AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್​ಐ ಪರೀಕ್ಷೆಯಲ್ಲಿ ಅಕ್ರಮ: ಬ್ಲೂಟೂತ್​ ಮೂಲಕ ಉತ್ತರ ಹೇಳಿಕೊಟ್ಟವರು ಸಿಐಡಿ ಬಲೆಗೆ

PSI recruitment scam: 545 ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿದೆ. ಪರೀಕ್ಷಾ ಅಭ್ಯರ್ಥಿಗಳಿಗೆ ಬ್ಲೂಟೂತ್​ ಮೂಲಕ ಉತ್ತರ ಹೇಳಿಕೊಟ್ಟಿದ್ದ ಪ್ರಮುಖ ಆರೋಪಿಗಳು ಇದೀಗ ಸಿಐಡಿ ಬಲೆ ಬಿದ್ದಿದ್ದಾರೆ.

ಪಿಎಸ್​ಐ ಪರೀಕ್ಷೆಯಲ್ಲಿ ಅಕ್ರಮ: ಬ್ಲೂಟೂತ್​ ಮೂಲಕ ಉತ್ತರ ಹೇಳಿಕೊಟ್ಟವರು ಸಿಐಡಿ ಬಲೆಗೆ
TV9 Web
| Edited By: |

Updated on:Feb 17, 2024 | 11:03 PM

Share

ಬೆಂಗಳೂರು, (ಫೆಬ್ರವರಿ 17): 545 ಪಿಎಸ್ಐ ಅಕ್ರಮ ನೇಮಕಾತಿ (PSI recruitment scam) ಪ್ರಕರಣದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿದೆ. ಎಫ್​ಡಿಎ ಅಧಿಕಾರಿ ಚಂದ್ರಕಾಂತ್, ಬಾಲಕ ವಸತಿ ನಿಲಯ ವಾರ್ಡನ್ ಬಸವರಾಜ್ ಹಾಗೂ ಶಶಿಧರ್ ಎನ್ನುವರನ್ನು ಬಂಧಿಸಿದ್ದಾರೆ. ಈ ಮೂವರು ಅಭ್ಯರ್ಥಿಗಳಿಗೆ ಬ್ಲೂಟೂತ್ ಮೂಲಕ ಉತ್ತರ ಹೇಳಿಕೊಟ್ಟಿದ್ದರು ಎಂದು ತಿಳಿದುಬಂದಿದೆ. ಇನ್ನು ಈ ಪಿಎಸ್​ಐ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಸಿದಂತೆ ಕಲಬುರಗಿಯ ಅಶೋಕ್ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಜ್ಯದಲ್ಲಿ ನಡೆದ 545 ಪಿಎಸ್​ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣ ಸಂಬಂಧ ತನಿಖೆಗೆ ಸರ್ಕಾರವು ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅದರಂತೆ ತನಿಖೆ ನಡೆಸಿರುವ ಸಮಿತಿಯು ಜ.22 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನಿಖಾ ವರದಿಯನ್ನು ನೀಡಿದೆ.

ಇದನ್ನೂ ಓದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಸೇರಿದ 545 ಪಿಎಸ್​ಐ ನೇಮಕಾತಿ ಅಕ್ರಮದ ತನಿಖಾ ವರದಿ

545 ಪಿಎಸ್​ಐ ನೇಮಕಾತಿ ಹಗರಣದ ಹಿನ್ನೆಲೆ

545 ಪಿಎಸ್​ಐ ಹುದ್ದೆಗಳ ಭರ್ತಿಗಾಗಿ ಕಳೆದ ವರ್ಷದ ಅಕ್ಟೋಬರ್ 3 ರಂದು ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿನ 93 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಹುದ್ದೆಗಳನ್ನು ಅಕ್ರಮವಾಗಿ ಗಿಟ್ಟಿಸಿಕೊಳ್ಳಲು ಹಣ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಪರೀಕ್ಷಾ ಹಗರಣದಲ್ಲಿ ಹಣದ ಹೊಳೆಯೇ ಹರಿದಿರುವುದು ದೃಢವಾಗಿತ್ತು.

ಪ್ರಕರಣದ ಗಂಭೀರತೆಯನ್ನು ಅರಿತು ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತು. 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಹಿನ್ನೆಲೆ ಪಿಎಸ್ಐ ನೇಮಕಾತಿ ವಿಭಾಗದಲ್ಲಿ ಅಧಿಕಾರಿಗಳಿಗಿಂತ ಬ್ರೋಕರ್​ಗಳಿಗೂ ಹಣದ ಹೊಳೆ ಹರಿದಿತ್ತು. ಬ್ರೋಕರ್​ಗಳ ಹಂತದಲ್ಲಿಯೂ ಕನಿಷ್ಠ 10 ಲಕ್ಷ, ನೇಮಕಾತಿ ವಿಭಾಗದ ಅಧಿಕಾರಿಗೆ ಮೂವತ್ತರಿಂದ ಮೂವತ್ತೈದು ಲಕ್ಷ ತಲುಪುತ್ತಿತ್ತು ಎಂಬ ಅಂಶ ತಿಳಿದುಬಂದಿತ್ತು.

ಹಗರಣಕ್ಕೆ ಸಂಬಂಧಿಸಿದಂತೆ 110 ಜನರನ್ನು ಬಂಧಿಸಲಾಗಿತ್ತು. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ ಶ್ರೇಣಿಯ ಐಪಿಎಸ್ ಅಮೃತ್ ಪಾಲ್​ರನ್ನು ಬಂಧಿಸಲಾಗಿತ್ತು. ಸಾಕ್ಷ್ಯಾಧಾರ ಸಿಕ್ಕಿದ್ದರಿಂದ ಅಮೃತ್ ಪಾಲ್ ಬಂಧಿಸಲಾಗಿದೆ ಎಂದು ಅಂದಿನ ಗೃಹ ಸಚಿವ ಆರಗ ಜ್ಞಾನೇಂದ್ರ ಈ ಹಿಂದೆ ತಿಳಿಸಿದ್ದರು.

Published On - 11:00 pm, Sat, 17 February 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್