಭ್ಯರ್ಥಿಗಳು ಕೆಎಟಿಗೆ ಮೊರೆ ಹೋಗಿದ್ದು ಸರ್ಕಾರದ ಆದೇಶ ರದ್ದುಪಡಿಸಲು ಮನವಿ ಮಾಡಿದ್ದಾರೆ. ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಬೇಕು. ಕಳಂಕಿತರಲ್ಲದವರಿಗೆ ನೇಮಕಾತಿ ಆದೇಶ ನೀಡಬೇಕು ಎಂದಿದ್ದಾರೆ.

ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಹಿನ್ನೆಲೆ ಪರೀಕ್ಷೆ ರದ್ದು ಪ್ರಶ್ನಿಸಿ ಕೆಎಟಿ ಮೊರೆ ಹೋದ ಅಭ್ಯರ್ಥಿಗಳು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:May 04, 2022 | 12:38 PM

ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಹಿನ್ನೆಲೆ ಪರೀಕ್ಷೆ ರದ್ದು ಪ್ರಶ್ನಿಸಿ ಪಿಎಸ್ಐ ಅಭ್ಯರ್ಥಿಗಳು ಕೆಎಟಿ ಮೊರೆ ಹೋಗಿದ್ದಾರೆ. ಅಭ್ಯರ್ಥಿಗಳು ಪವಿತ್ರ ಸೇರಿ 28 ಅಭ್ಯರ್ಥಿಗಳು ಕೆಎಟಿಗೆ ಮೊರೆ ಹೋಗಿದ್ದು ಸರ್ಕಾರದ ಆದೇಶ ರದ್ದುಪಡಿಸಲು ಮನವಿ ಮಾಡಿದ್ದಾರೆ. ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಬೇಕು. ಕಳಂಕಿತರಲ್ಲದವರಿಗೆ ನೇಮಕಾತಿ ಆದೇಶ ನೀಡಬೇಕು. ಮರುಪರೀಕ್ಷೆ ನಡೆಸುವ ಸರ್ಕಾರದ ಆದೇಶಕ್ಕೆ ತಡೆ ನೀಡಲು ಮನವಿ ಮಾಡಿಕೊಂಡಿದ್ದಾರೆ.

ಪಿಎಸ್​ಐ ಹುದ್ದೆಗೆ ಮರು ಪರೀಕ್ಷೆ ಬೆಂಗಳೂರು: ಕರ್ನಾಟಕದಲ್ಲಿ ಪಿಎಸ್​ಐ ಹುದ್ದೆಗೆ  (PSI Recruitment Scam) ಮರು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Home Minister Araga Jnanendra) ಹೇಳಿದರು. ಈ ಹಿಂದೆ ನಡೆದಿದ್ದ ಪಿಎಸ್‌ಐ ಪರೀಕ್ಷೆ ಫಲಿತಾಂಶವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಶುಕ್ರವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಸುದ್ದಿಗೋಷ್ಠಿ ನಡೆಸಿದರು. ಬೆಂಗಳೂರಿನ ಕೇಂದ್ರದಲ್ಲೂ ಅಕ್ರಮದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಮರು ಪರೀಕ್ಷೆಗೆ ನಿರ್ಧರಿಸಲಾಗಿದೆ. ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಮರು ಪರೀಕ್ಷೆ ನಡೆಸಲಾಗುವುದು. ಆರೋಪಿಗಳಿಗೆ ಮರು ಪರೀಕ್ಷೆಯಲ್ಲಿ ಅವಕಾಶ ಸಿಗುವುದಿಲ್ಲ. ಶೀಘ್ರವೇ ಮರು ಪರೀಕ್ಷೆ ದಿನಾಂಕ ಪ್ರಕಟಿಸುತ್ತೇವೆ ಎಂದು ಹೇಳಿದರು.

ಮರು ಪರೀಕ್ಷೆ ದಿನಾಂಕವನ್ನು ಶೀಘ್ರ ಪ್ರಕಟಿಸುತ್ತೇವೆ ಎಂದ ಆರಗ ಜ್ಞಾನೇಂದ್ರ, ಸರ್ಕಾರದ ಪರೀಕ್ಷೆಗಳಲ್ಲಿ ಅವ್ಯವಹಾರ ತಡೆಗಟ್ಟಲು ಕಠಿಣ ಕಾಯ್ದೆ ರೂಪಿಸಲು ಮುಂದಾಗಿದ್ದೇವೆ. ಈ ಕುರಿತ ವಿವರಗಳನ್ನು ತಿಳಸುತ್ತೇನೆ.

ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವವರ ವಿರುದ್ಧ ಮಾತ್ರ ಕ್ರಮ ಜರುಗಿಸಬೇಕು. ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ಅನ್ಯಾಯವಾಗಬಾರದು ಎಂಬ ಮಾತು ಬಿಜೆಪಿ ವಲಯದಿಂದಲೇ ಕೇಳಿ ಬರುತ್ತಿದೆ. ಈ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಉತ್ತರ ಪತ್ರಿಕೆಯನ್ನು ಲ್ಯಾಬ್‌ಗೆ ಕಳುಹಿಸಿ ಪರೀಕ್ಷೆ ಮಾಡಿಸಿ. ಅದರಲ್ಲಿ ಉತ್ತರ ಯಾವಾಗ ಬರೆದರು ಅನ್ನೋ ಸತ್ಯ ಗೊತ್ತಾಗಲಿದೆ. ಅಕ್ರಮದಲ್ಲಿ ಭಾಗಿಯಾದವರು ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಯಾವ ಪಕ್ಷದವರೇ ಇರಲಿ. ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದರು.

ಕಷ್ಟಪಟ್ಟು ಓದುವವರ ಆತ್ಮವಿಶ್ವಾಸವನ್ನ ಎಂದಿಗೂ ಕುಗ್ಗಿಸಬಾರದು. ಪರೀಕ್ಷೆಗಳು ಪಾರದರ್ಶಕವಾಗಿರಬೇಕು. 50 ಲಕ್ಷ ಕೊಟ್ಟು ಪಿಎಸ್‌ಐ ಆದವರು ಯಾವ ರೀತಿ ಕೆಲಸ ಮಾಡಬಹುದು? ಮೊದಲ ದಿನದಿಂದಲೇ ಲಂಚದ ಅಂಗಡಿ ತೆರೆಯುತ್ತಾರೆ. ಈಗಾಗಲೇ ಮಿನಿಟ್‌ಗೆ ಮತ್ತೊಂದಕ್ಕೆ ಲಂಚ ಇದೆ. ಇದರಿಂದ ಜನ ಸಾಮಾನ್ಯರಾಗಿ ನ್ಯಾಯ ಹೇಗೆ ಕೊಡುತ್ತಾರೆ. ಪರೀಕ್ಷಾ ಅಕ್ರಮದ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಪಿಎಸ್​ಐ ಹುದ್ದೆಗೆ ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧಾರ: ಆರಗ ಜ್ಞಾನೇಂದ್ರ

Published On - 12:38 pm, Wed, 4 May 22

Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್